ಬಿಜೆಪಿ ಸಂಸದರ ಕಾರ್ಯಾಗಾರಕ್ಕೆ ಭೇಟಿ ನೀಡಿದ ಮೋದಿ: ಸಂಸದರ ಮಧ್ಯೆ ಕುಳಿತ ಪ್ರಧಾನಿ

Picture of Savistara

Savistara

Bureau Report

ನವದೆಹಲಿ: ಎನ್‌ಡಿಎ ಮೈತ್ರಿಕೂಟದ ಸಂಸದರಿಗಾಗಿ ಬಿಜೆಪಿಆಯೋಜಿಸಿದ್ದ ಕಾರ್ಯಾಗಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಭಾಗವಹಿಸಿದ್ದರು. ಈ ವೇಳೆ ಅವರು ಕೊನೆಯ ಸಾಲಿನಲ್ಲಿ ಸಾಮಾನ್ಯರಂತೆ ಕುಳಿತಿದ್ದರು ಎಂದು ಸಂಸದರು ಹೇಳಿದರು.

ಮೋದಿ ಅವರು ಭಾಗಿಯಾಗಿದ್ದ ಫೋಟೊವನ್ನು ಸಂಸದ ರವಿ ಕಿಶನ್ ಹಂಚಿಕೊಂಡಿದ್ದಾರೆ. ‘ಪ್ರಧಾನಿ ಮೋದಿ ಅವರು ಕಾರ್ಯಾಗಾರದಲ್ಲಿ ಕೊನೆಯ ಸಾಲಿನಲ್ಲಿ ಕುಳಿತಿರುವುದು ಬಿಜೆಪಿಯ ಶಕ್ತಿಯನ್ನು ಬಿಂಬಿಸುತ್ತದೆ. ಪ್ರತಿ ಕಾರ್ಯಕರ್ತನೂ ಬಿಜೆಪಿ ಭಾಗವಾಗಿರುತ್ತಾನೆ’ ಎಂದು ಅವರು ಬರೆದುಕೊಂಡಿದ್ದಾರೆ.

ಸಂಸತ್ತಿನ ಸಂಕೀರ್ಣದಲ್ಲಿರುವ ಜಿಎಂಸಿ ಬಾಲಯೋಗಿ ಸಭಾಂಗಣದಲ್ಲಿ ಬಿಜೆಪಿ ಆಯೋಜಿಸಿದ್ದ ಎರಡು ದಿನಗಳ ಕಾರ್ಯಾಗಾರದಲ್ಲಿ ಪಕ್ಷದ ಇತಿಹಾಸ, ಬೆಳವಣಿಗೆ ಸೇರಿದಂತೆ ಸಂಸದರ ದಕ್ಷತೆ ಹೆಚ್ಚಿಸಲು ಅಗತ್ಯವಿರುವ ಸಲಹೆಗಳನ್ನು ನೀಡಲಾಯಿತು.ಸರಕು ಮತ್ತು ಸೇವಾ ತೆರಿಗೆಯಲ್ಲಿನ (ಜಿಎಸ್‌ಟಿ) ಇತ್ತೀಚಿನ ಸುಧಾರಣೆಗಳನ್ನು ಸಂಸದರು ಶ್ಲಾಘಿಸಿದರು.

*2027ಕ್ಕೆ ಅಭಿವೃದ್ಧಿ ಹೊಂದಿದ ಭಾರತದ ಕಡೆಗೆ’ ಹಾಗೂ ‘ಸಂಸದರಿಂದ ಸಾಮಾಜಿಕ ಜಾಲತಾಣಗಳ ಪರಿಣಾಮಕಾರಿ ಬಳಕೆ’ ಎಂಬ ವಿಷಯಗಳ ಕುರಿತು ಕಾರ್ಯಾಗಾರದ ಮೊದಲ ದಿನ (ಭಾನುವಾರ) ಚರ್ಚಿಸಲಾಯಿತು.ಕೃಷಿ, ರಕ್ಷಣೆ, ಶಿಕ್ಷಣ, ರೈಲ್ವೆ ಮತ್ತು ಸಾರಿಗೆ ಸೇರಿದಂತೆ ಅನೇಕ ಕ್ಷೇತ್ರಗಳ ಕುರಿತೂ ಸಂಸದರು ಚರ್ಚಿಸಿದರು.

News Updates

ಅಂತಿಮ ಹಂತ ತಲುಪಿದ ಕೋಟೆಗಂಗೂರು ರೈಲ್ವೆ ಕೋಚಿಂಗ್ ಡಿಪೋ ಕಾಮಗಾರಿ; ಸಂಸದ ಬಿ.ವೈ.ರಾಘವೇಂದ್ರ ಅವರ ನಿರಂತರ ಪರಿಶ್ರಮದ ಪ್ರತಿಫಲ | ಯೋಜನೆಗೆ ಇಲ್ಲಿವರೆಗೆ 58.82 ಕೋಟಿ ರೂ. ವೆಚ್ಚ; ನಿಲ್ದಾಣ ಹಾಗೂ ಸೇವಾ ಕಟ್ಟಡಗಳ ನಿರ್ಮಾಣ ಕಾಮಗಾರಿ ಪೂರ್ಣ; ಪ್ರಸಕ್ತ ಸಾಲಿಗೆ 9.5 ಕೋಟಿ ರೂ. ಅನುದಾನ ಬಿಡುಗಡೆ

News Updates

ಅಂತಿಮ ಹಂತ ತಲುಪಿದ ಕೋಟೆಗಂಗೂರು ರೈಲ್ವೆ ಕೋಚಿಂಗ್ ಡಿಪೋ ಕಾಮಗಾರಿ; ಸಂಸದ ಬಿ.ವೈ.ರಾಘವೇಂದ್ರ ಅವರ ನಿರಂತರ ಪರಿಶ್ರಮದ ಪ್ರತಿಫಲ | ಯೋಜನೆಗೆ ಇಲ್ಲಿವರೆಗೆ 58.82 ಕೋಟಿ ರೂ. ವೆಚ್ಚ; ನಿಲ್ದಾಣ ಹಾಗೂ ಸೇವಾ ಕಟ್ಟಡಗಳ ನಿರ್ಮಾಣ ಕಾಮಗಾರಿ ಪೂರ್ಣ; ಪ್ರಸಕ್ತ ಸಾಲಿಗೆ 9.5 ಕೋಟಿ ರೂ. ಅನುದಾನ ಬಿಡುಗಡೆ

[t4b-ticker]
error: Content is protected !!