ಮಣಿಪುರ | ಶನಿವಾರ ಪ್ರಧಾನಿಭೇಟಿ ಸಾಧ್ಯತೆ: ಭದ್ರತೆ ಹೆಚ್ಚಳ

Picture of Savistara

Savistara

Bureau Report

ಇಂಫಾಲ್‌: ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಮಣಿಪುರಕ್ಕೆ ಭೇಟಿ ನೀಡುವ ಸಾಧ್ಯತೆ ಇದ್ದು, ಇಂಫಾಲ್ ಮತ್ತು ಚುರಾಚಾಂದ್‌ಪುರ ಜಿಲ್ಲಾ ಕೇಂದ್ರಗಳಲ್ಲಿ ಭದ್ರತೆ ಹೆಚ್ಚಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಇಂಫಾಲ್‌ನ ಕಂಗಲಾ ಕೋಟೆ ಮತ್ತು ಚುರಾಚಾಂದ್‌ಪುರದ ಶಾಂತಿ ಮೈದಾನದಲ್ಲಿ ಭಾರಿ ಸಂಖ್ಯೆಯ ಕೇಂದ್ರ ಮತ್ತು ರಾಜ್ಯ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಅಲ್ಲಿ ಪ್ರಧಾನ ಮಂತ್ರಿಯ ಕಾರ್ಯಕ್ರಮಕ್ಕಾಗಿ ಭವ್ಯ ವೇದಿಕೆಯನ್ನು ನಿರ್ಮಿಸಲಾಗುತ್ತಿದೆ.ಪ್ರಧಾನಿಯು ಮಿಜೋರಾಂ ಮೂಲಕ ಮಣಿಪುರಕ್ಕೆ ಆಗಮಿಸುವ ಸಾಧ್ಯತೆಯಿದೆ. ಈ ಬಗ್ಗೆ ಕೇಂದ್ರ ಸರ್ಕಾರವಾಗಲಿ, ರಾಜ್ಯದ ಆಡಳಿತವಾಗಲಿ ಯಾವುದೇ ಅಧೀಕೃತ ಹೇಳಿಕೆಯನ್ನು ನೀಡಿಲ್ಲ. ಆದಾಗ್ಯೂ, ಅವರ ಭೇಟಿಗಾಗಿ ರಾಜ್ಯದಲ್ಲಿ ಹಲವು ಪೂರ್ವಸಿದ್ಧತೆಗಳನ್ನು ಮಾಡಲಾಗುತ್ತಿದೆ.2023ರಲ್ಲಿ ಕುಕಿ ಮತ್ತು ಮೈತೇಯಿ ಸಮುದಾಯಗಳ ನಡುವೆ ಕೋಮುಗಲಭೆ ಭುಗಿಲೆದ್ದ ನಂತರ, ಪ್ರಧಾನಿ ನೀಡುತ್ತಿರುವ ಮೊದಲ ಭೇಟಿ ಇದಾಗಲಿದೆ. ಹಿಂಸಾಚಾರದಿಂದಾಗಿ ಸುಮಾರು 250 ಜನರು ಮೃತಪಟ್ಟಿದ್ದು, ಸಾವಿರಾರು ಜನರು ನಿರಾಶ್ರಿತರಾಗಿದ್ದಾರೆ.

News Updates

ಅಂತಿಮ ಹಂತ ತಲುಪಿದ ಕೋಟೆಗಂಗೂರು ರೈಲ್ವೆ ಕೋಚಿಂಗ್ ಡಿಪೋ ಕಾಮಗಾರಿ; ಸಂಸದ ಬಿ.ವೈ.ರಾಘವೇಂದ್ರ ಅವರ ನಿರಂತರ ಪರಿಶ್ರಮದ ಪ್ರತಿಫಲ | ಯೋಜನೆಗೆ ಇಲ್ಲಿವರೆಗೆ 58.82 ಕೋಟಿ ರೂ. ವೆಚ್ಚ; ನಿಲ್ದಾಣ ಹಾಗೂ ಸೇವಾ ಕಟ್ಟಡಗಳ ನಿರ್ಮಾಣ ಕಾಮಗಾರಿ ಪೂರ್ಣ; ಪ್ರಸಕ್ತ ಸಾಲಿಗೆ 9.5 ಕೋಟಿ ರೂ. ಅನುದಾನ ಬಿಡುಗಡೆ

[t4b-ticker]
error: Content is protected !!