ಬೆಳ್ತಂಗಡಿ ತಾಲೂಕಿನ ಉಪ್ಪಿನಂಗಡಿ- ಗುರುವಾಯನಕೆರೆ ರಸ್ತೆಯು ಸಂಪೂರ್ಣ ಹದಗೆಟ್ಟಿದ್ದು ವಾಹನ ಸವಾರರಿಗೆ ತೀವ್ರ ಸಂಕಷ್ಟ ಉಂಟಾಗಿದ್ದು ಈ ಕುರಿತಾಗಿ ಸದನದಲ್ಲಿ ಸರ್ಕಾರದ ಗಮನ ಸೆಳೆದು ತಕ್ಷಣವೇ ಈ ರಸ್ತೆಯನ್ನು ಅಭಿವೃದ್ಧಿಪಡಿಸಲು ಅನುದಾನವನ್ನು ಬಿಡುಗಡೆಗೊಳಿಸುವಂತೆ ಲೋಕೋಪಯೋಗಿ ಸಚಿವರಿಗೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ರವರು ವಿನಂತಿಸಿದರು.ಆಗಸ್ಟ್ 22 ರಂದು ಸದನದಲ್ಲಿ ಲೋಕೋಪಯೋಗಿ ಸಚಿವರ ಅನುಪಸ್ಥಿತಿಯಲ್ಲಿ ರಾಜ್ಯದ ಗೃಹ ಸಚಿವರಾದ ಜಿ ಪರಮೇಶ್ವರ್ ಅವರು ಉತ್ತರಿಸಿ, ಮಳೆ ನಿಂತ ಕೂಡಲೇ ಅನುದಾನವನ್ನು ಒದಗಿಸಿ ಕಾಮಗಾರಿಯನ್ನು ಆರಂಭಿಸುವುದಾಗಿ ಆಶ್ವಾಸನೆ ನೀಡಿದರು.
ಸಂಪೂರ್ಣ ಹದಗೆಟ್ಟ ಉಪ್ಪಿನಂಗಡಿ-ಗುರುವಾಯನಕೆರೆ ರಸ್ತೆ: ಅನುದಾನ ಬಿಡುಗಡೆಗೊಳಿಸುವಂತೆ ಸಚಿವರಿಗೆ ಶಾಸಕ ಹರೀಶ್ ಪೂಂಜ ಮನವಿ
Savistara
Bureau Report
[t4b-ticker]











































