ದೆಹಲಿ ಸಿಎಂ ರೇಖಾ ಗುಪ್ತಾಗೆ ವ್ಯಕ್ತಿಯಿಂದ ಕಪಾಳಮೋಕ್ಷ

Picture of Savistara

Savistara

Bureau Report

ನವದೆಹಲಿ: ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಅವರಿಗೆ ವ್ಯಕ್ತಿಯೊಬ್ಬ ಕಪಾಳಮೋಕ್ಷ ಮಾಡಿದ್ದಾನೆ ಎಂದು ಬಿಜೆಪಿ ಹೇಳಿದೆ.

ದೆಹಲಿಯ ಸಿವಿಲ್‌ ಲೈನ್ಸ್‌ನಲ್ಲಿರುವ ಅಧಿಕೃತ ನಿವಾಸದಲ್ಲಿ ಬುಧವಾರ ಸಾಪ್ತಾಹಿಕ ‘ಜನ್‌ ಸುನ್ವಿ’ ಕಾರ್ಯಕ್ರಮದ ವೇಳೆ ಈ ದಾಳಿ ನಡೆದಿದೆ.

35 ವರ್ಷದ ವ್ಯಕ್ತಿಯೊಬ್ಬ ಈ ಕೃತ್ಯ ಎಸಗಿದ್ದು, ಆತನನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ. ಹೆಚ್ಚಿನ ತನಿಖೆ ನಡೆಯುತ್ತಿದೆ.ಈ ದಾಳಿಯನ್ನು ದೆಹಲಿ ಬಿಜೆಪಿ ಅಧ್ಯಕ್ಷ ವಿರೇಂದ್ರ ಸಚ್‌ದೇವ ಹಾಗೂ ಕಾಂಗ್ರೆಸ್‌ ಅಧ್ಯಕ್ಷ ದೇವೇಂದ್ರ ಯಾದವ್ ಖಂಡಿಸಿದ್ದಾರೆ.

ಇದೊಂದು ದುರಾದೃಷ್ಟಕರ ಘಟನೆ. ಇದು ದೆಹಲಿಯ ಕಾನೂನು ಸುವ್ಯವಸ್ಥೆ ಬಗ್ಗೆ ಪ್ರಶ್ನೆ ಮೂಡುವಂತೆ ಮಾಡಿದೆ. ರಾಷ್ಟ್ರ ರಾಜಧಾನಿಯಲ್ಲಿ ಮುಖ್ಯಮಂತ್ರಿಯೇ ಸುರಕ್ಷಿತವಾಗಿಲ್ಲ ಎಂದಾದರೆ, ಸಾಮಾನ್ಯ ಜನರ ಕಥೆಯೇನು ಎಂದು ದೇವೇಂದ್ರ ಪ್ರಶ್ನಿಸಿದ್ದಾರೆ.

News Updates

ಮಂಗಳೂರು : ಬೈಕಂಪಾಡಿ, ಕೂಳೂರು ಜಂಕ್ಷನ್ ಬಳಿ ಅಂಡರ್ ಪಾಸ್ ನಿರ್ಮಾಣಕ್ಕೆ ಕೇಂದ್ರ ಸರ್ಕಾರದಿಂದ ₹11.63 ಕೋ ರೂ. ಅಧಿಕ ಅನುದಾನ ಮಂಜೂರು | ದಕ್ಷಿಣ ಕನ್ನಡ ಜಿಲ್ಲೆಯ ಹೆದ್ದಾರಿಗಳ ಸುರಕ್ಷತೆ ಮತ್ತು ಸುಗಮ ಸಂಚಾರಕ್ಕೆ ನಮ್ಮ ಸರ್ಕಾರ ಬದ್ಧವಾಗಿದೆ : ಸಂಸದ ಕ್ಯಾ.ಬ್ರಿಜೇಶ್ ಚೌಟ

[t4b-ticker]
error: Content is protected !!