ಹಿಂದೂಗಳೆಂದು ಬರೆಸಬೇಡಿ: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಕರೆ

Picture of Savistara

Savistara

Bureau Report

ಬೆಂಗಳೂರು: ಜಾತಿವಾರು ಸಮೀಕ್ಷೆ ವೇಳೆ ಲಿಂಗಾಯತ ವೀರಶೈವಸಮುದಾಯದ ಯಾರೂ, ಧರ್ಮದ ಕಾಲಂನಲ್ಲಿ ಹಿಂದೂ ಎಂದು ನಮೂದಿಸಬಾರದು. ಬದಲಿಗೆ ‘ವೀರಶೈವ ಲಿಂಗಾಯತ’ ಎಂದು ಬರೆಯಿಸಿ ಎಂದು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಕರೆ ನೀಡಿದೆ.

ಮಹಾಸಭಾದ ಮಹಾಪ್ರಧಾನ ಕಾರ್ಯದರ್ಶಿ ಈಶ್ವರ ಬಿ.ಖಂಡ್ರೆ ಅವರು, ನಗರದಲ್ಲಿ ಭಾನುವಾರ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಈ ಕರೆ ನೀಡಿದರು. ‘ಹಿಂದೂ ಸನಾತನ ಧರ್ಮಕ್ಕೂ, ವೀರಶೈವ ಲಿಂಗಾಯತ ಧರ್ಮಕ್ಕೂ ಸಂಬಂಧವಿಲ್ಲ. ಹೀಗಾಗಿ ನಮ್ಮ ಸಮುದಾಯದ ಎಲ್ಲರೂ, ತಾವು ‘ವೀರಶೈವ ಲಿಂಗಾಯತ’ ಧರ್ಮದವರು ಎಂದೇ ಬರೆಸಬೇಕು’ ಎಂದು ಹೇಳಿದರು.’ಜಾತಿಗಳ ಕಾಲಂನಲ್ಲಿ ‘ಲಿಂಗಾಯತ’ ಅಥವಾ ‘ವೀರಶೈವ’ ಅಥವಾ ‘ವೀರಶೈವ ಲಿಂಗಾಯತ’ ಎಂದು ಬರೆಸಬೇಕು. ಉಪಜಾತಿಯ ಕಾಲಂನಲ್ಲಿ, ನಿಮ್ಮ ಉಪಜಾತಿಗಳ ಹೆಸರನ್ನು ಸ್ಪಷ್ಟವಾಗಿ ಬರೆಸಬೇಕು. ಗಣತಿದಾರರು ಸರಿಯಾಗಿ ಮಾಹಿತಿ ದಾಖಲಿಸಿದ್ದಾರೆಯೇ ಎಂಬುದನ್ನು ಖಚಿತಪಡಿಸಿಕೊಳ್ಳಬೇಕು’ ಎಂದರು.

[t4b-ticker]
error: Content is protected !!