ತಿರುನೆಲ್ವೇಲಿಯಿಂದ ಶಿವಮೊಗ್ಗಕ್ಕೆ ಹಾಗೂ ಶಿವಮೊಗ್ಗದಿಂದ ತಿರುನೆಲ್ವೇಲಿಗೆ ವಿಶೇಷ ರೈಲು : ಬಿ.ವೈ. ರಾಘವೇಂದ್ರ

Picture of Savistara

Savistara

Bureau Report

ಶಿವಮೊಗ್ಗ : ಸೆಪ್ಟೆಂಬರ್ 03.2025 : ಶಿವಮೊಗ್ಗದಿಂದ ತಿರುನೆಲ್ವೇಲಿಗೆ ಮತ್ತು ತಿರುನೆಲ್ವೇಲಿಯಿಂದ ಶಿವಮೊಗ್ಗಕ್ಕೆ ಒಂದು ಹೊಸ ರೈಲನ್ನು ಬಿಡುವಂತೆ ಸಾರ್ವಜನಿಕರು ಬೇಡಿಕೆ ಇಟ್ಟಿದ್ದು ಸಾರ್ವಜನಿಕರ ಒತ್ತಾಯದ ಮೇರೆಗೆ ಕೇಂದ್ರ ಮತ್ತು ರಾಜ್ಯ ರೈಲ್ವೆ ಸಚಿವರ ಮುಂದೆ ಒಂದು ಹೊಸದಾಗಿ ರೈಲನ್ನು ಮಂಜೂರು ಮಾಡುವಂತೆ ಕೋರಿಕೆ ಸಲ್ಲಿಸಲಾಗಿತ್ತು.ಕೇಂದ್ರದ ರೈಲ್ವೆ ಸಚಿವರು ಸಂಸದರ ಮನವಿಯನ್ನು ಪುರಸ್ಕರಿಸಿ, ಪ್ರಯಾಣಿಕರು ರೈಲನ್ನು ಬಳಕೆ ಮಾಡಿಕೊಳ್ಳುವ ಸಲುವಾಗಿ ಪ್ರಾಯೋಗಿಕವಾಗಿ ರೈಲು ಗಾಡಿ ಸಂಖ್ಯೆ 06103 ದಿನಾಂಕ: 07.09.2025 ರಂದು ಮದ್ಯಾಹ್ನ 03.40 ಕ್ಕೆ ತಿರುನೆಲ್ವೇಲಿಯಿಂದ ಹೊರಟು ಶಿವಮೊಗ್ಗಕ್ಕೆ ದಿನಾಂಕ: 08.09.2025 ರ ಮದ್ಯಾಹ್ನ 01.00 ಕ್ಕೆ ತಲುಪಲಿದೆ. ಹಾಗೂ ಅದೇ ದಿನ ಮದ್ಯಾಹ್ನ ರೈಲು ಗಾಡಿ ಸಂಖ್ಯೆ 06104 ಶಿವಮೊಗ್ಗದಿಂದ ಮದ್ಯಾಹ್ನ 2.20 ಕ್ಕೆ ಹೊರಟು ದಿನಾಂಕ:09.09.2025 ರ ಬೆಳಗ್ಗೆ 09.53 ಕ್ಕೆ ತಿರುನೆಲ್ವೇಲಿಗೆ ತಲುಪಲಿದೆ. ವಿಶೇಷವಾಗಿ ಮುಂದೆ ಬರಲಿರುವ ದಸರಾ, ದೀಪಾವಳಿ ಪ್ರಯುಕ್ತ ಪ್ರಯಾಣೀಕರಿಗೆ ಅನುಕೂಲವಾಗಲೆಂದು ಈ ರೈಲು ವಾರಕ್ಕೆ ಒಮ್ಮೆ ಹಾಗೂ ಎಂಟು ವಾರಗಳು (ಪ್ರತಿ ಬಾನುವಾರ ತಿರುನೆಲ್ವೇಲಿಯಿಂದ ಹೊರಟು ಮತ್ತು ಪ್ರತಿ ಸೋಮವಾರ ಶಿವಮೊಗ್ಗದಿಂದ ಹೊರಡಲಿದೆ 07.09.2025 ರಿಂದ 27.10.2025ರ ವರೆಗೆ) ಪ್ರಾಯೋಗಿಕವಾಗಿ ಸಂಚರಿಸಲಿದೆ. ಶಿವಮೊಗ್ಗದಿಂದ ಬೀರೂರು, ತುಮಕೂರು, ಬೆಂಗಳೂರು, ಜೋಲಾರ್‌ಪೆಟ್ಟೆ, ಮಧುರೈ, ಮೂಲಕ ತಿರುನೆಲ್ವೇಲಿಗೆ ತಲುಪಲಿದೆ.ಈ ರೈಲನ್ನು ಸಾರ್ವಜನಿಕರು ಹೆಚ್ಚಾಗಿ ಬಳಕೆ ಮಾಡಿ ಕೊಂಡಲ್ಲಿ ಕಾರ್ಯಸಾಧ್ಯತೆ (Feasibility) ಕುರಿತು ಮಾನ್ಯ ರೈಲ್ವೆ ಸಚಿವರ ಮನವೊಲಿಸಿ ಇದೇ ರೈಲನ್ನು ಖಾಯಂ ಆಗಿ ಶಿವಮೊಗ್ಗದಿಂದ ತಿರುನೆಲ್ವೇಲಿವರೆಗೆ ಓಡಿಸಲು ಅಗತ್ಯ ಕ್ರಮ ತೆಗೆದುಕೊಳ್ಳಲಾಗುವುದೆಂದು, ಹಾಗೂ ಸಾರ್ವಜನಿಕರು ಈ ರೈಲನ್ನು ಹೆಚ್ಚಿನ ಸಂಖ್ಯೆಯಲ್ಲಿ ಬಳಕೆ ಮಾಡಿ ಕೊಳ್ಳುವಂತೆ ಸಂಸದರು ಪತ್ರಿಕಾ ಪ್ರಕಟಣೆಯಲ್ಲಿ ಕೋರಿದ್ದಾರೆ.

News Updates

ಅಂತಿಮ ಹಂತ ತಲುಪಿದ ಕೋಟೆಗಂಗೂರು ರೈಲ್ವೆ ಕೋಚಿಂಗ್ ಡಿಪೋ ಕಾಮಗಾರಿ; ಸಂಸದ ಬಿ.ವೈ.ರಾಘವೇಂದ್ರ ಅವರ ನಿರಂತರ ಪರಿಶ್ರಮದ ಪ್ರತಿಫಲ | ಯೋಜನೆಗೆ ಇಲ್ಲಿವರೆಗೆ 58.82 ಕೋಟಿ ರೂ. ವೆಚ್ಚ; ನಿಲ್ದಾಣ ಹಾಗೂ ಸೇವಾ ಕಟ್ಟಡಗಳ ನಿರ್ಮಾಣ ಕಾಮಗಾರಿ ಪೂರ್ಣ; ಪ್ರಸಕ್ತ ಸಾಲಿಗೆ 9.5 ಕೋಟಿ ರೂ. ಅನುದಾನ ಬಿಡುಗಡೆ

News Updates

ಅಂತಿಮ ಹಂತ ತಲುಪಿದ ಕೋಟೆಗಂಗೂರು ರೈಲ್ವೆ ಕೋಚಿಂಗ್ ಡಿಪೋ ಕಾಮಗಾರಿ; ಸಂಸದ ಬಿ.ವೈ.ರಾಘವೇಂದ್ರ ಅವರ ನಿರಂತರ ಪರಿಶ್ರಮದ ಪ್ರತಿಫಲ | ಯೋಜನೆಗೆ ಇಲ್ಲಿವರೆಗೆ 58.82 ಕೋಟಿ ರೂ. ವೆಚ್ಚ; ನಿಲ್ದಾಣ ಹಾಗೂ ಸೇವಾ ಕಟ್ಟಡಗಳ ನಿರ್ಮಾಣ ಕಾಮಗಾರಿ ಪೂರ್ಣ; ಪ್ರಸಕ್ತ ಸಾಲಿಗೆ 9.5 ಕೋಟಿ ರೂ. ಅನುದಾನ ಬಿಡುಗಡೆ

[t4b-ticker]
error: Content is protected !!