ಪ್ರತಿಭಟನಾಕಾರರಿಂದ ನೇಪಾಳ ಪ್ರಧಾನಿ ನಿವಾಸಕ್ಕೆ ಬೆಂಕಿ: ಪ್ರಧಾನಿ ಓಲಿ ರಾಜೀನಾಮೆ

Picture of Savistara

Savistara

Bureau Report

ನೇಪಾಳ ಪ್ರಧಾನಿ ಕೆ.ಪಿ.ಶರ್ಮಾ ಓಲಿ ರಾಜೀನಾಮೆ ನೀಡುವಂತೆ ಹಾಗೂ ಭ್ರಷ್ಟಾಚಾರ ನಿಯಂತ್ರಿಸುವಂತೆ ಆಗ್ರಹಿಸಿ ಕಂಡು ಸೇರಿದಂತೆ ನೇಪಾಳದ ವಿವಿಧೆಡೆ ಯುವಕರು ನಡೆಸುತ್ತಿರುವ ಪ್ರತಿಭಟನೆ ಮಂಗಳವಾರವೂ ಮುಂದುವರಿಸಿದ್ದು, ಹಿಂಸಾಚಾರಕ್ಕೆ ತಿರುಗಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.ಪ್ರತಿಭಟನಾಕಾರರು ನೇಪಾಳ ಪ್ರಧಾನಿ ನಿವಾಸಕ್ಕೆ ಬೆಂಕಿ ಹಚ್ಚಿದ್ದು, ಪ್ರಧಾನಿ ಓಲಿ ರಾಜೀನಾಮೆ ನೀಡಿದ್ದಾರೆ.

ಕಂಡು: ನೇಪಾಳ ಪ್ರಧಾನಿ ಕೆ.ಪಿ.ಶರ್ಮಾ ಓಲಿ ರಾಜೀನಾಮೆ ನೀಡುವಂತೆ ಹಾಗೂ ಭ್ರಷ್ಟಾಚಾರ ನಿಯಂತ್ರಿಸುವಂತೆ ಆಗ್ರಹಿಸಿ ಕಂಡು ಸೇರಿದಂತೆ ನೇಪಾಳದ ವಿವಿಧೆಡೆ ಯುವಕರು ನಡೆಸುತ್ತಿರುವ ಪ್ರತಿಭಟನೆ ಮಂಗಳವಾರವೂ ಮುಂದುವರಿಸಿದ್ದು. ಹಿಂಸಾಚಾರಕ್ಕೆ ತಿರುಗಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಪ್ರತಿಭಟನಾಕಾರರು ನೇಪಾಳ ಪ್ರಧಾನಿ ನಿವಾಸಕ್ಕೆ ಬೆಂಕಿ ಹಚ್ಚಿದ್ದು, ಪ್ರಧಾನಿ ಓಲಿ ರಾಜೀನಾಮೆ ನೀಡಿದ್ದಾರೆ.

ಸಿಪಿಎನ್ ಎಂಸಿ ಅಧ್ಯಕ್ಷೆ ಪುಷ್ಪಾ ಕಮಲ್ ದಹಾಲ್, ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಪೃಥ್ವಿ ಸುಬ್ಬಾ ಗುರುಂಗ್, ಮಾಜಿ ಗೃಹ ಸಚಿವ ರಮೇಶ್ ಲೇಖಕ್ ಸೇರಿದಂತೆ ಇತರರ ಮನೆಗಳ ಮೇಲೆ ಪ್ರತಿಭಟನಾಕಾರರು ಕಲ್ಲು ತೂರಾಟ ನಡೆಸಿದ್ದು, ಬೆಂಕಿ ಹಚ್ಚಿದ್ದಾರೆ ಎಂದು ತಿಳಿದುಬಂದಿದೆ.

ಕಂಡು ಸೇರಿದಂತೆ ನೇಪಾಳದ ಹಲವು ನಗರಗಳಲ್ಲಿ ಕರ್ಪೂ ವಿಧಿಸಲಾಗಿತ್ತು. ಆದರೆ, ಪ್ರತಿಭಟನಾಕಾರರು ಕರ್ಪೂ ನಿಯಮಗಳನ್ನು ಉಲ್ಲಂಘಿಸಿದ್ದಾರೆ. ರಾಜಕೀಯ ನಾಯಕರ ಮನೆಗಳು, ನೇಪಾಳಿ ಕಾಂಗ್ರೆಸ್‌ ಮತ್ತು ಸಿಪಿಎನ್-ಯುಎಂಎಲ್ ಪಕ್ಷಗಳ ಕಚೇರಿಗಳನ್ನು ಗುರಿಯಾಗಿಸಿಕೊಂಡು ದಾಂಧಲೆ ನಡೆಸುತ್ತಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಸರ್ವಪಕ್ಷ ಸಭೆ ಕರೆದ ಓಲಿ

‘ದೇಶದ ಕಠಿಣ ಪರಿಸ್ಥಿತಿಯನ್ನು ಅವಲೋಕಿಸಲು ಮತ್ತು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವ ನಿಟ್ಟಿನಲ್ಲಿ ಇಂದು ಸಂಜೆ 6 ಗಂಟೆಗೆ ನಾನು ಸರ್ವಪಕ್ಷ ಸಭೆಯನ್ನು ಕರೆದಿದ್ದೇನೆ. ಈ ಕಠಿಣ ಪರಿಸ್ಥಿತಿಯಲ್ಲಿ ದೇಶದ ಜನತೆ ಶಾಂತವಾಗಿರಲು ವಿನಂತಿಸುತ್ತೇನೆ’ ಎಂದು ನೇಪಾಳ ಪ್ರಧಾನಿ ಕೆ.ಪಿ.ಶರ್ಮಾ ಓಲಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

News Updates

ಅಂತಿಮ ಹಂತ ತಲುಪಿದ ಕೋಟೆಗಂಗೂರು ರೈಲ್ವೆ ಕೋಚಿಂಗ್ ಡಿಪೋ ಕಾಮಗಾರಿ; ಸಂಸದ ಬಿ.ವೈ.ರಾಘವೇಂದ್ರ ಅವರ ನಿರಂತರ ಪರಿಶ್ರಮದ ಪ್ರತಿಫಲ | ಯೋಜನೆಗೆ ಇಲ್ಲಿವರೆಗೆ 58.82 ಕೋಟಿ ರೂ. ವೆಚ್ಚ; ನಿಲ್ದಾಣ ಹಾಗೂ ಸೇವಾ ಕಟ್ಟಡಗಳ ನಿರ್ಮಾಣ ಕಾಮಗಾರಿ ಪೂರ್ಣ; ಪ್ರಸಕ್ತ ಸಾಲಿಗೆ 9.5 ಕೋಟಿ ರೂ. ಅನುದಾನ ಬಿಡುಗಡೆ

News Updates

ಅಂತಿಮ ಹಂತ ತಲುಪಿದ ಕೋಟೆಗಂಗೂರು ರೈಲ್ವೆ ಕೋಚಿಂಗ್ ಡಿಪೋ ಕಾಮಗಾರಿ; ಸಂಸದ ಬಿ.ವೈ.ರಾಘವೇಂದ್ರ ಅವರ ನಿರಂತರ ಪರಿಶ್ರಮದ ಪ್ರತಿಫಲ | ಯೋಜನೆಗೆ ಇಲ್ಲಿವರೆಗೆ 58.82 ಕೋಟಿ ರೂ. ವೆಚ್ಚ; ನಿಲ್ದಾಣ ಹಾಗೂ ಸೇವಾ ಕಟ್ಟಡಗಳ ನಿರ್ಮಾಣ ಕಾಮಗಾರಿ ಪೂರ್ಣ; ಪ್ರಸಕ್ತ ಸಾಲಿಗೆ 9.5 ಕೋಟಿ ರೂ. ಅನುದಾನ ಬಿಡುಗಡೆ

[t4b-ticker]
error: Content is protected !!