ಬಾರೀ ಮಳೆ ಪರಿಣಾಮ ಪುತ್ತೂರು, ಸುಳ್ಯ ಸೇರಿದಂತೆ ತಾಲೂಕಿನ ಹಲವು ಶಾಲಾ- ಕಾಲೇಜುಗಳಿಗೆ ರಜೆ ಘೋಷಿಸಿ ತಹಶೀಲ್ದಾರ್ ಆದೇಶ ಮಾಡಿದ್ದಾರೆ.
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವ ಹಿನ್ನೆಲೆಯಲ್ಲಿ ಕರ್ನಾಟಕದ ಹಲವೆಡೆ ಆಗಸ್ಟ್ 31ರ ವರೆಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಆಗಸ್ಟ್ 30ರವರೆಗೆ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಒಳನಾಡು ಜಿಲ್ಲೆಗಳಲ್ಲಿ ಆ.28ರವರೆಗೆ ಗುಡುಗು, ಗಾಳಿ ಸಹಿತ ಅಲ್ಲಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ತಿಳಿಸಿದೆ. ಈ ಹಿನ್ನೆಲೆಯಲ್ಲಿ ಪುತ್ತೂರು ,ಸುಳ್ಯ ಹಾಗೂ ಹಲವು ತಾಲೂಕುಗಳಲ್ಲಿ ಆಗಸ್ಟ್ 28 ರಂದು ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಪುತ್ತೂರು ತಾಲೂಕಿನಲ್ಲಿ ಎಡೆಬಿಡದೆ ಮಳೆಯಾಗುತ್ತಿದ್ದು, ಅದ್ದರಿಂದ ಅಂಗನವಾಡಿ, ಅನುಧಾನಿತ ಅನುಧಾನ ರಹಿತ ಪ್ರಾಥಮಿಕ ಪ್ರೌಢಶಾಲೆ ಹಾಗೂ ಪದವಿಪೂರ್ವ ಕಾಲೇಜುವರೆಗೆ ರಜೆ ಘೋಷಿಸಿ ತಹಶೀಲ್ದಾರ್ ಆದೇಶಿಸಿದ್ದಾರೆ. ಅದರಂತೆ ಮಂಗಳೂರು, ಮುಲ್ಕಿ ಮೂಡುಬಿದರೆ ಉಳ್ಳಾಲದಲ್ಲೂ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆಯಾಗಿದೆ.
ಆಗಸ್ಟ್ ಅಂತ್ಯದವರೆಗೂ ಮಳೆ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವ ಹಿನ್ನೆಲೆಯಲ್ಲಿ ಕರ್ನಾಟಕದ ಹಲವೆಡೆ ಆಗಸ್ಟ್ 31ರ ವರೆಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಆಗಸ್ಟ್ 31ರವರೆಗೆ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಒಳನಾಡು ಜಿಲ್ಲೆಗಳಲ್ಲಿ ಆ.28ರವರೆಗೆ ಗುಡುಗು, ಗಾಳಿ ಸಹಿತ ಅಲ್ಲಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ತಿಳಿಸಿದೆ.










































