ಶಿವಮೊಗ್ಗ : ಕೇಂದ್ರ ಸರ್ಕಾರದ ಯೋಜನೆಗಳ ‘ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ’ಯ ‘ದಿಶಾ’ ಕಾರ್ಯಕ್ರಮ

Picture of Savistara

Savistara

Bureau Report

ಸೆ 16 :ಶಿವಮೊಗ್ಗ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಕೇಂದ್ರ ಸರ್ಕಾರದ ಯೋಜನೆಗಳ ‘ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ’- ‘ದಿಶಾ’ (District Development Coordination and Monitoring Committee) ಸಭೆಯಲ್ಲಿ ಭಾಗವಹಿಸಿ ಜಿಲ್ಲೆಯ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಲಾಯಿತು.ದೇಶದ ಕಟ್ಟಕಡೆಯ ಪ್ರಜೆಗೂ ಕೇಂದ್ರ ಸರ್ಕಾರದ ಯೋಜನೆಗಳು ತಲುಪಿಸುವುದು ಪ್ರಧಾನಿ ಶ್ರೀ ನರೇಂದ್ರ ಮೋದಿ @narendramodi ಅವರ ನೇತೃತ್ವದ ಕೇಂದ್ರ ಸರ್ಕಾರದ ಧ್ಯೇಯವಾಗಿದೆ. ಕೇಂದ್ರ ಸರ್ಕಾರದ ಯೋಜನೆಗಳು ಇಂದು ಪ್ರತಿ ಹಳ್ಳಿ ಹಳ್ಳಿಗಳಿಗೆ, ಗ್ರಾಮ ಪಂಚಾಯತಿವರೆಗೆ ತಲುಪಿವೆ.

ಈ ಯೋಜನೆಗಳ ಅನುಷ್ಠಾನ ಸರಿಯಾದ ರೀತಿಯಲ್ಲಿ ನಡೆಸುವಂತೆ ಹಾಗೂ ಅಧಿಕಾರಿಗಳು ಜವಾಬ್ದಾರಿಯುತವಾಗಿ ವಿಳಂಬ ಧೋರಣೆಯನ್ನು ತೋರದೆ ಜನರ ಸಮಸ್ಯೆಗಳಿಗೆ ಸ್ಪಂದಿಸುವಂತೆ ಸೂಚನೆ ನೀಡಲಾಯಿತು‌. ಈ ಸಭೆಯಲ್ಲಿ ಜಿಲ್ಲಾ ಪಂಚಾಯತ್ ಸಿಇಒ ಶ್ರೀ ಹೇಮಂತ್ ಎನ್, ಎಸ್ಪಿ ಶ್ರೀ ಮಿಥುನ್ ಕುಮಾರ್ ಮತ್ತು ಶಾಸಕ ಶ್ರೀ ಚನ್ನಬಸಪ್ಪ, ವಿಧಾನ ಪರಿಷತ್ ಸದಸ್ಯರಾದ ಶ್ರೀ ಧನಂಜಯ್ ಸರ್ಜಿ ಮತ್ತು ಶ್ರೀಮತಿ ಬಾಲ್ಕಿಸ್ ಬಾನು ಹಾಗೂ ಇತರ ದಿಶಾ ಸಮಿತಿ ಸದಸ್ಯರು ಉಪಸ್ಥಿತರಿದ್ದರು.

[t4b-ticker]
error: Content is protected !!