ಬಾನು ಮುಷ್ಕಾಕ್‌ರನ್ನು ‘ದಸರಾ ಉದ್ಘಾಟನೆ’ಗೆ ಆಹ್ವಾನಿಸಿರುವುದಕ್ಕೆ ನನ್ನ ತಕರಾರು ಇಲ್ಲ : ಎಚ್‌ಡಿಕೆ

Picture of Savistara

Savistara

Bureau Report

ಬೆಂಗಳೂರು : ಲೇಖಕಿ ಬಾನು ಮುಷ್ಕಾಕ್ ಅವರನ್ನು ದಸರಾಉದ್ಘಾಟನೆಗೆ ಆಹ್ವಾನಿಸಿರುವುದಕ್ಕೆ ನನ್ನ ತಕರಾರು ಏನೂ ಇಲ್ಲ. ಆದರೆ ಈ ವಿಚಾರದಲ್ಲಿ ಕೆಲವರು ಉದ್ಧಟತನ ತೋರಿಸುತ್ತಿದ್ದಾರೆ. ಅದು ಬೇಡ ಎಂದು ಎಚ್.ಡಿ.ಕುಮಾರಸ್ವಾಮಿ ಹೇಳಿದರು.ನಗರದಲ್ಲಿ ಇಂದು ಮಾಧ್ಯಮದವರು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದ ಕೇಂದ್ರ ಸಚಿವರು, ತಾಯಿಯ ಮೆರವಣಿಗೆ ಜವಾಬ್ದಾರಿಯನ್ನು ಕೊಟ್ಟಿದ್ದಾರೆ. ಇದಕ್ಕೆ ನನ್ನ ತಕರಾರು ಏನೂ ಇಲ್ಲ. ಆದರೆ ಕೆಲವರು ಈ ಬಗ್ಗೆ ಬಹಳ ಉದ್ಧಟತನದಿಂದ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಅದು ಧಾರ್ಮಿಕ ಕ್ಷೇತ್ರದ ವಿಚಾರದಲ್ಲಿ ಬೇಡ, ಬೇಕಾಗಿಯೂ ಇಲ್ಲ. ಬಾನು ಮುಷ್ಕಾಕ್ ಅವರಿಂದ ಪೂಜೆ ಮಾಡಿಸುವುದು ಬೇರೆ. ಆದರೆ ಚಾಮುಂಡೇಶ್ವರಿ ದೇಗುಲ ಹಿಂದೂಗಳ ಆಸ್ತಿಯಲ್ಲ ಅಂತಾರೆ. ಹಿಂದೂ ಧಾರ್ಮಿಕ ಕ್ಷೇತ್ರಗಳಿಗೆ ಈ ರೀತಿ ಅಪಚಾರ ಸರಿಯಲ್ಲ. ಇದು ಕಾಂಗ್ರೆಸ್ ಸರಕಾರಕ್ಕೆ ಆಪತ್ತು ತರಲಿದೆ ಎಂಬುದನ್ನು ಮರೆಯಬಾರದು ಎಂದರು.

‘ಧರ್ಮಸ್ಥಳ’ ಸರಕಾರ ನಡೆದುಕೊಂಡಿದ್ದು ಸರಿಯಲ್ಲ:

ಧರ್ಮಸ್ಥಳದ ವಿಚಾರದಲ್ಲಿ ಈ ಸರಕಾರ ನಡೆದುಕೊಂಡಿದ್ದು ಸರಿಯಲ್ಲ, ಅದಕ್ಕೆ ಮುಂದಿನ ದಿನಗಳಲ್ಲಿ ಶ್ರೀ ಮಂಜುನಾಥ ಸ್ವಾಮಿ ಶಿಕ್ಷೆ ನೀಡುವುದು ಖಚಿತ. ಆರಂಭಿಕ ಹಂತದಿಂದ ಕೂಡ ಸರಕಾರ ಸರಿಯಾಗಿ ನಡೆದುಕೊಂಡಿಲ್ಲ. ಇಲ್ಲಿ ರಾಜಕೀಯ ಅಥವಾ ಧರ್ಮವನ್ನು ತರುವುದಿಲ್ಲ. ಆದರೆ ಕ್ಷೇತ್ರದ ಬಗ್ಗೆ ಸರಕಾರ ನಡೆದುಕೊಂಡ ರೀತಿ ಮಾತ್ರ ಅಪಮಾನ ಉಂಟು ಮಾಡುವ ರೀತಿಯಲ್ಲಿ ನಡೆದುಕೊಂಡಿದೆ.ಇದು ಅಕ್ಷಮ್ಯ ಎಂದು ಅವರು ಹೇಳಿದರು.ಆರಂಭದಿಂದಲೂ ತನಿಖೆಯ ನಾಟಕ ನಡೆದಿದೆ. ಸಿ.ಎಸ್‌. ದ್ವಾರಕಾನಾಥ್ ಎನ್ನುವ ವ್ಯಕ್ತಿ ಮೊದಲು ದೂರು ನೀಡಿರುತ್ತಾರೆ. ಅವರು ದೂರು ನೀಡಿದ ತಕ್ಷಣ ಮುಖ್ಯಮಂತ್ರಿಗಳು ಅತ್ಯಂತ ವೇಗವಾಗಿ ಕ್ರಮ ಕೈಗೊಂಡು ಎಸ್ ಐಟಿ ರಚನೆಗೆ ಆದೇಶ ಮಾಡುತ್ತಾರೆ. ಇದರ ಹಿಂದೆ ಕೆಲ ಎಡಪಂಥೀಯ ಶಕ್ತಿಗಳ ಹುನ್ನಾರದ ಜತೆಗೆ ಕಾಣದ ಶಕ್ತಿಗಳ ಬಹುದೊಡ್ಡ ಕುತಂತ್ರ ಅಡಗಿದೆ ಎಂದು ಅವರು ಆಪಾದಿಸಿದರು.

ಡಿಸಿಎಂ ಆರೆಸ್ಸೆಸ್ ಗೀತೆ ಹಾಡಿರುವ ಬಗ್ಗೆ ಕೇಳಲಾದ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಅವರು, ಡಿ.ಕೆ.ಶಿವಕುಮಾ‌ರ್ ಅವರು ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತ. ಅವರು ಸದನದಲ್ಲಿ ಆರೆಸ್ಸೆಸ್‌ ಗೀತೆ ಹಾಡಿದ್ದಾರೆ. ತಮಾಷೆಗೂ ಆ ರೀತಿ ಹೇಳುವುದನ್ನು ಕಾಂಗ್ರೆಸ್ ನಾಯಕರು ಒಪ್ಪಲ್ಲ. ಈಗ ಅವರಿಗೆ ಕ್ಷಮೆ ಕೇಳುವ ಪರಿಸ್ಥಿತಿ ಎದುರಾಗಿದೆ ಎಂದರು

[t4b-ticker]
error: Content is protected !!