ಮಹೇಶ್ ತಿಮರೋಡಿಗೆ 14 ದಿನನ್ಯಾಯಾಂಗ ಬಂಧನ

Picture of Savistara

Savistara

Bureau Report

ಉಡುಪಿ: ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್. ಸಂತೋಷ್ (BL Santhosh) ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದಲ್ಲಿ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ವಶಕ್ಕೆ ಪಡೆದಿರುವ ಬ್ರಹ್ಮಾವರ ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತಾಲೂಕು ಸಂಚಾರಿ ಪೀಠವು ಮಹೇಶ್ ತಿಮರೋಡಿಯನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.ಬಿಎಲ್ ಸಂತೋಷ್ ವಿರುದ್ಧ ಅವಹೇಳನಕಾರಿಯಾಗಿ ಹೇಳಿಕೆ ನೀಡಿದ್ದಾರೆಂದು ಗ್ಗೆ ಉಡುಪಿಯ ಬಿಜೆಪಿ ಮುಖಂಡರು ಬ್ರಹ್ಮಾವರ ಪೊಲೀಸರಿಗೆ ದೂರು ನೀಡಿದ್ದರು. ಈ ಬಗ್ಗೆ ಎರಡು ಬಾರಿ ನೋಟಿಸ್‌ ನೀಡಿದರೂ ಉತ್ತರಿಸಿದ ಕಾರಣ ಗುರುವಾರ ಮಹೇಶ್ ತಿಮರೋಡಿ ಅವರನ್ನು ಉಜಿರೆಯಿಂದ ವಶಕ್ಕೆ ಪಡೆಯಲಾಗಿತ್ತು.ತಿಮರೋಡಿಗೆ ಎರಡು ಬಾರಿ ನೋಟಿಸ್ ನೀಡಲಾಗಿತ್ತು. ಅದಕ್ಕೆ ಸರಿಯಾದ ಉತ್ತರ ನೀಡದೆ ಇರುವುದರಿಂದ ಅವರನ್ನು ವಶಕ್ಕೆ ಪಡೆಯಲಾಗಿದೆ ಎಂದು ಹರಿರಾಮ್ ಶಂಕರ್ ತಿಳಿಸಿದ್ದಾರೆ.

ನಿಷೇಧಾಜ್ಞೆ ಜಾರಿ

ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ನಿಟ್ಟಿನಲ್ಲಿ ಬ್ರಹ್ಮಾವರ ಪೊಲೀಸ್‌ ಠಾಣೆಯ ಸುತ್ತಲಿನ 500 ಮೀಟ‌ರ್ ವ್ಯಾಪ್ತಿಯಲ್ಲಿ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ 2023ರ ಕಲಂ 163 ರನ್ವಯ ನಿಷೇಧಾಜ್ಞೆಯನ್ನು 21/08/2025 ರಂದು ಅಪರಾಹ್ನ 1 ಗಂಟೆಯಿಂದ 22/08/2025ರ ಅಪರಾಹ್ನ 1ಗಂಟೆಯವರೆಗೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಪೊಲೀಸ್ ಅಧೀಕ್ಷಕರ ಮನವಿಯಂತೆ ಜಿಲ್ಲಾಧಿಕಾರಿ ಸ್ವರೂಪ ಟಿ. ಕೆ ಅವರು ಈ ಆದೇಶ ಹೊರಡಿಸಿದ್ದಾರೆ.

ತಿಮರೋಡಿ ನಿವಾಸಲ್ಲಿ ಹೈಡ್ರಾಮಾ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ವಶಕ್ಕೆ ಪಡೆಯಲು ಪೊಲೀಸರು ತೆರಳಿದ ಸಮಯದಲ್ಲಿ ಉಜಿರೆಯ ನಿವಾಸದ ಬಳಿ ಹೈಡ್ರಮಾ ನಡೆಯಿತು. ಕೊನೆಗೆ ಪೊಲೀಸರ ಜೊತೆ ತಿಮರೋಡಿ ತಮ್ಮ ಖಾಸಗಿ ವಾಹನದಲ್ಲಿ ತೆರಳಿದ್ದರು.

News Updates

ಮಂಗಳೂರು : ಬೈಕಂಪಾಡಿ, ಕೂಳೂರು ಜಂಕ್ಷನ್ ಬಳಿ ಅಂಡರ್ ಪಾಸ್ ನಿರ್ಮಾಣಕ್ಕೆ ಕೇಂದ್ರ ಸರ್ಕಾರದಿಂದ ₹11.63 ಕೋ ರೂ. ಅಧಿಕ ಅನುದಾನ ಮಂಜೂರು | ದಕ್ಷಿಣ ಕನ್ನಡ ಜಿಲ್ಲೆಯ ಹೆದ್ದಾರಿಗಳ ಸುರಕ್ಷತೆ ಮತ್ತು ಸುಗಮ ಸಂಚಾರಕ್ಕೆ ನಮ್ಮ ಸರ್ಕಾರ ಬದ್ಧವಾಗಿದೆ : ಸಂಸದ ಕ್ಯಾ.ಬ್ರಿಜೇಶ್ ಚೌಟ

[t4b-ticker]
error: Content is protected !!