ಡಾ.ಪುನೀತ್ ರಾಜ್ ಕುಮಾರ್ ಹೃದಯ ಜ್ಯೋತಿ ಯೋಜನೆ ಈ ವರ್ಷ ರಾಜ್ಯಾದ್ಯಂತ ವಿಸ್ತರಣೆ: ಸಚಿವ ದಿನೇಶ್ ಗುಂಡೂರಾವ್

Picture of Savistara

Savistara

Bureau Report

ಪುನೀತ್​ ರಾಜ್​ಕುಮಾರ್ ಹೃದಯ ಜ್ಯೋತಿ ಯೋಜನೆಯನ್ನು ವಿಸ್ತರಿಸುವ ಮೂಲಕ ರಾಜ್ಯದ ಜಿಲ್ಲಾ, ತಾಲೂಕು ಹಾಗೂ ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಟೆಲಿ ಇಸಿಜಿ ಕೇಂದ್ರಗಳನ್ನ ತೆರೆದು ನಿಯಮಿತವಾಗಿ ಹೃದಯ ತಪಾಸಣೆ ಕಾರ್ಯ ಮಾಡಲಾಗುವುದುಂದು ಸಚಿವರು ತಿಳಿಸಿದ್ದಾರೆ.

ಬೆಂಗಳೂರು: ಹೃದಯಾಘಾತದಿಂದ ಮರಣವಾಗುವವರ ಸಂಖ್ಯೆ ಅಧಿಕವಾಗುತ್ತಿದ್ದು, ಇದನ್ನ ನಿಯಂತ್ರಿಸಲು ಈ ವರ್ಷದಿಂದಲೇ ಡಾ.ಪುನೀತ್ ರಾಜ್ ಕುಮಾರ್ ಹೃದಯ ಜ್ಯೋತಿ ಯೋಜನೆಯನ್ನ ರಾಜ್ಯಾದ್ಯಂತ ವಿಸ್ತರಿಸಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲಾಣ್ಯ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.ಹೃದಯಾಘಾತ ತಡೆಯಲು 2023ರಲ್ಲಿ ಹೃದಯ ಜ್ಯೋತಿ ಯೋಜನೆ ಆರಂಭಿಸಲಾಗಿದೆ. ಪ್ರಸ್ತಕ ಆರ್ಥಿಕ ಸಾಲಿನಲ್ಲಿ ರಾಜ್ಯದ 86 ಕೇಂದ್ರಗಳಲ್ಲಿ ಈ ಯೋಜನೆ ಚಾಲ್ತಿಯಲ್ಲಿದೆ. ಈ ಯೋಜನಯನ್ನ ರಾಜ್ಯದ ಜಿಲ್ಲಾ, ತಾಲೂಕು ಹಾಗೂ ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಟೆಲಿ ಇಸಿಜಿ ಕೇಂದ್ರಗಳನ್ನ ತೆರೆದು ನಿಯಮಿತವಾಗಿ ಹೃದಯ ತಪಾಸಣೆ ಕಾರ್ಯ ಮಾಡಲಾಗುವುದು ಪರಿಷತ್ ಸದಸ್ಯ ಡಾ.ಧನಂಜಯ್ ಸರ್ಜಿ ಪ್ರಶ್ನೆಗೆ ಸಚಿವರು ತಿಳಿಸಿದರು.

ಹೃದಯದ ರಕ್ತನಾಳದಲ್ಲಿ ಬ್ಲಾಕ್ ಆಗಿ ಉಸಿರಾಟ ತೊಂದರೆಯಿಂದಾಗಿ ಆಸ್ಪತ್ರೆಗೆ ಬರುವ ಮುನ್ನವೇ ರೋಗಿಗಳು ಸಾವನ್ನಪ್ಪುತ್ತಿದ್ದಾರೆ. ಹೀಗಾಗಿ ಟೆಲಿ ಇಸಿಜಿ ಸೆಂಟರ್​ಗಳಲ್ಲಿ ತಪಾಸಣೆ ನಡೆಸಿ ರಕ್ತನಾಳದಲ್ಲಿ ಬ್ಲಾಕ್ ತೆರವುಗೊಳಿಸಲು 25 ಸಾವಿರ ರೂಪಾಯಿ ವೆಚ್ಚದ ಚುಚ್ಚುಮದ್ದನ್ನ ಉಚಿತವಾಗಿ ನೀಡಲಾಗುತ್ತಿದೆ. ಇದಾದ ಬಳಿಕ ರೋಗಿಗಳು ಕಾರ್ಡಿಯಾ ಬೈಪಾಸ್ ಮಾಡಿಸಿಕೊಳ್ಳಬಹುದಾಗಿದೆ. ಹೃದಯ ಸಂಬಂಧಿತ ಸಮಸ್ಯೆಗಳ ಬಗ್ಗೆ ಇದನ್ನ ನಿಯಂತ್ರಿಸಲು ಪಠ್ಯಪುಸ್ತಕಗಳಲ್ಲಿ ಅಳವಡಿಸುವಂತೆ ಶಿಕ್ಷಣ ಇಲಾಖೆಗೆ ಪತ್ರ ಬರೆಯಲಾಗಿದೆ ಎಂದರು.ಬದಲಾದ ಜೀವನಶೈಲಿ, ವ್ಯಾಯಾಮ ಮಾಡದಿರುವುದು, ಮದ್ಯಪಾನ, ಆಹಾರ ಪದ್ಧತಿ, ಬೊಜ್ಜುತನ, ಮಧುಮೇಹ ಹಾಗೂ ರಕ್ತದೊತ್ತಡ ಸೇರಿದಂತೆ ಸ್ವಯಂಕೃತ ಅಪರಾಧಗಳಿಂದ ಜನರಲ್ಲಿ ಹೃದಯಾಘಾತ ಕಾಣಿಸಿಕೊಂಡು ಸಾವನ್ನಪ್ಪಿದ್ದಾರೆ ಎಂದು ಜಯದೇವ ಆಸ್ಪತ್ರೆಯ ನಿರ್ದೇಶಕ ಕೆ.ಎಸ್.ರವೀಂದ್ರನಾಥ್ ವರದಿಯಲ್ಲಿ ತಿಳಿಸಿದ್ದಾರೆ.

ರಾಜ್ಯದಲ್ಲಿ ಹೆಚ್ಚುತ್ತಿರುವ ಹೃದಯಾಘಾತಗಳಿಂದಾಗಿ ಜನತೆ ಅನಗತ್ಯವಾಗಿ ಗೊಂದಲಕ್ಕೆ ಒಳಗಾಗಬಾರದು. ವ್ಯಾಯಾಮ, ಪ್ರಾಣಾಯಾಮ, ಆಹಾರಪದ್ಧತಿ ಹಾಗೂ ಜೀವನ ಶೈಲಿಯನ್ನು ಬದಲಾವಣೆ ಮಾಡಿದರೆ ಯಾವುದೇ ಸಮಸ್ಯೆ ಬರುವುದಿಲ್ಲ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ್ ಪಾಟೀಲ್ ಜನತೆಗೆ ಧೈರ್ಯ ತುಂಬಿದ್ದಾರೆ.ವಿಧಾನಪರಿಷತ್​​ನಲ್ಲಿ ಸೋಮವಾರ ಕಾಂಗ್ರೆಸ್ ಸದಸ್ಯ ದಿನೇಶ್ ಗೂಳಿಗೌಡ ಅವರ ಪ್ರಶ್ನೆ ಉತ್ತರಿಸಿದ ಅವರು, ಇತ್ತೀಚೆಗೆ ಹೃದಯಾಘಾತ, ಪ್ರಕರಣಗಳ ಸಂಖ್ಯೆ ಹೆಚ್ಚಳದ ಆತಂಕ ಎಲ್ಲರಲ್ಲೂ ಮನೆ ಮಾಡಿದೆ. ಜಯದೇವ ಆಸ್ಪತ್ರೆಯಲ್ಲಿ ಜನರು ಪ್ರತಿನಿತ್ಯ ಬಂದು ಹೃದಯ ತಪಾಸಣೆ ಮಾಡಿಸಿಕೊಳ್ಳುತ್ತಿದ್ದಾರೆ. ಇದರ ಪ್ರಮಾಣ ಶೇ.25ರಷ್ಟು ಏರಿಕೆಯಾಗಿದೆ ಎಂದು ಪಾಟೀಲ್ ಮಾಹಿತಿ ನೀಡಿದರು.ವಿಶೇಷವಾಗಿ ಹಾಸನ ಜಿಲ್ಲೆಯಲ್ಲಿ ಹೃದಯಾಘಾತಗಳ ಸಂಖ್ಯೆ ಹೆಚ್ಚಳವಾಗಿದೆ ಎಂಬ ಆತಂಕ ಜನರಲ್ಲಿದೆ. ಇದು ತಪ್ಪು ಗ್ರಹಿಕೆ. ವಾಸ್ತವವಾಗಿ ಹಿಂದಿನ ವರ್ಷಗಳಿಗೆ ಹೋಲಿಸಿದರೆ ಸರಾಸರಿ ಪ್ರಮಾಣದಲ್ಲಿ ಯಾವುದೇ ವ್ಯತ್ಯಾಸವಾಗಿಲ್ಲ. ಶೇ.5ರಿಂದ 6ರಷ್ಟು ಪ್ರಕರಣಗಳು ಹೃದಯಾಘಾತಕ್ಕೆ ಸಂಬಂಧಿಸಿದವು. ಈ ವರ್ಷವೂ ಇಷ್ಟೇ ಪ್ರಮಾಣದಲ್ಲಿ ಇದೆ ಎಂದು ಸಚಿವರು ಹೇಳಿದರು.

ಹಾಸನ ಜಿಲ್ಲೆಯಲ್ಲಿ ಇತ್ತೀಚೆಗೆ ವರದಿಯಾಗಿದ್ದ ಹಠಾತ್‌ ಹೃದಯಾಘಾತ ಪ್ರಕರಣಗಳ ಬಗ್ಗೆ ವಿಧಾನಸಭೆಯಲ್ಲಿ ಪ್ರಶ್ನೋತ್ತರದ ವೇಳೆ ಹಿರಿಯ ಶಾಸಕ ಹೆಚ್‌. ಡಿ ರೇವಣ್ಣ ಅವರ ಪರವಾಗಿ ಶಾಸಕ ಎ. ಮಂಜು ಅವರು ಈ ಬಗ್ಗೆ ಸರ್ಕಾರದ ಗಮನ ಸೆಳೆದಿದ್ದರು.

News Updates

ಮಂಗಳೂರು : ಬೈಕಂಪಾಡಿ, ಕೂಳೂರು ಜಂಕ್ಷನ್ ಬಳಿ ಅಂಡರ್ ಪಾಸ್ ನಿರ್ಮಾಣಕ್ಕೆ ಕೇಂದ್ರ ಸರ್ಕಾರದಿಂದ ₹11.63 ಕೋ ರೂ. ಅಧಿಕ ಅನುದಾನ ಮಂಜೂರು | ದಕ್ಷಿಣ ಕನ್ನಡ ಜಿಲ್ಲೆಯ ಹೆದ್ದಾರಿಗಳ ಸುರಕ್ಷತೆ ಮತ್ತು ಸುಗಮ ಸಂಚಾರಕ್ಕೆ ನಮ್ಮ ಸರ್ಕಾರ ಬದ್ಧವಾಗಿದೆ : ಸಂಸದ ಕ್ಯಾ.ಬ್ರಿಜೇಶ್ ಚೌಟ

[t4b-ticker]
error: Content is protected !!