ಉಪರಾಷ್ಟ್ರಪತಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ರಾಧಾಕೃಷ್ಣನ್

Picture of Savistara

Savistara

Bureau Report

ನವದೆಹಲಿ: ದೇಶದ 15ನೇ ಉಪರಾಷ್ಟ್ರಪತಿಯಾಗಿ ಸಿ.ಪಿ.ರಾಧಾಕೃಷ್ಣನ್ ಅವರು ಇಂದು (ಶುಕ್ರವಾರ, ಸೆ.12) ಪ್ರಮಾಣವಚನ ಸ್ವೀಕರಿಸಿದರು.

Advertisement

ರಾಷ್ಟ್ರಪತಿ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ದೌಪದಿ ಮುರ್ಮು ಅವರು ರಾಧಾಕೃಷ್ಣನ್‌ಗೆ ಪ್ರಮಾಣವಚನ ಬೋಧಿಸಿದರು.ಈ ವೇಳೆ ಮಾಜಿ ಉಪರಾಷ್ಟ್ರಪತಿಗಳಾದ ಜಗದೀಪ್ ಧನಕ‌ರ್, ವೆಂಕಯ್ಯ ನಾಯ್ಡು, ಹಮೀದ್ ಅನ್ಸಾರಿ, ಲೋಕಸಭಾ ಸ್ಪೀಕ‌ರ್ ಓಂ ಬಿರ್ಲಾ, ಕೇಂದ್ರ ಸಚಿವರಾದ ರಾಜನಾಥ್ ಸಿಂಗ್, ನಿತಿನ್ ಗಡ್ಕರಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.ಧನಕ‌ರ್ ಅವರ ದಿಢೀರ್ ರಾಜೀನಾಮೆಯಿಂದ ತೆರವಾಗಿದ್ದ ಹುದ್ದೆಗೆ ಮಂಗಳವಾರ (ಸೆ.9) ನಡೆದ ಚುನಾವಣೆಯಲ್ಲಿ ಆಡಳಿತಾರೂಢ ಎನ್‌ಡಿಎ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ರಾಧಾಕೃಷ್ಣನ್, ವಿರೋಧ ಪಕ್ಷಗಳ ಒಮ್ಮತದ ಅಭ್ಯರ್ಥಿ ಬಿ.ಸುದರ್ಶನ ರೆಡ್ಡಿ ಅವರನ್ನು ಮಣಿಸಿದ್ದರು.

Advertisement

ರಾಧಾಕೃಷ್ಣನ್ ಪರ ಒಟ್ಟು 452 ಮತಗಳು ಚಲಾವಣೆಯಾಗಿದ್ದವು. ರೆಡ್ಡಿ 300 ಮತಗಳನ್ನು ಗಳಿಸಿದ್ದರು.

Advertisement
News Updates

ಮಂಗಳೂರಿನಲ್ಲಿ ನ. 6ಕ್ಕೆ ಬಿಜೆಪಿ ಬೃಹತ್ ಪಾದಯಾತ್ರೆ: ಕೇಂದ್ರ ಸಚಿವ ಸುರೇಶ್ ಗೋಪಿ, ಸಂಸದ ತೇಜಸ್ವಿ ಸೂರ್ಯ ಭಾಗಿ |ಲೋಕತಂತ್ರ ಉಳಿಸಿ, ಅರಾಜಕತೆ ಅಳಿಸಿ ಅಭಿಯಾನದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ಸಂಸದ ಕ್ಯಾ. ಚೌಟ ಕರೆ

[t4b-ticker]
error: Content is protected !!