ಮಾಜಿ CM ಸದಾನಂದಗೌಡರ ಬ್ಯಾಂಕ್‌ ಖಾತೆಗಳಿಂದ ₹3 ಲಕ್ಷ ದೋಚಿದ ಸೈಬ‌ರ್ ವಂಚಕರು

Picture of Savistara

Savistara

Bureau Report

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ ಅವರ ಮೂರು ಬ್ಯಾಂಕ್ ಖಾತೆಗಳಿಂದ ಸೈಬ‌ರ್ ವಂಚಕರು ₹3 ಲಕ್ಷ ದೋಚಿದ್ದಾರೆ.

ಮೂರು ಬ್ಯಾಂಕ್ ಖಾತೆಗಳನ್ನು ಹ್ಯಾಕ್ ಮಾಡಿ ಪ್ರತಿ ಖಾತೆಯಿಂದ * 1 ಲಕ್ಷದಂತೆ ಒಟ್ಟು ₹ 3 ಲಕ್ಷವನ್ನು ದೋಚಿದ್ದಾರೆ. ಸೈಬ‌ರ್ ವಂಚಕರು ಹಣ ದೋಚಿರುವ ಸಂಗತಿಯನ್ನು ಸದಾನಂದಗೌಡ ಅವರೂ ದೃಢಪಡಿಸಿದ್ದು, ಸೈಬರ್ ಅಪರಾಧ ಪೊಲೀಸ್‌ ಠಾಣೆಗೆ ದೂರು ನೀಡುವುದಾಗಿ ತಿಳಿಸಿದ್ದಾರೆ.*ಬ್ಯಾಂಕ್ ಖಾತೆಗಳಿಂದ ಹಣ ಡ್ರಾ ಆಗಿರುವುದು ಬುಧವಾರ ಬೆಳಿಗ್ಗೆ ನನ್ನ ಗಮನಕ್ಕೆ ಬಂತು. ಆರೋಪಿಗಳು ಎಲ್ಲೋ ಕುಳಿತು ವಂಚನೆ ಎಸಗಿದ್ದಾರೆ’ ಎಂದು ಸದಾನಂದಗೌಡ ಅವರು ತಿಳಿಸಿದ್ದಾರೆ.ನಟ, ನಿರ್ದೇಶಕ ಉಪೇಂದ್ರ ಹಾಗೂ ಅವರ ಪತ್ನಿ ಪ್ರಿಯಾಂಕಾ ಉಪೇಂದ್ರ ಅವರ ಮೊಬೈಲ್ ಅನ್ನು ಇತ್ತೀಚೆಗೆ ವಂಚಕರು ಹ್ಯಾಕ್ ಮಾಡಿ ₹ 1.50 ಲಕ್ಷವನ್ನು ವಂಚಿಸಿದ್ದರು. ಉಪೇಂದ್ರ ಅವರು ಕೇಂದ್ರ ವಿಭಾಗದ ಸೈಬರ್ ಅಪರಾಧ ಪೊಲೀಸ್‌ ಠಾಣೆಗೆ ದೂರು ನೀಡಿದ್ದರು.

News Updates

BREAKING NEWS ಸುಳ್ಯ :ಪಂಜ ಕಾಂಗ್ರೆಸ್ ಪಕ್ಷದ ಹುದ್ದೆಗೆ ರಾಜಿನಾಮೆ ನೀಡಿದ ದಿನೇಶ್ ಪುಂಡಿಮನೆ, ಕುಸುಮಾಧರ ಕೆರೆಯಡ್ಕ,ಲೋಕನಾಥ್ ಕುದ್ವ |ನಮ್ಮ ಮಾತನ್ನು ಪಕ್ಷದ ನಾಯಕರು ಉಳಿಸಿಕೊಂಡಿಲ್ಲ, ದೇವಸ್ಥಾನ ವ್ಯವಸ್ಥೆ ಸರಿದಾರಿಗೆ ತರುವ ಕೆಲಸವಾಗಲಿ: ದಿನೇಶ್ ಪುಂಡಿಮನೆ

News Updates

ಬೆಳ್ತಂಗಡಿ : ಮೊಗ್ರು ಜೈ ಶ್ರೀರಾಮ ಸೇವಾ ಟ್ರಸ್ಟ್ ಅಲೆಕ್ಕಿ -ಮುಗೇರಡ್ಕ ಮೊಗ್ರು, ಶ್ರೀ ರಾಮ ಶಿಶುಮಂದಿರದ 5 ನೇ ವರ್ಷದ ಶ್ರೀ ಕೃಷ್ಣೋತ್ಸವ. |ಕಾಶಿ ಶೆಟ್ಟಿ ನವಶಕ್ತಿ ಗುರುವಾಯನಕೆರೆ ಇವರ ಸ್ಮರಣಾರ್ಥ ಕಾಶಿ ಶೆಟ್ಟಿ ವಿದ್ಯಾ ಮಂದಿರ, ಹಾಗೂ ಶಾಸಕ ಹರೀಶ್ ಪೂಂಜಾರವರ ನೆರವಿನ ಅಡುಗೆ ಕೋಣೆ ಉದ್ಘಾಟನಾ ಕಾರ್ಯಕ್ರಮ |ಮಕ್ಕಳ ಶ್ರೀಕೃಷ್ಣ ಮತ್ತು ರಾಧೆಯರ ಸ್ಪರ್ಧೆ, ಮೊಸರು ಕುಡಿಕೆ, ಆಟೋಟ ಸ್ಪರ್ಧೆ

[t4b-ticker]
error: Content is protected !!