ಗ್ರಾ.ಪಂ, ಜಿ. ಪಂ, ತಾ.ಪಂ ಮತ್ತು ನಗರಸಭೆ ಚುನಾವಣೆಗೆ ಸನ್ನದ :ರಾಜ್ಯ ಚುನಾವಣಾ ಆಯೋಗ

Picture of Savistara

Savistara

Bureau Report

ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸಂಬಂಧಿಸಿದ ಕ್ಷೇತ್ರ ವಿಂಗಡಣೆ ಮತ್ತು ಮೀಸಲಾತಿ ಪಟ್ಟಿಯನ್ನು ಸರ್ಕಾರವು ಜನವರಿ ಅಥವಾ ಫೆಬ್ರವರಿ 2026ರ ಒಳಗೆ ಒದಗಿಸಿದರೆ, ಗ್ರಾಮ ಪಂಚಾಯಿತಿ, ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ, ಮತ್ತು ನಗರಸಭೆ ಚುನಾವಣೆಗಳನ್ನು ನಡೆಸಲು ರಾಜ್ಯ ಚುನಾವಣಾ ಆಯೋಗ ಸಿದ್ಧವಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಜಿ.ಎಸ್. ಸಂಗ್ರೇಶಿ ತಿಳಿಸಿದರು.

ಬೆಂಗಳೂರು : ಸ್ಥಳೀಯ ಸಂಸ್ಥೆಗಳ ಚುನಾವಣೆಗೆಸಂಬಂಧಿಸಿದ ಕ್ಷೇತ್ರ ವಿಂಗಡಣೆ ಮತ್ತು ಮೀಸಲಾತಿ ಪಟ್ಟಿಯನ್ನು ಸರ್ಕಾರವು ಜನವರಿ ಅಥವಾ ಫೆಬ್ರವರಿ 2026ರ ಒಳಗೆ ಒದಗಿಸಿದರೆ, ಗ್ರಾಮ ಪಂಚಾಯಿತಿ, ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ, ಮತ್ತು ನಗರಸಭೆ ಚುನಾವಣೆಗಳನ್ನು ನಡೆಸಲು ರಾಜ್ಯ ಚುನಾವಣಾ ಆಯೋಗ ಸಿದ್ಧವಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಜಿ.ಎಸ್. ಸಂಗ್ರೇಶಿ ತಿಳಿಸಿದರು.

ಕೋಟಿಲಿಂಗೇಶ್ವರ ದೇವಾಲಯ ಮತ್ತು ಕೆಜಿಎಫ್ ಚಿನ್ನದ ಗಣಿಗಳ ಪ್ರದೇಶಕ್ಕೆ ಭಾನುವಾರ ಭೇಟಿ ನೀಡಿದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಚುನಾವಣೆಗಳನ್ನು ಇವಿಎಂ ಯಂತ್ರಗಳು ಅಥವಾ ಬ್ಯಾಲೆಟ್ ಪೇಪರ್‌ಗಳ ಮೂಲಕ ನಡೆಸಲು ಅವಕಾಶವಿದೆ. ಇದರಲ್ಲಿ ಯಾವ ವಿಧಾನವನ್ನು ಬಳಸಬೇಕು ಎಂಬುದು ಸರ್ಕಾರದ ನಿರ್ಧಾರಕ್ಕೆ ಬಿಟ್ಟಿದೆ ಎಂದರು.

ಬ್ಯಾಲೆಟ್ ಪೇಪರ್ ಬಳಕೆಯಿಂದ ಖರ್ಚು ಹೆಚ್ಚು: ಚುನಾವಣೆಗೆ ಇವಿಎಂ ಮತ್ತು ಬ್ಯಾಲೆಟ್ ಪೇಪರ್ ಎಂಬ ಎರಡೇ ಆಯ್ಕೆಗಳಿವೆ. ಬ್ಯಾಲೆಟ್ ಪೇಪರ್ ಬಳಸಿದರೆ ಖರ್ಚು ಹೆಚ್ಚಾಗುತ್ತದೆ ಮತ್ತು ಹೆಚ್ಚಿನ ಸಮಯ ಬೇಕಾಗುತ್ತದೆ. ಆದರೆ, ಸರ್ಕಾರ ಯಾವ ವಿಧಾನವನ್ನು ಆಯ್ಕೆ ಮಾಡಿದರೂ, ಆಯೋಗವು ಆ ವಿಧಾನದ ಮೂಲಕ ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ನಡೆಸಲಿದೆ ಎಂದು ಸಂಗ್ರೇಶಿ ಸ್ಪಷ್ಟಪಡಿಸಿದರು.

ವಿಧಾನಸಭೆ, ಲೋಕಸಭೆಗೆ ಬ್ಯಾಲೆಟ್ ಪೇಪ‌ರ್?

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಸಿದರೆ, ಭವಿಷ್ಯದಲ್ಲಿ ವಿಧಾನಸಭೆ ಮತ್ತು ಲೋಕಸಭೆ ಚುನಾವಣೆಗಳಿಗೂ ಇದೇ ವಿಧಾನ ಬಳಸಲಾಗುವುದೇ ಎಂಬ ಪ್ರಶ್ನೆಗೆ, ಅವರು ಇದು ಕೇಂದ್ರ ಚುನಾವಣಾ ಆಯೋಗದ ವ್ಯಾಪ್ತಿಗೆ ಸಂಬಂಧಿಸಿದೆ ಎಂದರು. ರಾಜ್ಯ ಚುನಾವಣಾ ಆಯೋಗದ ವ್ಯಾಪ್ತಿಯು ಕೇವಲ ಪಂಚಾಯಿತಿ ಮತ್ತು ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸೀಮಿತವಾಗಿದೆ ಎಂದು ಹೇಳಿದರು.

ಕ್ಷೇತ್ರ ವಿಂಗಡಣೆ ಮತ್ತು ಮೀಸಲಾತಿಕ್ಷೇತ್ರ ಪುನರ್ವಿಂಗಡಣೆ ಕಾರ್ಯವು ಇನ್ನೂ ಕೆಲವು ಭಾಗಗಳಲ್ಲಿ ಬಾಕಿಯಿದೆ. ಮೀಸಲಾತಿ ಪಟ್ಟಿಯನ್ನು ತಯಾರಿಸುವ ಕಾರಣದಿಂದ ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ಮುಂದೂಡಲಾಗಿದೆ. ಈ ಸಂಬಂಧ ಸರ್ಕಾರದೊಂದಿಗೆ ಚುನಾವಣಾ ಆಯೋಗವು ಪತ್ರ ವ್ಯವಹಾರ ನಡೆಸಿದೆ. ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆಗೆ ಸರ್ಕಾರವು ಮೂರು ತಿಂಗಳ ಕಾಲಾವಧಿಯನ್ನು ಕೋರಿದೆ. ಕೆಲವು ಗ್ರಾಮ ಪಂಚಾಯಿತಿಗಳು ಪಟ್ಟಣ ಪಂಚಾಯಿತಿಗಳಾಗಿವೆ ಮತ್ತು ಕೆಲವು ಹಳ್ಳಿಗಳು ನಗರಸಭೆ ಪುರಸಭೆ ವ್ಯಾಪ್ತಿಗೆ ಸೇರಿಕೊಂಡಿವೆ. ಇದರಿಂದಾಗಿ ಕ್ಷೇತ್ರ ಪುನರ್ವಿಂಗಡಣೆಯ ಅಗತ್ಯವಿದೆ. ರಾಜ್ಯದ 11-12 ಜಿಲ್ಲೆಗಳಲ್ಲಿ ಈ ಕಾರ್ಯ ನಡೆಯಬೇಕಾಗಿದೆ ಎಂದರು.

ಮೀಸಲಾತಿ ಪಟ್ಟಿಯ ಅಗತ್ಯ2023ರಲ್ಲಿ ಕ್ಷೇತ್ರ ಪುನರ್ವಿಂಗಡಣೆಯಾಗಿರುವುದರಿಂದ, ಜಿಲ್ಲಾ ಮತ್ತು ತಾಲೂಕು ಪಂಚಾಯಿತಿಗಳಿಗೆ ಹೊಸ ಮೀಸಲಾತಿ ಪಟ್ಟಿಯನ್ನು ಸರ್ಕಾರವು ಒದಗಿಸಬೇಕು. ಹೊಸದಾಗಿ ಸೃಷ್ಟಿಯಾದ ಕ್ಷೇತ್ರಗಳಿಗೆ ಹಳೆಯ ಮೀಸಲಾತಿಯನ್ನು ಇಟ್ಟುಕೊಂಡು ಚುನಾವಣೆ ನಡೆಸಲಾಗುವುದಿಲ್ಲ. ಆದರೆ, 192 ನಗರಸಭೆ ಮತ್ತು ಪುರಸಭೆಗಳಿಗೆ ಹೊಸ ಮೀಸಲಾತಿ ಪಟ್ಟಿ ಒದಗಿಸದಿದ್ದರೆ, ಹಳೆಯ ಮೀಸಲಾತಿಯ ಆಧಾರದ ಮೇಲೆ ಚುನಾವಣೆ ನಡೆಸಲಾಗುವುದು ಎಂದರು.ಜನವರಿ ಫೆಬ್ರವರಿಯೊಳಗೆ ಕಾರ್ಯ ಮುಕ್ತಾಯಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಒತ್ತಡ ಹೇರಲಾಗುತ್ತಿದೆ. ಬೆಂಗಳೂರಿನಲ್ಲಿ ಪ್ರಸ್ತುತ ಚುನಾವಣೆ ನಡೆಯುತ್ತಿದೆ. ನವೆಂಬರ್ 1ರ ಒಳಗೆ ಕ್ಷೇತ್ರ ಪುನರ್ವಿಂಗಡಣೆ ವರದಿಯನ್ನು ಸಲ್ಲಿಸಬೇಕು ಮತ್ತು ನವೆಂಬರ್ 30ರ ಒಳಗೆ ಮೀಸಲಾತಿ ಪಟ್ಟಿಯನ್ನು ಒದಗಿಸಬೇಕು. ಇದಕ್ಕೆ 3-1 ತಿಂಗಳ ಕಾಲಾವಧಿ ಬೇಕಾಗಿದ್ದು, ಸುಪ್ರೀಂ ಕೋರ್ಟ್ ಇದಕ್ಕೆ ಅನುಮತಿ ನೀಡಿದೆ. ಜನವರಿ ಅಥವಾ ಫೆಬ್ರವರಿ 2026ರ ಒಳಗೆ ಈ ಕಾರ್ಯಗಳನ್ನು ಪೂರ್ಣಗೊಳಿಸಲಾಗುವುದು ಎಂದು ಸಂಗ್ರೇಶಿ ತಿಳಿಸಿದರು.

[t4b-ticker]
error: Content is protected !!