ರಷ್ಯಾದಲ್ಲಿ 7.8 ತೀವ್ರತೆಯ ಪ್ರಬಲ ಭೂಕಂಪ – ಸುನಾಮಿ ಎಚ್ಚರಿಕೆ

Picture of Savistara

Savistara

Bureau Report

ಮಾಸ್ಕೋ: ರಷ್ಯಾದ (Russia Earthquake) ಪೂರ್ವ ಕಮ್ಚಟ್ಕಾ ಪರ್ಯಾಯ ದ್ವೀಪದ ಕರಾವಳಿಯಲ್ಲಿ ಶುಕ್ರವಾರ ಮುಂಜಾನೆ 7.8 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ. ಅಧಿಕಾರಿಗಳು ಸುನಾಮಿ ಎಚ್ಚರಿಕೆ ಹೊರಡಿಸಿದ್ದಾರೆ.ರಷ್ಯಾದ ಸಾಮಾಜಿಕ ಮಾಧ್ಯಮದಲ್ಲಿ ಭೂಕಂಪಕ್ಕೆ ಸಂಬಂಧಿಸಿದ ವೀಡಿಯೋಗಳು ವೈರಲ್‌ ಆಗಿವೆ. ಮನೆಗಳಲ್ಲಿನ ಪೀಠೋಪಕರಣಗಳು, ವಸ್ತುಗಳು ಅಲುಗಾಡುತ್ತಿರುವ ಹಾಗೂ ಪಾರ್ಕ್‌ ಮಾಡಿದ ಕಾರುಗಳು ಹಿಂದಕ್ಕೆ ಮತ್ತು ಮುಂದಕ್ಕೆ ತೂಗಾಡುತ್ತಿರುವ ದೃಶ್ಯಗಳು ವೀಡಿಯೋದಲ್ಲಿ ಕಂಡುಬಂದಿವೆ.

ಪ್ರದೇಶದ ರಾಜಧಾನಿ ಪೆಟ್ರೋಪಾವ್ಲೋವ್ಸ್ಕ್-ಕಾಮ್ಚಾಟ್ಸ್ಕಿಯಿಂದ ಪೂರ್ವಕ್ಕೆ 128 ಕಿಲೋಮೀಟರ್ (80 ಮೈಲು) ದೂರದಲ್ಲಿ ಮತ್ತು 10 ಕಿಲೋಮೀಟರ್ (ಆರು ಮೈಲು) ಆಳದಲ್ಲಿ ಭೂಕಂಪ ಸಂಭವಿಸಿದೆ ಎಂದು ಯುಎಸ್ ಭೂವೈಜ್ಞಾನಿಕ ಸಮೀಕ್ಷೆ (ಯುಎಸ್ಜಿಎಸ್) ವರದಿ ಮಾಡಿದೆ. ಅಮೆರಿಕದ ಪೆಸಿಫಿಕ್ ಸುನಾಮಿ ಎಚ್ಚರಿಕೆ ಕೇಂದ್ರವು ಹತ್ತಿರದ ಕರಾವಳಿಯಲ್ಲಿ ಅಪಾಯಕಾರಿ ಅಲೆಗಳು ಏಳಬಹುದು ಎಂದು ಎಚ್ಚರಿಕೆ ನೀಡಿದೆ.ಪ್ರಸ್ತುತ ಯಾವುದೇ ಹಾನಿಯ ವರದಿಗಳಿಲ್ಲ. ಎಲ್ಲರೂ ಶಾಂತವಾಗಿರಲು ನಾನು ಕೇಳಿಕೊಳ್ಳುತ್ತೇನೆ. ಪರ್ಯಾಯ ದ್ವೀಪದ ಪೂರ್ವ ಕರಾವಳಿಗೆ ಸುನಾಮಿ ಎಚ್ಚರಿಕೆ ನೀಡಲಾಗಿದೆ. ಸಾರ್ವಜನಿಕರಿಗೆ ಎಚ್ಚರಿಕೆ ನೀಡಲಾಗುತ್ತಿದೆ ಎಂದು ಪ್ರದೇಶದ ಗವರ್ನರ್ ವ್ಲಾಡಿಮಿರ್ ಸೊಲೊಡೊವ್ ತಿಳಿಸಿದ್ದಾರೆ.

ಜುಲೈನಲ್ಲಿ ಈ ಪ್ರದೇಶದ ಕರಾವಳಿಯಲ್ಲಿ 8.8 ತೀವ್ರತೆಯ ಪ್ರಬಲ ಭೂಕಂಪವು ಸಂಭವಿಸಿತ್ತು. ಇದು ಸುನಾಮಿಗೆ ಕಾರಣವಾಗಿತ್ತು. ಪರಿಣಾಮವಾಗಿ ಕರಾವಳಿ ಹಳ್ಳಿಯ ಒಂದು ಭಾಗ ಸಮುದ್ರಕ್ಕೆ ಕೊಚ್ಚಿಕೊಂಡು ಹೋಗಿತ್ತು.

News Updates

ಮಂಗಳೂರಿನಲ್ಲಿ ನ. 6ಕ್ಕೆ ಬಿಜೆಪಿ ಬೃಹತ್ ಪಾದಯಾತ್ರೆ: ಕೇಂದ್ರ ಸಚಿವ ಸುರೇಶ್ ಗೋಪಿ, ಸಂಸದ ತೇಜಸ್ವಿ ಸೂರ್ಯ ಭಾಗಿ |ಲೋಕತಂತ್ರ ಉಳಿಸಿ, ಅರಾಜಕತೆ ಅಳಿಸಿ ಅಭಿಯಾನದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ಸಂಸದ ಕ್ಯಾ. ಚೌಟ ಕರೆ

News Updates

ಕೇಂದ್ರದ ಯೋಜನೆಗಳಿಗೆ ರಾಜ್ಯ ಕಾಂಗ್ರೆಸ್ ಸರ್ಕಾರದಿಂದ ಅಡ್ಡಗಾಲು: ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಆರೋಪ |ಪುತ್ತೂರಿನಲ್ಲಿ ‘ನಮ್ಮ ಹಕ್ಕಿಗಾಗಿ ನಮ್ಮ ಹೆಜ್ಜೆ’ ಪಾದಯಾತ್ರೆ, ‘ನಮ್ಮ ಹಕ್ಕು ನಮಗೆ ನೀಡಿ’ ಹಕ್ಕೊತ್ತಾಯ ಸಭೆ

News Updates

ಕೇಂದ್ರದ ಯೋಜನೆಗಳಿಗೆ ರಾಜ್ಯ ಕಾಂಗ್ರೆಸ್ ಸರ್ಕಾರದಿಂದ ಅಡ್ಡಗಾಲು: ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಆರೋಪ |ಪುತ್ತೂರಿನಲ್ಲಿ ‘ನಮ್ಮ ಹಕ್ಕಿಗಾಗಿ ನಮ್ಮ ಹೆಜ್ಜೆ’ ಪಾದಯಾತ್ರೆ, ‘ನಮ್ಮ ಹಕ್ಕು ನಮಗೆ ನೀಡಿ’ ಹಕ್ಕೊತ್ತಾಯ ಸಭೆ

[t4b-ticker]
error: Content is protected !!