ಹೊಸ ಮಸೂದೆಗಳ ಮಂಡನೆ; ಪ್ರಜಾಪ್ರಭುತ್ವವನ್ನು ದುರ್ಬಲಗೊಳಿಸುವ ನಡೆ ಎಂದ ಬಿಎಸ್ಪಿ ನಾಯಕಿ ಮಾಯಾವತಿ

Picture of Savistara

Savistara

Bureau Report

Mayawati: ನಿನ್ನೆ ಲೋಕಸಭೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಮಂಡಿಸಿರುವ ನೂತನ ಮಸೂದೆಯ ಬಗ್ಗೆ ಪ್ರತಿಕ್ರಿಯೆ ನೀಡಿರುವ ಬಿಎಸ್ಪಿ ನಾಯಕಿ ಮಾಯಾವತಿ, ಈ ಸಾಂವಿಧಾನಿಕ ತಿದ್ದುಪಡಿ ಪ್ರಜಾಪ್ರಭುತ್ವವನ್ನು ದುರ್ಬಲಗೊಳಿಸುವ ನಡೆ ಎಂದು ಕರೆದಿದ್ದಾರೆ.ಗುರುವಾರ (ಅಗಸ್ಟ್ 21) ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿರುವ ಮಾಯಾಮತಿ, ದೇಶದ ಪ್ರಸ್ತುತ ರಾಜಕೀಯ ವಾತಾವರಣದಲ್ಲಿ ಪ್ರಜಾಪ್ರಭುತ್ವವನ್ನು ದುರ್ಬಲಗೊಳಿಸುವ ಎಲ್ಲ ರೀತಿಯ ಅಂಶಗಳನ್ನು ಈ ಶಾಸನ ಒಳಗೊಂಡಿದೆ ಎಂದರು.

ಕೇಂದ್ರದಲ್ಲಿ ಆಡಳಿತ ನಡೆಸುವ ಪಕ್ಷಗಳು ತಮ್ಮ ಸ್ವಂತ ಲಾಭ, ಸ್ವಾರ್ಥ ಮತ್ತು ದ್ವೇಷಕ್ಕಾಗಿ ಈ ಖಾಯ್ದೆಯನ್ನು ದುರುಪಯೋಗಪಡಿಸಿಕೊಳ್ಳುತ್ತವೆ ಎಂದು ಸಾರ್ವಜನಿಕರು ಆತಂಕ ಪಡುತ್ತಿದ್ದು, ಈ ಮಸೂದೆಯನ್ನು ಬಿಎಸ್‌ಪಿ ಒಪ್ಪುವುದಿಲ್ಲ. ದೇಶದ ಪ್ರಜಾಪ್ರಭುತ್ವ ಮತ್ತು ಸಂವಿಧಾನದ ಹಿತದೃಷ್ಟಿಯಿಂದ ಸರ್ಕಾರವು ಇದನ್ನು ಮರುಪರಿಶೀಲಿಸುವುದು ಸೂಕ್ತ ಎಂದು ಅಭಿಪ್ರಾಯಪಟ್ಟರು.

ಮಸೂದೆ ಏನು ಹೇಳುತ್ತದೆ..?

ಐದು ವರ್ಷದ ಜೈಲು ಶಿಕ್ಷೆಗೆ ಒಳಪಡುವ ಪ್ರಧಾನಿ, ಮುಖ್ಯಮಂತ್ರಿಗಳು ಮತ್ತು ಇತರ ಸಚಿವರನ್ನು 30 ದಿನಗಳ ನಂತರ ಪದಚ್ಯುತಗೊಳಿಸಲು ಅವಕಾಶ ನೀಡುವ ಮಸೂದೆಯನ್ನು ಕೇಂದ್ರ ಗೃಹ ಸಚಿವ ಅಮಿತ್ ಷಾ ಬುಧವಾರ (ಆಗಸ್ಟ್ 20) ಲೋಕಸಭೆಯಲ್ಲಿ ಮಂಡಿಸಿದರು.ಈ ಮಸೂದೆಗೆ ವಿರೋಧ ಪಕ್ಷದ ಸದಸ್ಯರು ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಇದು ಸಂವಿಧಾನ ಮತ್ತು ಒಕ್ಕೂಟ ವ್ಯವಸ್ಥೆಗೆ ವಿರುದ್ಧವಾಗಿದೆ ಎಂದಿದ್ದರು. ಪ್ರತಿಪಕ್ಷಗಳ ಟೀಕೆಗೆ ಪ್ರತಿಕ್ರಿಯಿಸಿದ ಗೃಹ ಸಚಿವ ಷಾ, ಸಾರ್ವಜನಿಕ ಜೀವನದಲ್ಲಿ ನೈತಿಕ ಮೌಲ್ಯಗಳಿಗೆ ಹೆಚ್ಚಿನ ಸ್ಥಾನಮಾನ ನೀಡಬೇಕು, ಗಂಭೀರ ಆರೋಪಗಳನ್ನು ಎದುರಿಸುತ್ತಿರುವಾಗಲೂ ನಾವು ಸಾಂವಿಧಾನಿಕ ಹುದ್ದೆಗಳಲ್ಲಿ ಮುಂದುವರಿಸುವಷ್ಟು ನಾಚಿಕೆಗೇಡಿನವರಾಗಲು ಸಾಧ್ಯವಿಲ್ಲ ಎಂದಿದ್ದರು.

News Updates

ಮಂಗಳೂರು : ಬೈಕಂಪಾಡಿ, ಕೂಳೂರು ಜಂಕ್ಷನ್ ಬಳಿ ಅಂಡರ್ ಪಾಸ್ ನಿರ್ಮಾಣಕ್ಕೆ ಕೇಂದ್ರ ಸರ್ಕಾರದಿಂದ ₹11.63 ಕೋ ರೂ. ಅಧಿಕ ಅನುದಾನ ಮಂಜೂರು | ದಕ್ಷಿಣ ಕನ್ನಡ ಜಿಲ್ಲೆಯ ಹೆದ್ದಾರಿಗಳ ಸುರಕ್ಷತೆ ಮತ್ತು ಸುಗಮ ಸಂಚಾರಕ್ಕೆ ನಮ್ಮ ಸರ್ಕಾರ ಬದ್ಧವಾಗಿದೆ : ಸಂಸದ ಕ್ಯಾ.ಬ್ರಿಜೇಶ್ ಚೌಟ

[t4b-ticker]
error: Content is protected !!