ಶಾಸಕರಿಗೆ ಬಂಪ‌ರ್: ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ 50 ಕೋಟಿ ರೂ ಅನುದಾನ: ಸಿಎಂ ಸಿದ್ದರಾಮಯ್ಯ ಘೋಷಣೆ!

Picture of Savistara

Savistara

Bureau Report

ಬೆಂಗಳೂರು : ಇತ್ತೀಚೆಗೆ ಶಾಸಕರ ಕ್ಷೇತ್ರಗಳಿಗೆ ತಲಾ 50 ಕೋಟಿ ರೂ. ವಿಶೇಷ ಅನುದಾನ ಬಿಡುಗಡೆ ಮಾಡುವುದಾಗಿ ಹೇಳಿದ್ದ ಸಿಎಂ ಸಿದ್ದರಾಮಯ್ಯ ಇದೀಗ ಅದಕ್ಕೆ ಒಪ್ಪಿಗೆ ಸೂಚಿಸಿದ್ದಾರೆ. ಬೆಂಗಳೂರು ಶಾಸಕರ ಜೊತೆ ಬುಧವಾರ ಸಭೆ ಮಾಡಿರುವ ಸಿಎಂ ಸಿದ್ದರಾಮಯ್ಯ, ರಸ್ತೆ ದುರಸ್ತಿ, ನೂತನ ರಸ್ತೆ ನಿರ್ಮಾಣಕ್ಕೆ ಅನುದಾನ ಬಳಸುವಂತೆ ಶಾಸಕರಿಗೆ ಸೂಚನೆ ನೀಡಿದ್ದಾರೆ.

ವಿಧಾನ ಸೌಧದಲ್ಲಿ ನಿನ್ನೆ ಸಿಎಂ ಸಿದ್ದರಾಮಯ್ಯ ಪ್ರಮುಖವಾಗಿ ಅನುದಾನ ಹಂಚಿಕೆ ವಿಚಾರವಾಗಿ ಬೆಂಗಳೂರು ಭಾಗದ ಶಾಸಕರೊಂದಿಗೆ ಚರ್ಚೆ ಮಾಡಿದರು. ಈ ವೇಳೆ ಶಾಸಕರ ಕುಂದು ಕೊರತೆಯನ್ನ ಆಲಿಸಿದರು. ಈಗಾಗಲೇ ಮೂರು ಹಂತದಲ್ಲಿ ಸಭೆ ಮಾಡಿದ್ದು, ಶಾಸಕರು, ಪರಿಷತ್‌ ಸದಸ್ಯರ ಜೊತೆಗೂ ಸಿಎಂ ಮೀಟಿಂಗ್ ಮಾಡಿದರು.

ಈ ಕುರಿತಾಗಿ ಟ್ವಿಟ್ ಮಾಡಿರುವ ಸಿಎಂ ಸಿದ್ದರಾಮಯ್ಯ ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯ ಸಚಿವರು ಹಾಗೂ ಶಾಸಕರ ಜೊತೆ ಸುದೀರ್ಘ ಸಭೆ ನಡೆಸಿ, ಗ್ಯಾರಂಟಿ ಯೋಜನೆ ಮತ್ತು ಅಭಿವೃದ್ಧಿ ಕಾರ್ಯಕ್ರಮಗಳ ಪ್ರಗತಿಯ ಮಾಹಿತಿ ಪಡೆದು, ಕ್ಷೇತ್ರದಲ್ಲಿ ಆಗಬೇಕಿರುವ ಕೆಲಸ ಕಾರ್ಯಗಳ ಬೇಡಿಕೆಯನ್ನು ಆಲಿಸಿ, ಅಗತ್ಯ ಸಹಕಾರ ಹಾಗೂ ಅನುದಾನ ಒದಗಿಸುವುದಾಗಿ ತಿಳಿಸಿದ್ದರು.

ಸಿಎಂ ಅವರ ಮೂಲಸೌಕರ್ಯ ಅಭಿವೃದ್ಧಿ ಯೋಜನೆ ಅಡಿಯಲ್ಲಿ ಪ್ರತಿಯೊಂದು ವಿಧಾನಸಭಾ ಕ್ಷೇತ್ರಗಳಿಗೆ 50 ಕೋಟಿ ರೂ. ಹಂಚಿಕೆ ಮಾಡಲಾಗಿದೆ. ಹಣ ಬಿಡುಗಡೆ ಮಾಡಲು ಕಾಮಗಾರಿ ವಿವರ ನೀಡುವಂತೆ ಎಲ್ಲಾ ಶಾಸಕರಿಗೆ ಸಿಎಂ ಸಿದ್ದರಾಮಯ್ಯ ಇತ್ತೀಚೆಗೆ ಪತ್ರ ಬರೆದಿದ್ದರು.

News Updates

ಅಂತಿಮ ಹಂತ ತಲುಪಿದ ಕೋಟೆಗಂಗೂರು ರೈಲ್ವೆ ಕೋಚಿಂಗ್ ಡಿಪೋ ಕಾಮಗಾರಿ; ಸಂಸದ ಬಿ.ವೈ.ರಾಘವೇಂದ್ರ ಅವರ ನಿರಂತರ ಪರಿಶ್ರಮದ ಪ್ರತಿಫಲ | ಯೋಜನೆಗೆ ಇಲ್ಲಿವರೆಗೆ 58.82 ಕೋಟಿ ರೂ. ವೆಚ್ಚ; ನಿಲ್ದಾಣ ಹಾಗೂ ಸೇವಾ ಕಟ್ಟಡಗಳ ನಿರ್ಮಾಣ ಕಾಮಗಾರಿ ಪೂರ್ಣ; ಪ್ರಸಕ್ತ ಸಾಲಿಗೆ 9.5 ಕೋಟಿ ರೂ. ಅನುದಾನ ಬಿಡುಗಡೆ

News Updates

ಅಂತಿಮ ಹಂತ ತಲುಪಿದ ಕೋಟೆಗಂಗೂರು ರೈಲ್ವೆ ಕೋಚಿಂಗ್ ಡಿಪೋ ಕಾಮಗಾರಿ; ಸಂಸದ ಬಿ.ವೈ.ರಾಘವೇಂದ್ರ ಅವರ ನಿರಂತರ ಪರಿಶ್ರಮದ ಪ್ರತಿಫಲ | ಯೋಜನೆಗೆ ಇಲ್ಲಿವರೆಗೆ 58.82 ಕೋಟಿ ರೂ. ವೆಚ್ಚ; ನಿಲ್ದಾಣ ಹಾಗೂ ಸೇವಾ ಕಟ್ಟಡಗಳ ನಿರ್ಮಾಣ ಕಾಮಗಾರಿ ಪೂರ್ಣ; ಪ್ರಸಕ್ತ ಸಾಲಿಗೆ 9.5 ಕೋಟಿ ರೂ. ಅನುದಾನ ಬಿಡುಗಡೆ

News Updates

ಮೋದಿ ಸರ್ಕಾರದ ಮಾತೃ ಆರೋಗ್ಯ ರಕ್ಷಣೆಯ ಉಪಕ್ರಮಗಳಿಗೆ ದೊರೆಯುತ್ತಿರುವ ಉತ್ತಮ ಫಲಿತಾಂಶ: ಕರ್ನಾಟಕದಲ್ಲಿ PMSMA ಅಡಿ ಪತ್ತೆಯಾದ 12 ಲಕ್ಷಕ್ಕೂ ಹೆಚ್ಚು ಅಪಾಯಕಾರಿ ಗರ್ಭಧಾರಣೆಗಳಿಗೆ ಅಗತ್ಯ ವೈದ್ಯಕೀಯ ನೆರವು; ಸಂಸದ ಬಿ.ವೈ. ರಾಘವೇಂದ್ರ ಅವರಿಗೆ ಮಾಹಿತಿ ನೀಡಿದ ಕೇಂದ್ರ ಸರ್ಕಾರ

[t4b-ticker]
error: Content is protected !!