ಬೆಂಗಳೂರಿನ ಆರ್‌ಆರ್‌ ನಗರ ಕಾಂಗ್ರೆಸ್‌ ನಾಯಕಿ ಕುಸುಮಾ ಮನೆ ಮೇಲೆ ಇಡಿ ದಾಳಿ! ಶಾಸಕ ವೀರೇಂದ್ರ ಪಪ್ಪಿಗೂ ಸಂಕಷ್ಟ

Picture of Savistara

Savistara

Bureau Report

ರಾಜರಾಜೇಶ್ವರಿ ನಗರದ ಕಾಂಗ್ರೆಸ್ ನಾಯಕಿ ಕುಸುಮಾ ಹನುಮಂತರಾಯಪ್ಪ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ ದಾಳಿ ನಡೆಸಿದೆ. ಚಿತ್ರದುರ್ಗ ಶಾಸಕ ವೀರೇಂದ್ರ ಪಪ್ಪಿ ಅವರೊಂದಿಗೆ ವ್ಯವಹಾರ ನಡೆಸಿದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಮನಿ ಲಾಂಡರಿಂಗ್ ಆರೋಪದ ಮೇಲೆ ಶಾಸಕ ವೀರೇಂದ್ರ ಪಪ್ಪಿ ಅವರ ಮನೆ ಮತ್ತು ಕಚೇರಿಗಳ ಮೇಲೂ ಇಡಿ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ.

ಬೆಂಗಳೂರು: ರಾಜರಾಜೇಶ್ವರಿ ನಗರದ ಕಾಂಗ್ರೆಸ್‌ ನಾಯಕಿ ಕುಸುಮಾ ಹನುಮಂತರಾಯಪ್ಪ ಅವರ ಮನೆ ಮೇಲೆ ಶುಕ್ರವಾರ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದೆ. ಚಿತ್ರದುರ್ಗ ಶಾಸಕ ವೀರೇಂದ್ರ ಪಪ್ಪಿ ಅವರೊಂದಿಗೆ ಹನುಮಂತರಾಯಪ್ಪ ವ್ಯವಹಾರ ನಡೆಸಿದ್ದರು ಎಂಬ ಮಾಹಿತಿ ಮೇಲೆ ದಾಳಿ ನಡೆಸಲಾಗಿದೆ.

ಕಾಂಗ್ರೆಸ್‌ ನಾಯಕ, ಚಿತ್ರದುರ್ಗದ ಶಾಸಕ ವೀರೇಂದ್ರ ಪಪ್ಪಿ ಅವರ ಚಳ್ಳಕೆರೆ, ಬೆಂಗಳೂರು, ಚಿತ್ರದುರ್ಗದ ಮನೆಗಳ ಮೇಲೆ ಶುಕ್ರವಾರ ಇಡಿ ದಾಳಿ ನಡೆಸಿದೆ. 20 ಕಾರುಗಳಲ್ಲಿ ಬಂದ ಅಧಿಕಾರಿಗಳು ತಪಾಸಣೆ ನಡೆಸುತ್ತಿದ್ದಾರೆ. ಜತೆಗೆ ಶಾಸಕರ ಸಹೋದರರಾದ ಕೆ.ಸಿ ನಾಗರಾಜ, ಕೆ.ಸಿ ತಿಪ್ಪೇಸ್ವಾಮಿ, ಕುಟುಂಬಸ್ಥರು, ಅವರೊಟ್ಟಿಗೆ ವ್ಯವಹಾರ ಹೊಂದಿದ್ದ ಹಲವು ಮುಖಂಡರ ಮನೆಗಳ ಮೇಲೆಯೂ ಇಡಿ ದಾಳಿ ಮಾಡಿದೆ.

ಇಡಿ ದಾಳಿ ಮಾಡಿದ್ದೇಕೆ?

ಮನಿ ಲಾಂಡರಿಂಗ್‌ ಆರೋಪಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಶಾಸಕ ವೀರೇಂದ್ರ ಪಪ್ಪಿ ಅವರ ಬೆಂಗಳೂರು, ಚಳ್ಳಕೆರೆ, ಚಿತ್ರದುರ್ಗ ಮತ್ತು ಗೋವಾ ಸೇರಿದಂತೆ ಒಟ್ಟು 17 ಸ್ಥಳಗಳಲ್ಲಿ ದಾಳಿ ನಡೆಸಿದ್ದಾರೆ. ಸದ್ಯ ದಾಖಲೆಗಳನ್ನು ಪರಿಶೀಲನೆ ನಡೆಸಿದ್ದಾರೆ. ಇನ್ನು ಶಾಸಕರು ಸಿಕ್ಕಿ ಪ್ರವಾಸದಲ್ಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

[t4b-ticker]
error: Content is protected !!