ಮಂಗಳೂರು: (ಆ. 28): ಬಂಗಾಳ ಕೊಲ್ಲಿಯಲ್ಲಿ (Bangala Kolli) ವಾಯುಭಾರ ಕುಸಿತವಾಗಿರುವ ಹಿನ್ನೆಲೆಯಲ್ಲಿ ಕರ್ನಾಟಕದ ಹಲವೆಡೆ ಆಗಸ್ಟ್ 31ರ ವರೆಗೆ ಬಾರಿ ಮಳೆಯಾಗುವ (Karnataka Rains) ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಆಗಸ್ಟ್ 30ರವರೆಗೆ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಒಳನಾಡು ಜಿಲ್ಲೆಗಳಲ್ಲಿ ಆ.28ರವರೆಗೆ ಗುಡುಗು, ಗಾಳಿ ಸಹಿತ ಅಲ್ಲಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ತಿಳಿಸಿದೆ. ಈ ಹಿನ್ನೆಲೆಯಲ್ಲಿ ಪುತ್ತೂರು (Puttur) ಹಾಗೂ ಹಲವು ತಾಲೂಕುಗಳಲ್ಲಿ ಆಗಸ್ಟ್ 28 ರಂದು ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಪುತ್ತೂರು ತಾಲೂಕಿನಲ್ಲಿ ಎಡೆಬಿಡದೆ ಮಳೆಯಾಗುತ್ತಿದ್ದು, ಅದ್ದರಿಂದ ಅಂಗನವಾಡಿ, ಅನುಧಾನಿತ ಅನುಧಾನ ರಹಿತ ಪ್ರಾಥಮಿಕ ಪ್ರೌಢಶಾಲೆ ಹಾಗೂ ಪದವಿಪೂರ್ವ ಕಾಲೇಜುವರೆಗೆ ರಜೆ ಘೋಷಿಸಿ ತಹಶೀಲ್ದಾರ್ ಆದೇಶಿಸಿದ್ದಾರೆ. ಅದರಂತೆ ಮಂಗಳೂರು, ಮುಲ್ಕಿ ಮೂಡುಬಿದರೆ ಉಳ್ಳಾಲದಲ್ಲೂ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆಯಾಗಿದೆ.
ಉತ್ತರ ಕನ್ನಡ ಜಿಲ್ಲೆಯಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಹಿನ್ನೆಲೆಯಲ್ಲಿ 10 ತಾಲೂಕುಗಳ ಶಾಲಾ, ಪದವಿಪೂರ್ವ ಕಾಲೇಜುಗಳಿಗೆ ನಾಳೆ ರಜೆ ಘೋಷಣೆ ಮಾಡಲಾಗಿದೆ. ಜಿಲ್ಲೆಯ ಕಾರವಾರ, ಕುಮಟಾ, ಅಂಕೋಲಾ, ಹೊನ್ನಾವರ, ಭಟ್ಕಳ, ಶಿರಸಿ, ಸಿದ್ದಾಪುರ, ಯಲ್ಲಾಪುರ, ದಾಂಡೇಲಿ ಹಾಗೂ ಜೋಯಿಡಾ ತಾಲ್ಲೂಕುಗಳ ಶಾಲಾ-ಕಾಲೇಜುಗಳಿಗೆ ರಜೆ ನೀಡಲಾಗಿದೆ. ನಿರಂತರ ಮಳೆ ಹಾಗೂ ರೆಡ್ ಅಲರ್ಟ್ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಸುರಕ್ಷತಾ ದೃಷ್ಟಿಯಿಂದ ರಜೆ ಘೋಷಿಸಲಾಗಿದೆ ಎಂದು ಉತ್ತರ ಕನ್ನಡ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ಆದೇಶ ಹೊರಡಿಸಿದ್ದಾರೆ.
ಶಿವಮೊಗ್ಗದ 1 ತಾಲೂಕಿನಲ್ಲಿ ರಜೆ ಘೋಷಣೆ ಇನ್ನು ಶಿವಮೊಗ್ಗ ಜಿಲ್ಲೆಯಲ್ಲಿ ಮಳೆ ಆರ್ಭಟ ಮುಂದುವರಿದ ಹಿನ್ನೆಲೆಯಲ್ಲಿ ಸಾಗರ ತಾಲೂಕಿನ ಶಾಲಾ ಕಾಲೇಜುಗಳಿಗೆ ನಾಳೆ ರಜೆ ನೀಡಲಾಗಿದೆ. ಅಂಗನವಾಡಿ, ಶಾಲಾ-ಕಾಲೇಜಿಗೆ ನಾಳೆ ರಜೆ ಘೋಷಿಸಿ ಸಾಗರ ತಹಶೀಲ್ದಾರ್ ಆದೇಶಿಸಿದೆ. ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ.ಆಗಸ್ಟ್ ಅಂತ್ಯದವರೆಗೂ ಮಳೆ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವ ಹಿನ್ನೆಲೆಯಲ್ಲಿ ಕರ್ನಾಟಕದ ಹಲವೆಡೆ ಆಗಸ್ಟ್ 31ರ ವರೆಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಆಗಸ್ಟ್ 31ರವರೆಗೆ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಒಳನಾಡು ಜಿಲ್ಲೆಗಳಲ್ಲಿ ಆ.28ರವರೆಗೆ ಗುಡುಗು, ಗಾಳಿ ಸಹಿತ ಅಲ್ಲಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ತಿಳಿಸಿದೆ.










































