ಇಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ 75ನೇ ವರುಷದ ಹುಟ್ಟು ಹಬ್ಬದ| ಗುಜರಾತ್ ನಿಂದ ದೆಹಲಿ ವರೆಗೆ ಸಂಘ ಜೀವಿಯ ರಾಜಕೀಯ ಪಯಣ

Picture of Savistara

Savistara

Bureau Report

ನವದೆಹಲಿ:ಪ್ರಧಾನಿ ನರೇಂದ್ರ ಮೋದಿ ಇಂದು 75ನೇ ವರ್ಷಕ್ಕೆ ಕಾಲಿಟ್ಟಿದ್ದಾರೆ.ದೇಶದಾದ್ಯಂತ ರಾಜಕೀಯ ಸಾಮಾಜಿಕ ಕ್ಷೇತ್ರದ ಪ್ರಮುಖರು, ಮೋದಿ ಅಭಿಮಾನಿಗಳು, ಬಿಜೆಪಿ ಕಾರ್ಯಕರ್ತರು, ಸಾರ್ವಜನಿಕರು ಮೋದಿ ಹುಟ್ಟುಹಬ್ಬ ಸಂಭ್ರಮಕ್ಕೆ ಶುಭಕೋರಿದ್ದಾರೆ. ಸಾಮಾಜಿಕ ಜಾಲತಾಣಗಳ ಮೂಲಕ, ಮಾಧ್ಯಮಗಳ ಮೂಲಕ ಪ್ರಧಾನಿ ಅವರಿಗೆ

ಹುಟ್ಟು ಹಬ್ಬದ ಶುಭಾಶಯಗಳ ಮಹಾಪೂರವೇ ಹರಿದು ಬರುತ್ತಿದೆ. ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸೇರಿ ವಿಶ್ವ ನಾಯಕರು ಮೋದಿ ಹುಟ್ಟು ಹಬ್ಬಕ್ಕೆ ಶುಭ ಕೋರಿದ್ದಾರೆ.ಪ್ರಧಾನಿ ಮೋದಿ 1950ರ ಸೆಪ್ಟೆಂಬರ್ 17 ರಂದು ಗುಜರಾತ್‌ನ ಸಣ್ಣ ಪಟ್ಟಣವಾದ ವಡ್ನಗರದಲ್ಲಿ ಜನಿಸಿದರು.ದಾಮೋದರದಾಸ್‌ಮುಲ್ಟಂದ್ ಮೋದಿ, ಹೀರಾಬೆನ್ ದಂಪತಿಗಳ ನಾಲ್ಕು ಮಕ್ಕಳಲ್ಲಿ ಪ್ರಧಾನಿ ಮೋದಿ ಮೂರನೇಯವರು. ಆರ್‌ಎಸ್‌ಎಸ್ ಪ್ರಚಾರಕರಾಗಿದ್ದ ನರೇಂದ್ರ ಮೋದಿಯವರು ಬಳಿಕ ರಾಜಕೀಯ ಪ್ರವೇಶಿಸಿ ಉನ್ನತ ಹುದ್ದೆಗೆ ಏರಿದವರು. 2001ರಿಂದ 2014ರ ತನಕ ಗುಜರಾತ್ ಮುಖ್ಯಮಂತ್ರಿಯಾಗಿದ್ದ ಅವರು 2014ರಿಂದ 11 ವರ್ಷಗಳಿಂದ ಪ್ರಧಾನಿಯಾಗಿದ್ದಾರೆ. ಮೂರನೇ ಅವಧಿಗೆ ಪ್ರಧಾನಿ ಹುದ್ದೆ ಅಲಂಕರಿಸಿದ್ದಾರೆ.

ಪ್ರಧಾನಿ ಮೋದಿ ಬುಧವಾರ ತಮ್ಮ 75 ನೇ ಹುಟ್ಟುಹಬ್ಬದ ಸಂದರ್ಭದಲ್ಲಿ ಮಧ್ಯಪ್ರದೇಶದಲ್ಲಿರುತ್ತಾರೆ. ಪ್ರಧಾನಿ ಮೋದಿ ಇಲ್ಲಿನ ಧಾ‌ರ್ ಜಿಲ್ಲೆಯ ಭೈನ್ನೋಲಾ ಗ್ರಾಮಕ್ಕೆ ಭೇಟಿ ನೀಡಲಿದ್ದು, ಮಹಿಳೆಯರು ಮತ್ತು ಕುಟುಂಬಗಳಿಗೆ ಆರೋಗ್ಯ ಮತ್ತು ಪೋಷಣೆಯನ್ನು ಆಧರಿಸಿದ ಅಭಿಯಾನವನ್ನು ಪ್ರಾರಂಭಿಸಲಿದ್ದಾರೆ.ಮೋದಿ ಹುಟ್ಟು ಹಬ್ಬದ ಪ್ರಯುಕ್ತ ದೇಶದಾದ್ಯಂತ ಹಲವು ಕಾರ್ಯಕ್ರಮಗಳು ನಡೆಯಲಿದೆ. ಬಿಜೆಪಿ ಕಾರ್ಯಕರ್ತರು ಸ್ವಚ್ಛತಾ ಕಾರ್ಯಕ್ರಮ, ರಕ್ತದಾನ ಶಿಬಿರ ಸೇರಿದಂತೆ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದಾರೆ.

[t4b-ticker]
error: Content is protected !!