ಧರ್ಮಸ್ಥಳ ಪ್ರಕರಣ ಕಾಣಲಿದೆ ತಾರ್ಕಿಕ ಅಂತ್ಯ: ಎ.ಎಸ್. ಪೊನ್ನಣ್ಣ

Picture of Savistara

Savistara

Bureau Report

ಬೆಂಗಳೂರು: ‘ವಿಶೇಷ ತನಿಖಾ ತಂಡ (ಎಸ್‌ಐಟಿ) ನಡೆಸುತ್ತಿರುವಧರ್ಮಸ್ಥಳ ಪ್ರಕರಣದ ತನಿಖೆ ತಾರ್ಕಿಕ ಅಂತ್ಯ ಕಾಣುವುದರಲ್ಲಿ ಯಾವುದೇ ಅನುಮಾನ ಬೇಡ’ ಎಂದು ಮುಖ್ಯಮಂತ್ರಿಯವರ ಕಾನೂನು ಸಲಹೆಗಾರ ಎ.ಎಸ್. ಪೊನ್ನಣ್ಣ ತಿಳಿಸಿದರು.ಪ್ರೆಸ್‌ಕ್ಲಬ್‌ನಲ್ಲಿ ಗುರುವಾರ ಏರ್ಪಡಿಸಿದ್ದ ಮಾಧ್ಯಮ ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ತನಿಖೆಯಲ್ಲಿ ಸರ್ಕಾರದ ಯಾವುದೇ ಹಸ್ತಕ್ಷೇಪ ಇಲ್ಲ.ಪಾರದರ್ಶಕವಾಗಿ ತನಿಖೆ ನಡೆಯುತ್ತಿದ್ದು, ತನಿಖೆ ಮುಗಿದ ಬಳಿಕ ನ್ಯಾಯಾಲಯಕ್ಕೆ ವರದಿ ಸಲ್ಲಿಕೆಯಾಗಲಿದೆ. ಹೇಳಿಕೆ ಆಧರಿಸಿಯೂ ತನಿಖೆ ನಡೆಯುತ್ತಿದೆ. ದೂರುದಾರರ ಬಗ್ಗೆಯೂ ತನಿಖೆ ನಡೆಯುತ್ತಿದೆ. ದಾರಿ ತಪ್ಪಿಸುವ ಪ್ರಯತ್ನ ಯಾರೇ ಮಾಡಿದ್ದರೂ ತನಿಖೆಯಿಂದ ಬಯಲಾಗಲಿದೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ತನಿಖೆಗೆ ಎಸ್‌ಐಟಿ ಮಾಡಿದಾಗ ಧರ್ಮಸ್ಥಳದ ಧರ್ಮಾಧಿಕಾರಿಯವರು ಸ್ವಾಗತಿಸಿದ್ದರು. ಬಿಜೆಪಿ ನಾಯಕರೂ ಸ್ವಾಗತಿಸಿದ್ದರು. ಇದೀಗ ತನಿಖೆಗೆ ಧರ್ಮದ, ರಾಜಕೀಯದ ಬಣ್ಣ ಕಟ್ಟುವ ಕೆಲಸವನ್ನು ಬಿಜೆಪಿ ಮಾಡುತ್ತಿದೆ ಎಂದು ಆರೋಪಿಸಿದರು.ಮಾತಿಗಷ್ಟೇ ಹಗರಣ: ಮುಡಾ ಪ್ರಕರಣದಲ್ಲಿ ಕೇಂದ್ರ ಸರ್ಕಾರವುಎಲ್ಲ ರೀತಿಯ ತನಿಖಾ ಅಸ್ತ್ರಗಳನ್ನು ಬಳಸಿದರೂ ಯಾವುದೇ ಕಾನೂನು ಬಾಹಿರ ಅಂಶಗಳು ಪತ್ತೆಯಾಗಿಲ್ಲ. ಮುಡಾ, ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣಗಳು ಮಾತಿಗಷ್ಟೇ ಸೀಮಿತವಾಗಿವೆ ಎಂದು ಪೊನ್ನಣ್ಣ ಪ್ರತಿಕ್ರಿಯಿಸಿದರು.ಇ.ಡಿ, ಸಿಬಿಐ ಮುಂತಾದ ಅಸ್ತ್ರಗಳನ್ನು ಬಳಸಲಾಗಿತ್ತು. ಯಾವುದರಲ್ಲಿಯೂ ಏನೂ ಸಿಗಲಿಲ್ಲ. ಕಾನೂನು ಬಾಹಿರವಾಗಿ ಏನೂ ನಡೆದಿಲ್ಲ ಎಂದು ಲೋಕಾಯುಕ್ತ ಮತ್ತು ನ್ಯಾಯಮೂರ್ತಿ ದೇಸಾಯಿ ವರದಿಯಲ್ಲಿ ತಿಳಿಸಲಾಗಿದೆ. ಸತ್ಯ ಹೊರ ಬಂದಿರುವುದರಿಂದ ಪ್ರಕರಣ ಸಮಾಪ್ತಿಗೊಂಡಿದೆ ಎಂದರು.ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ಹೋಗಲಿ ಎಂದು ರಾಜಕೀಯವಾಗಿ ಹೇಳಿಕೆ ನೀಡುವವರು ಕೇಂದ್ರದಿಂದ ರಾಜ್ಯಕ್ಕೆ ಬರಬೇಕಾದ ಅನುದಾನ, ಜಿಎಸ್‌ಟಿಗಳ ಬಗ್ಗೆ ಚರ್ಚೆ ಮಾಡುವುದಿಲ್ಲ. ಮುಡಾ ಪ್ರಕರಣ ಮುಕ್ತಾಯ ಆಗಿರಬಹುದು. ಆದರೆ, ಸಿದ್ದರಾಮಯ್ಯರಿಗೆ ಮಾಡಿದ ಅಪಮಾನವನ್ನು ಸರಿಪಡಿಸಲು ಸಾಧ್ಯವಿಲ್ಲ ಎಂದು ಹೇಳಿದರು.

News Updates

ಅಂತಿಮ ಹಂತ ತಲುಪಿದ ಕೋಟೆಗಂಗೂರು ರೈಲ್ವೆ ಕೋಚಿಂಗ್ ಡಿಪೋ ಕಾಮಗಾರಿ; ಸಂಸದ ಬಿ.ವೈ.ರಾಘವೇಂದ್ರ ಅವರ ನಿರಂತರ ಪರಿಶ್ರಮದ ಪ್ರತಿಫಲ | ಯೋಜನೆಗೆ ಇಲ್ಲಿವರೆಗೆ 58.82 ಕೋಟಿ ರೂ. ವೆಚ್ಚ; ನಿಲ್ದಾಣ ಹಾಗೂ ಸೇವಾ ಕಟ್ಟಡಗಳ ನಿರ್ಮಾಣ ಕಾಮಗಾರಿ ಪೂರ್ಣ; ಪ್ರಸಕ್ತ ಸಾಲಿಗೆ 9.5 ಕೋಟಿ ರೂ. ಅನುದಾನ ಬಿಡುಗಡೆ

News Updates

ಅಂತಿಮ ಹಂತ ತಲುಪಿದ ಕೋಟೆಗಂಗೂರು ರೈಲ್ವೆ ಕೋಚಿಂಗ್ ಡಿಪೋ ಕಾಮಗಾರಿ; ಸಂಸದ ಬಿ.ವೈ.ರಾಘವೇಂದ್ರ ಅವರ ನಿರಂತರ ಪರಿಶ್ರಮದ ಪ್ರತಿಫಲ | ಯೋಜನೆಗೆ ಇಲ್ಲಿವರೆಗೆ 58.82 ಕೋಟಿ ರೂ. ವೆಚ್ಚ; ನಿಲ್ದಾಣ ಹಾಗೂ ಸೇವಾ ಕಟ್ಟಡಗಳ ನಿರ್ಮಾಣ ಕಾಮಗಾರಿ ಪೂರ್ಣ; ಪ್ರಸಕ್ತ ಸಾಲಿಗೆ 9.5 ಕೋಟಿ ರೂ. ಅನುದಾನ ಬಿಡುಗಡೆ

News Updates

ಮೋದಿ ಸರ್ಕಾರದ ಮಾತೃ ಆರೋಗ್ಯ ರಕ್ಷಣೆಯ ಉಪಕ್ರಮಗಳಿಗೆ ದೊರೆಯುತ್ತಿರುವ ಉತ್ತಮ ಫಲಿತಾಂಶ: ಕರ್ನಾಟಕದಲ್ಲಿ PMSMA ಅಡಿ ಪತ್ತೆಯಾದ 12 ಲಕ್ಷಕ್ಕೂ ಹೆಚ್ಚು ಅಪಾಯಕಾರಿ ಗರ್ಭಧಾರಣೆಗಳಿಗೆ ಅಗತ್ಯ ವೈದ್ಯಕೀಯ ನೆರವು; ಸಂಸದ ಬಿ.ವೈ. ರಾಘವೇಂದ್ರ ಅವರಿಗೆ ಮಾಹಿತಿ ನೀಡಿದ ಕೇಂದ್ರ ಸರ್ಕಾರ

[t4b-ticker]
error: Content is protected !!