ಮಂಗಳೂರು ನಗರದ ಕೂಳೂರಿನ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸೆಪ್ಟೆಂಬರ್ 9ರಂದು ನಡೆದ ಭೀಕರ ಅಪಘಾತದಲ್ಲಿ 44 ವರ್ಷದ ಮಹಿಳೆಯೊಬ್ಬರು ಮೃತಪಟ್ಟ ಘಟನೆ ನಡೆದಿದೆ. ಸುರತ್ಕಲ್ ಕುಳಾಯಿ ನಿವಾಸಿ ಮಾಧವಿ ಅವರು ಸ್ಕೂಟರ್‌ನಲ್ಲಿ ಕುಳಾಯಿಯಿಂದ ಕುಂಟಿಕಾನಕ್ಕೆ ಪ್ರಯಾಣಿಸುತ್ತಿದ್ದ ವೇಳೆ ಈ ದುರಂತ ಸಂಭವಿಸಿದೆ.
ಮಂಗಳೂರು, ಸೆ.10: ಮಂಗಳೂರು ನಗರದ ಕೂಳೂರಿನ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸೆಪ್ಟೆಂಬರ್ 9ರಂದು ನಡೆದ ಭೀಕರ ಅಪಘಾತದಲ್ಲಿ 44 ವರ್ಷದ ಮಹಿಳೆಯೊಬ್ಬರು ಮೃತಪಟ್ಟ ಘಟನೆ ನಡೆದಿದೆ. ಸುರತ್ಕಲ್ ಕುಳಾಯಿ ನಿವಾಸಿ ಮಾಧವಿ ಅವರು ಸ್ಕೂಟರ್‌ನಲ್ಲಿ ಕುಳಾಯಿಯಿಂದ ಕುಂಟಿಕಾನಕ್ಕೆ ಪ್ರಯಾಣಿಸುತ್ತಿದ್ದ ವೇಳೆ ಈ ದುರಂತ ಸಂಭವಿಸಿದೆ.
ಪೊಲೀಸ್ ವರದಿಗಳ ಪ್ರಕಾರ, ಬೆಳಿಗ್ಗೆ 8:30ರ ಸುಮಾರಿಗೆ ಕೂಳೂರಿನ ರಾಯಲ್ ಓಕ್ ಮುಂಭಾಗದ ರಾಷ್ಟ್ರೀಯ ಹೆದ್ದಾರಿಯಲ್ಲಿ ರಸ್ತೆಯಲ್ಲಿದ್ದ ದೊಡ್ಡ ಗುಂಡಿಯಿಂದಾಗಿ ಮಾಧವಿ ಅವರು ಸ್ಕೂಟರ್ ಸಮೇತ ಬಿದ್ದಿದ್ದಾರೆ. ಈ ಸಂದರ್ಭದಲ್ಲಿ ಉಡುಪಿಯಿಂದ ಮಂಗಳೂರು ಕಡೆಗೆ ಅತಿವೇಗ ಹಾಗೂ ಅಜಾಗರೂಕತೆಯಿಂದ ಬಂದ ಲಾರಿಯ ಚಾಲಕ ಮೊಹಮ್ಮದ್ ಫಾರೂಕ್, ಬಿದ್ದಿದ್ದ ಮಾಧವಿ ಅವರ ಮೇಲೆ ಲಾರಿಯ ಚಕ್ರ ಹರಿಸಿದ್ದು, ಗಂಭೀರ ಗಾಯಗೊಂಡ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಈ ಅಪಘಾತಕ್ಕೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI)ದ ನಿರ್ಲಕ್ಷ್ಯವೂ ಕಾರಣವಾಗಿದೆ ಎಂದು ಆರೋಪಿಸಲಾಗಿದೆ. ರಸ್ತೆಯ ಗುಂಡಿಗಳನ್ನು ಸರಿಪಡಿಸದೇ ಇದ್ದ NHAI ಅಧಿಕಾರಿಗಳ ನಿರ್ವಹಣೆಯ ಕೊರತೆಯನ್ನು ದೂಷಿಸಲಾಗಿದೆ. ಈ ಸಂಬಂಧ ಲಾರಿ ಚಾಲಕ ಮೊಹಮ್ಮದ್ ಫಾರೂಕ್ ಹಾಗೂ NHAI ಅಧಿಕಾರಿಗಳ ವಿರುದ್ಧ ಮಂಗಳೂರು ಸಂಚಾರ ಉತ್ತರ ಪೊಲೀಸ್ ಠಾಣೆಯಲ್ಲಿ ಅ.ಕ್ರ 224/2025ರಡಿ ಕಲಂ 281, 106(1) 2.2.2 2 198(2) ໖໖ ಕಾಯ್ದೆಯಂತೆ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.











































