ಜಾತಿ ಸಮೀಕ್ಷೆಯಲ್ಲಿ ಒಕ್ಕಲಿಗ ಎಂದೇ ನಮೂದಿಸಿ: ನಿರ್ಮಲಾನಂದನಾಥ ಸ್ವಾಮೀಜಿ

Picture of Savistara

Savistara

Bureau Report

ಮೈಸೂರು: ಕರ್ನಾಟಕ ರಾಜ್ಯ ಸರಕಾರದಿಂದ ಸೆ.22ರಿಂದ 15 ದಿನಗಳಕಾಲ ನಡೆಯುವ ಹಿಂದುಳಿದ ವರ್ಗಗಳ ಆಯೋಗದ ಶೈಕ್ಷಣಿಕ, ಸಾಮಾಜಿಕ, ಹಾಗೂ ಆರ್ಥಿಕ ಸಮೀಕ್ಷೆಯಲ್ಲಿ ಒಕ್ಕಲಿಗ ಜನಾಂಗ ಒಕ್ಕಲಿಗ ಎಂದೇ ನಮೂದಿಸುವಂತೆ ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷರಾದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ತಿಳಿಸಿದರು. ಮೈಸೂರಿನ ಆದಿಚುಂಚನಗಿರಿ ಶಾಖಾ ಹೆಬ್ಬಾಳದ ಮಠದಲ್ಲಿ ಜಾತಿಗಣತಿ ಸಂಬಂಧ ಪೂರ್ವಭಾವಿಯಾಗಿ ಮೈಸೂರು ಜಿಲ್ಲೆಯ ಒಕ್ಕಲಿಗ ಜನಾಂಗದ ಮುಖಂಡರ ಸಭೆಯನ್ನು ಸಾನಿಧ್ಯ ವಹಿಸಿ ಅವರು ಮಾತನಾಡಿದರು.ಮುಂಬರುವ ಸಮೀಕ್ಷೆಯಲ್ಲಿ ಜಾತಿ ಕಲಂ ನಲ್ಲಿ ಒಕ್ಕಲಿಗ ಎಂದೇ ನಮೂದಿಸಬೇಕು. ಉಪ ಜಾತಿ ಕಲಂನಲ್ಲಿ ಉಪಪಂಗಡ ಬಗ್ಗೆ ಮಾಹಿತಿ ಇದರೇ ನಮೂದಿಸಬೇಕು ಇಲ್ಲದಿದ್ದರೆ ಒಕ್ಕಲಿಗ ಎಂದೇ ನಮೂದಿಸಬೇಕು ಎಂದು ತಿಳಿಸಿದರು. ತಮ್ಮ ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕ ಸ್ಥಿತಿಗತಿಗಳ ಬಗ್ಗೆ ನಿಖರವಾದ ಮಾಹಿತಿಯನ್ನು ನೀಡಬೇಕು. ಪ್ರತಿ ಗ್ರಾಮಕ್ಕೂ ಈ ಮಾಹಿತಿಯನ್ನು ನೀಡುವ ಜವಾಬ್ದಾರಿಯನ್ನು ಮುಖಂಡರುಗಳು ಸ್ವಯಂ ಪ್ರೇರಿತವಾಗಿ ಮಾಡಬೇಕು ಎಂದು ಸೂಚಿಸಿದರು. ಎಲ್ಲರೂ ಈ ಸಮೀಕ್ಷೆಯಲ್ಲಿ ಪ್ರತಿಯೊಬ್ಬರು ಪಾಲ್ಗೊಳ್ಳುವಂತೆ ಕ್ರಮವಹಿಸಬೇಕೆಂದು ಹೇಳಿದರು.

News Updates

ಅಂತಿಮ ಹಂತ ತಲುಪಿದ ಕೋಟೆಗಂಗೂರು ರೈಲ್ವೆ ಕೋಚಿಂಗ್ ಡಿಪೋ ಕಾಮಗಾರಿ; ಸಂಸದ ಬಿ.ವೈ.ರಾಘವೇಂದ್ರ ಅವರ ನಿರಂತರ ಪರಿಶ್ರಮದ ಪ್ರತಿಫಲ | ಯೋಜನೆಗೆ ಇಲ್ಲಿವರೆಗೆ 58.82 ಕೋಟಿ ರೂ. ವೆಚ್ಚ; ನಿಲ್ದಾಣ ಹಾಗೂ ಸೇವಾ ಕಟ್ಟಡಗಳ ನಿರ್ಮಾಣ ಕಾಮಗಾರಿ ಪೂರ್ಣ; ಪ್ರಸಕ್ತ ಸಾಲಿಗೆ 9.5 ಕೋಟಿ ರೂ. ಅನುದಾನ ಬಿಡುಗಡೆ

News Updates

ಅಂತಿಮ ಹಂತ ತಲುಪಿದ ಕೋಟೆಗಂಗೂರು ರೈಲ್ವೆ ಕೋಚಿಂಗ್ ಡಿಪೋ ಕಾಮಗಾರಿ; ಸಂಸದ ಬಿ.ವೈ.ರಾಘವೇಂದ್ರ ಅವರ ನಿರಂತರ ಪರಿಶ್ರಮದ ಪ್ರತಿಫಲ | ಯೋಜನೆಗೆ ಇಲ್ಲಿವರೆಗೆ 58.82 ಕೋಟಿ ರೂ. ವೆಚ್ಚ; ನಿಲ್ದಾಣ ಹಾಗೂ ಸೇವಾ ಕಟ್ಟಡಗಳ ನಿರ್ಮಾಣ ಕಾಮಗಾರಿ ಪೂರ್ಣ; ಪ್ರಸಕ್ತ ಸಾಲಿಗೆ 9.5 ಕೋಟಿ ರೂ. ಅನುದಾನ ಬಿಡುಗಡೆ

News Updates

ಮೋದಿ ಸರ್ಕಾರದ ಮಾತೃ ಆರೋಗ್ಯ ರಕ್ಷಣೆಯ ಉಪಕ್ರಮಗಳಿಗೆ ದೊರೆಯುತ್ತಿರುವ ಉತ್ತಮ ಫಲಿತಾಂಶ: ಕರ್ನಾಟಕದಲ್ಲಿ PMSMA ಅಡಿ ಪತ್ತೆಯಾದ 12 ಲಕ್ಷಕ್ಕೂ ಹೆಚ್ಚು ಅಪಾಯಕಾರಿ ಗರ್ಭಧಾರಣೆಗಳಿಗೆ ಅಗತ್ಯ ವೈದ್ಯಕೀಯ ನೆರವು; ಸಂಸದ ಬಿ.ವೈ. ರಾಘವೇಂದ್ರ ಅವರಿಗೆ ಮಾಹಿತಿ ನೀಡಿದ ಕೇಂದ್ರ ಸರ್ಕಾರ

[t4b-ticker]
error: Content is protected !!