ಕರಾವಳಿ: ಉದ್ಯೋಗ ಸೃಷ್ಟಿಗೆ ಪ್ರತ್ಯೇಕ ನೀತಿ; ಡಿ.ಕೆ.ಶಿವಕುಮಾ‌ರ್

Picture of Savistara

Savistara

Bureau Report

ಬೆಂಗಳೂರು: ‘ಕರಾವಳಿ ಭಾಗದಲ್ಲಿ ಉದ್ಯೋಗ ಸೃಷ್ಟಿಗೆ ಹಾಗೂ ಪ್ರವಾಸೋದ್ಯಮ ಬೆಳವಣಿಗೆಗೆ ಪ್ರತ್ಯೇಕ ನೀತಿ ಮಾಡಬೇಕು ಎಂಬ ಚಿಂತನೆ ಇದೆ’ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಹೇಳಿದರು.

ವಿಧಾನಸೌಧದಲ್ಲಿ ಶುಕ್ರವಾರ ಸಂಜೆ ಸುದ್ದಿಗಾರರ ಜತೆ ಮಾತನಾಡಿದ ಅವರು, ‘ಕರಾವಳಿ ಭಾಗದ ಜನಪ್ರತಿನಿಧಿಗಳು, ಸಂಬಂಧಪಟ್ಟ ಸಚಿವರ ಜತೆ ಮೊದಲ ಸಭೆ ನಡೆಸಲಾಯಿತು. ಅಧಿಕಾರಿಗಳೂ ಸಭೆಯಲ್ಲಿ ಹಾಜರಿದ್ದರು’ ಎಂದರು.“ಎರಡನೇ ಸಭೆಯನ್ನು ಮಂಗಳೂರಿನಲ್ಲಿ ನಡೆಸಲಾಗುವುದು. ಮುಂದಿನ ಸಭೆಗೆ ಯಾರನ್ನು ಆಹ್ವಾನ ಮಾಡಬೇಕು ಎಂದು ಸಲಹೆ ನೀಡಿದ್ದಾರೆ. ಈ ಸಭೆಯಲ್ಲಿ ಬಂಡವಾಳ ಹೂಡಿಕೆದಾರರು, ಕೇಂದ್ರ ಸಚಿವಾಲಯಗಳು ಹಾಗೂ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳನ್ನು ಕರೆಯಲಾಗುತ್ತದೆ. ಕರಾವಳಿ ಭಾಗಕ್ಕೆ ಹೊಸ ರೂಪ ನೀಡಲಾಗುತ್ತದೆ’ ಎಂದರು.

News Updates

ಸುಳ್ಯ : ಮುರುಳ್ಯ ರಕ್ತೇಶ್ವರಿ ದೇಗುಲ ವಿವಾದಕ್ಕೆ ಬಿಗ್ ಟ್ವಿಸ್ಟ್ – ವಕ್ಫ್ ಆದೇಶ ವಿರುದ್ಧ ಸಿಡಿದೆದ್ದ ಹಿಂದೂ ಸಮಾಜ | ಮುರುಳ್ಯದಲ್ಲಿ ಹಿಂದೂ ಹಿತರಕ್ಷಣಾ ವೇದಿಕೆಯಿಂದ ಬೃಹತ್ ಪ್ರತಿಭಟನೆ | ದ.ಕ. ಸಂಸದ ಕ್ಯಾ. ಚೌಟ, ಶಾಸಕಿ ಭಾಗೀರಥಿ ಮುರುಳ್ಯ ಸೇರಿದಂತೆ ಸಾವಿರಾರು ಮಂದಿ ಭಾಗಿ

[t4b-ticker]
error: Content is protected !!