ಸುಬ್ರಹ್ಮಣ್ಯ, ಸೆ. 10: ಇಲಾಖೆಯ ಅಧಿಕಾರ ವ್ಯಾಪ್ತಿ ಮೀರಿ ವರ್ತಿಸಿದ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಹರೀಶ್ ಎಸ್. ಅವರಿಗೆ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮದಾಯ ದತ್ತಿಗಳ ಇಲಾಖೆ ಆಯುಕ್ತರು ಮತ್ತು ರಾಜ್ಯ ಧಾರ್ಮಿಕ ಪರಿಷತ್ ಸದಸ್ಯ ಕಾವ್ಯದರ್ಶಿಯಾಗಿರುವ ಡಾ। ಎಂ.ವಿ. ವೆಂಕಟೇಶ್ ಅವರು ಕಾರಣ ಕೇಳಿ ನೋಟಿಸ್ ನೀಡಿದ್ದಾರೆ.ರಾಜ್ಯ ಸರಕಾರ ಮತ್ತು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವಿರುದ್ಧ ಉತ್ತರಾದಿ ಮಠದವರು ಉಚ್ಚ ನ್ಯಾಯಾಲಯದಲ್ಲಿ ದಾವೆ ದಾಖಲಿಸಿದ್ದು, ಈ ಈ ಪ್ರಕರಣಕ್ಕೆ ಸಂಬಂಧಿಸಿ ಹರೀಶ್ ಎಸ್. ಅವರು ದತ್ತಿ ಸಚಿವರ ಹೆಸರಿಗೆ ಆ. 1ರಂದು ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿಗಳ ಗಮನಕ್ಕೂ ತಾರದೆ ಪತ್ರ ವ್ಯವಹಾರ ನಡೆಸಿದ್ದು, ಈ ಬಗ್ಗೆ ಕಾರ್ಯನಿರ್ವಾಹಕ ಅಧಿಕಾರಿಗಳು ವರದಿ ಮಾಡಿದ್ದರು. ನೋಟಿಸ್ ತಲುಪಿದ 7 ದಿನಗಳೊಳಗೆ ಈ ಕಚೇರಿಗೆ ತಮ್ಮ ಲಿಖಿತ ಸಮಜಾಯಿಸಿ/ಹೇಳಿಕೆ ಸಲ್ಲಿಸಬೇಕಿದೆ. ತಪ್ಪಿದ್ದಲ್ಲಿ ನಿಮ್ಮನ್ನು ವ್ಯವಸ್ಥಾಪನ ಸಮಿತಿಯ ಸದಸ್ಯತ್ವದಿಂದ ತೆಗೆದು ಹಾಕಲು ಅಗತ್ಯ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಆಯುಕ್ತರು ಹೇಳಿದ್ದಾರೆ.
ಸುಬ್ರಹ್ಮಣ್ಯ ಕುಕ್ಕೆ ದೇವಾಲಯ : ಅಧಿಕಾರ ವ್ಯಾಪ್ತಿ ಮೀರಿ ವರ್ತನೆ: ನೋಟಿಸ್
Savistara
Bureau Report
[t4b-ticker]











































