ಬೆಳ್ತಂಗಡಿ: ಉಜಿರೆ ಖಾಸಗಿ ಆಸ್ಪತ್ರೆ ಮುಂಭಾಗ ನಡೆಯಿತುಘರ್ಷಣೆಗೆ ಸಂಬಂಧಿಸಿದಂತೆ ಬೆಳ್ತಂಗಡಿ ಪೊಲೀಸ್ ಠಾಣೆಗೆ ವಿಚಾರಣೆಗಾಗಿ ಮಹೇಶ್ ಶೆಟ್ಟಿ ತಿಮರೋಡಿ ಹಾಗೂ ಗಿರೀಶ್ ಮಟ್ಟಣ್ಣನವರ್ ಇದೀಗ ಹಾಜರಾಗಿದ್ದಾರೆ.ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದಾಖಲಾದ ಅಪರಾಧ ಸಂಖ್ಯೆ 76/77/79/2025 ಪ್ರಕರಣದಲ್ಲಿ ವಿಚಾರಣೆಗಾಗಿ ಮಹೇಶ್ ಶೆಟ್ಟಿ ತಿಮರೋಡಿ ಸೇರಿದಂತೆ ಪ್ರಕರಣದಲ್ಲಿ 16 ಮಂದಿ ಆರೋಪಿಗಳಿಗೆ ಆ.20 ರಂದು 10 ಗಂಟೆಗೆ ವಿಚಾರಣೆಗೆ ಹಾಜರಾಗುವಂತೆ ನೋಟೀಸ್ ಜಾರಿ ಮಾಡಲಾಗಿತ್ತು. ನೋಟಿಸ್ ಬೆನ್ನಲ್ಲೇ ಆ.20 ರ ಬುಧವಾರ ಸಂಜೆ 5 ಗಂಟೆಗೆ ವಿಚಾರಣೆಗೆ ಹಾಜರಾಗಿದ್ದಾರೆ.ಆಸ್ಪತ್ರೆ ಮುಂಭಾಗ ಅಕ್ರಮ ಕೂಟದಲ್ಲಿ ಸುಮೊಟೊ ಪ್ರಕರಣ, ಮಾಧ್ಯಮದ ಮೇಲೆ ಹಲ್ಲೆ ಪ್ರಕರಣ, ಮಾಧ್ಯಮದಲ್ಲಿ ಅವಹೇಳನಕಾರಿ ಹೇಳಿಕೆ ವಿರುದ್ಧ ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಮೂರು ಪ್ರಕರಣ ದಾಖಲಾಗಿತ್ತು. ಅದರಂತೆ ಠಾಣೆಗೆ ಹಾಜರಾಗಿ ಬೆಳ್ತಂಗಡಿ ಇನ್ಸ್ ಪೆಕ್ಟರ್ ಸುಬ್ಬಾಪುರ್ ಮರ್ ಮುಂದೆ ವಿಚಾರಣೆ ಎದುರಿಸುತ್ತಿದ್ದಾರೆ.
ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣನವರ್ ಬೆಳ್ತಂಗಡಿ ಪೊಲೀಸ್ ಠಾಣೆಗೆ ಹಾಜರು
Savistara
Bureau Report
[t4b-ticker]














































