ಬೆಂಗಳೂರಿನಲ್ಲಿ ಭಾರಿ ಮಳೆ ನಿರೀಕ್ಷೆ: ಹವಾಮಾನ ಇಲಾಖೆಯಿಂದ ಆರೆಂಜ್ ಅಲರ್ಟ್

Picture of Savistara

Savistara

Bureau Report

ಬೆಂಗಳೂರು: ಮುಂದಿನ 24 ಗಂಟೆಯಲ್ಲಿ ಬೆಂಗಳೂರಿನಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಭಾರತೀಯ ಹವಾಮಾನ ಇಲಾಖೆಯು ಆರೆಂಜ್ ಅಲರ್ಟ್ ಘೋಷಿಸಿದೆ.

ಆರೆಂಜ್ ಅಲರ್ಟ್ ಎಂದರೆ 11 ಸೆಂ.ಮೀ ನಿಂದ 20 ಸೆಂ.ಮೀ ಮಳೆಯಾಗುವ ಸಂಭವವಿದೆ.

Advertisement

ನಗರದ ಕೆಲವು ಸ್ಥಳಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ ಇದ್ದು, ಕೆಲವು ಭಾಗಗಳಲ್ಲಿ ಗಂಟೆಗೆ 30 ರಿಂದ 40 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ ಎಂದು ಎಚ್ಚರಿಕೆ ನೀಡಿದೆ. ತಾತ್ಕಾಲಿಕ ವಿದ್ಯುತ್ ಅಡಚಣೆ ಉಂಟಾಗಲಿದ್ದು, ಮನೆಗಳಿಗೆ ಹಾನಿಯಾಗುವ ಸಂಭವವಿದೆ, ಮರಗಳು ಧಾರಾಶಾಹಿಯಾಗುವ ಸಾಧ್ಯತೆ ಇದ್ದು, ನಾಗರಿಕರು ಎಚ್ಚರಿಕೆಯಿಂದ ಇರಬೇಕು ಎಂದು ಹೇಳಿದೆ.ಗುರುವಾರ ಬೆಳಿಗ್ಗೆ 5.30ಕ್ಕೆ ಅಂತ್ಯಗೊಂಡ 24 ಗಂಟೆಯಲ್ಲಿ ಬೆಂಗಳೂರಿನಲ್ಲಿ 52.8 ಮಿ.ಮೀ ಮಳೆಯಾಗಿದೆ ಎಂದು ಅದು ಮಾಹಿತಿ ನೀಡಿದೆ.

Advertisement

ಮುಂದಿನ 48 ಗಂಟೆಯಲ್ಲಿ ನಗರದಾದ್ಯಂತ ಮೋಡ ಕವಿದ ವಾತಾವರಣ ಇರಲಿದ್ದು, ಕೆಲವು ಪ್ರದೇಶಗಳಲ್ಲಿ ಸಾಧಾರಣ ಮಳೆ ಹಾಗೂ ಗುಡುಗು, ಇನ್ನು ಕೆಲವೆಡೆ ಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ 20 ಡಿಗ್ರಿ ಸೆಲ್ಸಿಯಸ್ ಇರಲಿದೆ.ಮುಂದಿನ ಮೂರು ದಿನಗಳಲ್ಲಿ ಕಲಬುರಗಿ, ವಿಜಯನಗರ, ಬಾಗಲಕೋಟೆ, ಕೊಪ್ಪಳ, ಬಳ್ಳಾರಿ ಹಾಗೂ ವಿಜಯನಗರ ಜಿಲ್ಲೆಯ ಕೆಲವೆಡೆ ಭಾರಿ ಮಳೆಯಾಗುವ ನಿರೀಕ್ಷೆ ಇದೆ. ಕರಾವಳಿ ಹಾಗೂ ಒಳನಾಡಿನಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

Advertisement
News Updates

ಮಂಗಳೂರಿನಲ್ಲಿ ನ. 6ಕ್ಕೆ ಬಿಜೆಪಿ ಬೃಹತ್ ಪಾದಯಾತ್ರೆ: ಕೇಂದ್ರ ಸಚಿವ ಸುರೇಶ್ ಗೋಪಿ, ಸಂಸದ ತೇಜಸ್ವಿ ಸೂರ್ಯ ಭಾಗಿ |ಲೋಕತಂತ್ರ ಉಳಿಸಿ, ಅರಾಜಕತೆ ಅಳಿಸಿ ಅಭಿಯಾನದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ಸಂಸದ ಕ್ಯಾ. ಚೌಟ ಕರೆ

[t4b-ticker]
error: Content is protected !!