ಕೇಂದ್ರ ಕೃಷಿ ಹಾಗೂ ರೈತರ ಕಲ್ಯಾಣ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ಅಡಕೆ ಬೆಳೆಗಾರರ ಸಮಸ್ಯೆಗಳಿಗೆ ಸ್ಪಂದಿಸುವಂತೆ ಸಂಸದ ಬಿ ವೈ ರಾಘವೇಂದ್ರ ಮನವಿ

Picture of Savistara

Savistara

Bureau Report

ಕೇಂದ್ರ ಕೃಷಿ ಹಾಗೂ ರೈತರ ಕಲ್ಯಾಣ ಸಚಿವರಾದ ಶಿವರಾಜ್ ಸಿಂಗ್ ಚೌಹಾಣ್ ಅವರನ್ನು ಕರ್ನಾಟಕದ ಸಂಸದರ ನಿಯೋಗವು ಭೇಟಿ‌ ಮಾಡಿ ರಾಜ್ಯ ಅಡಕೆ ಬೆಳೆಗಾರರು ಸಮಸ್ಯೆಗಳ ಕುರಿತಂತೆ ಸಭೆ ನಡೆಸಲಾಯಿತು.ಈ ಸಭೆಯಲ್ಲಿ ರಾಜ್ಯ ಅಡಿಕೆ ರೈತರು ಸಂಕಷ್ಟದಲ್ಲಿ ಸಿಲುಕಿರುವ ಬಗ್ಗೆ ವಿವರವಾದ ಮಾಹಿತಿಯನ್ನು ಕೃಷಿ‌ ಸಚಿವರಿಗೆ ತಿಳಿಸಲಾಯಿತು.

ಕೇಂದ್ರ ಕೃಷಿ ಸಚಿವರು, ಅಡಿಕೆ ರೈತರ ಬಗ್ಗೆ‌ ಈ ಹಿಂದೆ ಸಲ್ಲಿಸಿರುವ ವರದಿಗಳನ್ನು ತ್ವರಿತವಾಗಿ‌ ಇತ್ಯರ್ಥಗೊಳಿಸಲು ಅಧಿಕಾರಿಗಳಿಗೆ ನಿರ್ದೇಶನ ನೀಡಿ, ವಿಜ್ಞಾನಿಗಳ ತಂಡದೊಂದಿಗೆ ತೊಂದರೆಗೊಳಗಾದ ಪ್ರದೇಶಗಳಿಗೆ ಭೇಟಿ ನೀಡುವುದಾಗಿ ಈ ವೇಳೆ ಭರವಸೆ ನೀಡಿದರು.

ಈ ಸಭೆಯಲ್ಲಿ ಮಾನ್ಯ ಕೇಂದ್ರ ಕೈಗಾರಿಕಾ ಹಾಗೂ ಉಕ್ಕು ಖಾತೆಯ ಸಚಿವರು ಶ್ರೀ ಹೆಚ್.ಡಿ. ಕುಮಾರಸ್ವಾಮಿ, ಕೇಂದ್ರ ಆಹಾರ ಹಾಗೂ ನಾಗರಿಕ ಸರಬರಾಜು ಸಚಿವರು ಶ್ರೀ ಪ್ರಹ್ಲಾದ ಜೋಶಿ, ಕೇಂದ್ರ ರೈಲ್ವೆ ಖಾತೆಯ ರಾಜ್ಯ ಸಚಿವರು ಶ್ರೀ ಸೋಮಣ್ಣ, ಶ್ರೀ ಆರಗ ಜ್ಞಾನೇಂದ್ರ, ಶಾಸಕರು ಹಾಗೂ ಮಾಜಿ ಸಚಿವರು ಮತ್ತು ಸಂಸದರಾದ ಶ್ರೀ ವಿಶ್ವೇಶ್ವರಯ್ಯ ಕಾಗೇರಿ, ಶ್ರೀ ಗೋವಿಂದ ಕಾರಜೋಳ, ಶ್ರೀ ಶ್ರೀನಿವಾಸ ಪೂಜಾರಿ, ಕ್ಯಾಪ್ಟನ್ ಬ್ರಿಜೇಶ್ ಚೌಟ, ಶ್ರೀ ಯದುವೀರ್ ಒಡೆಯರ್ ಮತ್ತು ಡಾಕ್ಟರ್ ಪ್ರಭಾ ಮಲ್ಲಿಕಾರ್ಜುನ ಹಾಗೂ ಕ್ಯಾಂಪ್ಕೋ ಅಧ್ಯಕ್ಷರಾದ ಶ್ರೀ ಕಿಶೋರ್ ಕೊಡ್ಗಿ ಮತ್ತಿತರ ಅಧಿಕಾರಿಗಳು ಸಹ ಸಭೆಯಲ್ಲಿ ಭಾಗವಹಿಸಿದ್ದರು.

News Updates

ಮಂಗಳೂರು : ಬೈಕಂಪಾಡಿ, ಕೂಳೂರು ಜಂಕ್ಷನ್ ಬಳಿ ಅಂಡರ್ ಪಾಸ್ ನಿರ್ಮಾಣಕ್ಕೆ ಕೇಂದ್ರ ಸರ್ಕಾರದಿಂದ ₹11.63 ಕೋ ರೂ. ಅಧಿಕ ಅನುದಾನ ಮಂಜೂರು | ದಕ್ಷಿಣ ಕನ್ನಡ ಜಿಲ್ಲೆಯ ಹೆದ್ದಾರಿಗಳ ಸುರಕ್ಷತೆ ಮತ್ತು ಸುಗಮ ಸಂಚಾರಕ್ಕೆ ನಮ್ಮ ಸರ್ಕಾರ ಬದ್ಧವಾಗಿದೆ : ಸಂಸದ ಕ್ಯಾ.ಬ್ರಿಜೇಶ್ ಚೌಟ

[t4b-ticker]
error: Content is protected !!