ಸೆ.7ರಂದು ಚಂದ್ರಗ್ರಹಣ| ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ದೇವರ ದರ್ಶನ ಹಾಗೂ ಸೇವೆಗಳಲ್ಲಿ ಬದಲಾವಣೆ

Picture of Savistara

Savistara

Bureau Report

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸೆ. 7 ರಂದು ಚಂದ್ರಗ್ರಹಣ ಇರುವುದರಿಂದ ಆ ದಿನ ಶ್ರೀ ದೇವಳದಲ್ಲಿ ದಿನ ನಿತ್ಯದ ಸೇವೆ ಮತ್ತು ದರುಶನ ಹಾಗೂ ಭಕ್ತಾದಿಗಳ ಸೇವಾ ಸಮಯಗಳಲ್ಲಿ ವ್ಯತ್ಯಯ ಉಂಟಾಗಲಿದೆ. ಭಕ್ತರು ಸಹಕರಿಸಬೇಕು ಎಂದು ಶ್ರೀ ದೇವಳದ ಪ್ರಕಟಣೆ ತಿಳಿಸಿದೆ.ಅಂದು ಮಧ್ಯಾಹ್ನ ಶ್ರೀ ದೇವರ ಮಧ್ಯಾಹ್ನದ ಮಹಾಪೂಜೆ ಯು ಬೆಳಗ್ಗೆ 11 ಗಂಟೆಗೆ ನಡೆಯಲಿದೆ.ರಾತ್ರಿಯ ಮಹಾಪೂಜೆಯು ಸಂಜೆ ಗಂಟೆ 5 ಕ್ಕೆ ನೆರವೇರಲಿದೆ. ಅಂದು ರಾತ್ರಿ ಭೋಜನ ಪ್ರಸಾದ ಇರುವುದಿಲ್ಲ.ಅಲ್ಲದೆ ಸಾಯಂಕಾಲದ ಆಶ್ಲೇಷ ಬಲಿ ಸೇವೆ ಇರುವುದಿಲ್ಲ.

ಸರ್ಪಸಂಸ್ಕಾರ ಆರಂಭ ಇಲ್ಲ

ಆದಿತ್ಯವಾರ ಸರ್ಪಸಂಸ್ಕಾರ ಸೇವೆ ಆರಂಭವಾಗುವುದಿಲ್ಲ.ಶನಿವಾರ ಆರಂಭಗೊಂಡ ಸೇವೆಯು ಆದಿತ್ಯವಾರ ಕೊನೆಗೊಳ್ಳುತ್ತದೆ.ಆದರೆ ಆದಿತ್ಯವಾರ ಸೇವಾರಂಭ ಇಲ್ಲ. ಸಾಯಂಕಾಲ ಗಂಟೆ 5.00 ರಿಂದ ಶ್ರೀ ದೇವರ ದರುಶನ ಇರುವುದಿಲ್ಲ. ಸೆ. 08 ರಂದು ಪಂಚಾಮೃತ ಮಹಾಭಿಷೇಕ ಸೇವೆ ಇರುವುದಿಲ್ಲ. ಆದುದರಿಂದ ಭಕ್ತರು ಸಹಕರಿಸಬೇಕು ಎಂದು ಶ್ರೀ ದೇವಳದ ಪ್ರಕಟಣೆ ತಿಳಿಸಿದೆ.

News Updates

ಅಂತಿಮ ಹಂತ ತಲುಪಿದ ಕೋಟೆಗಂಗೂರು ರೈಲ್ವೆ ಕೋಚಿಂಗ್ ಡಿಪೋ ಕಾಮಗಾರಿ; ಸಂಸದ ಬಿ.ವೈ.ರಾಘವೇಂದ್ರ ಅವರ ನಿರಂತರ ಪರಿಶ್ರಮದ ಪ್ರತಿಫಲ | ಯೋಜನೆಗೆ ಇಲ್ಲಿವರೆಗೆ 58.82 ಕೋಟಿ ರೂ. ವೆಚ್ಚ; ನಿಲ್ದಾಣ ಹಾಗೂ ಸೇವಾ ಕಟ್ಟಡಗಳ ನಿರ್ಮಾಣ ಕಾಮಗಾರಿ ಪೂರ್ಣ; ಪ್ರಸಕ್ತ ಸಾಲಿಗೆ 9.5 ಕೋಟಿ ರೂ. ಅನುದಾನ ಬಿಡುಗಡೆ

[t4b-ticker]
error: Content is protected !!