ಜಿಎಸ್ಟಿ ಎಫೆಕ್ಟ್: 22ರಿಂದ ನಂದಿನಿ ಹಾಲಿನ ಉತ್ಪನ್ನಗಳ ದರ ಇಳಿಕೆ | ಮೊಸರು ದರ ಲೀಟರ್‌ಗೆ 4 ರು. ಇಳಿಕೆ ಸಾಧ್ಯತೆ

Picture of Savistara

Savistara

Bureau Report

ಕೇಂದ್ರ ಸರ್ಕಾರ ಹಾಲಿನ ಉತ್ಪನ್ನಗಳ ಮೇಲಿನ ಜಿಎಸ್‌ಟಿ ದರ ಇಳಿಕೆ ಮಾಡಿದ ಹಿನ್ನೆಲೆಯಲ್ಲಿ ನಿರೀಕ್ಷೆಯಂತೆ ನಂದಿನಿ ಮೊಸರು, ತುಪ್ಪ, ಬೆಣ್ಣೆ, ಚೀಸ್ ಸೇರಿ ಹಲವು ಉತ್ಪನ್ನಗಳ ಬೆಲೆ ಕಡಿಮೆ ಯಾಗಲಿದೆ. ಸೋಮವಾರದಿಂದಲೇ ಪರಿಷ್ಕೃತ ದರಗಳು ಜಾರಿಗೆ ಬರಲಿವೆ. ಕೇಂದ್ರ ಸೆ.22ರಿಂದ ಅನ್ವಯವಾಗುವಂತೆ ಹಾಲಿನ ಉತ್ಪನ್ನಗಳ ಮೇಲಿನ ಜಿಎಸ್‌ಟಿ ಶೇ.12ರಿಂದ 5ಕ್ಕೆ ಇಳಿಕೆ ಮಾಡಿದೆ. ಇದರಿಂದ ನಂದಿನಿ ಕೆಲ ಉತ್ಪನ್ನಗಳ ದರ ಕಡಿಮೆಯಾಗಲಿದೆ. ಶುಕ್ರವಾರ ಕೆಎಂಎಫ್ ಆಡಳಿತ ಮಂಡಳಿ,ಹಿರಿಯ ಅಧಿಕಾರಿಗಳು ಸಭೆ ಸೇರಿ ದ್ದು, ಶನಿವಾರ ಅಧಿಕೃತ ಆದೇಶ ಹೊರಡಿಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.ಪನ್ನೀರ್ ಮತ್ತು ಗುಡ್ ಲೈಫ್ ಹಾಲಿಗೆ ವಿಧಿಸುತ್ತಿದ್ದ ಜಿಎಸ್‌ಟಿ ಶೇ.5ರಷ್ಟಿತ್ತು. ಇದೀಗ ಜಿಎಸ್‌ಟಿಯಿಂದ ಹೊರಗಿಡಲಾಗಿದೆ. ತುಪ್ಪ, ಬೆಣ್ಣೆ, ಚೀಸ್, ಪನ್ನೀರ್ ಹಾಗೂ ಇತರೆ ಕುರಕಲು ತಿಂಡಿಗಳ ಜಿಎಸ್‌ಟಿ ದರವು ಶೇ.12 ರಿಂದ ಶೇ.5ಕ್ಕೆ ಇಳಿಕೆಯಾಗಿದೆ. ಬೆಲೆಯೂ ಕಡಿಮೆಯಾಗಲಿದೆ. ಕುಕ್ಕೀಸ್, ಚಾಕೋಲೆಟ್, ಐಸ್‌ಕ್ರೀಂ, ನೀರಿನ ಉತ್ಪನ್ನಗಳಿಗೆ ವಿಧಿಸುತ್ತಿದ್ದ ಜಿಎಸ್‌ಟಿ ಶೇ.18ರ ಷ್ಟಿತ್ತು. ಇದೀಗಶೇ.5ಕ್ಕೆ ಇಳಿಕೆಯಾಗಲಿದೆ. ಆದರೆ, ಕಾರ್ಬೋನೇಟೆಡ್ ಪಾನಿಯಗಳ ಮೇಲಿನ ಜಿಎಸ್‌ಟಿ ಹಾಲಿ ಶೇ.28ರಷ್ಟಿದ್ದು, ಶೇ.40ಕ್ಕೆ ಏರಿಕೆಯಾಗಲಿದೆ. ಪರಿಷ್ಕೃತ ದರ ಸೆ. 22ರಿಂದಲೇ ಜಾರಿಗೆ ಬರಲಿದೆ. ಜಿಎಸ್‌ಟಿ ಇಳಿಕೆಯಿಂದ ಮೊಸರಿನ ದರ ಲೀಟರ್‌ಗೆ 4 ರು.ವರೆಗೆ ಕಡಿಮೆಯಾಗುವ ನಿರೀಕ್ಷೆ ಇದೆ.

News Updates

BREAKING NEWS ಸುಳ್ಯ :ಪಂಜ ಕಾಂಗ್ರೆಸ್ ಪಕ್ಷದ ಹುದ್ದೆಗೆ ರಾಜಿನಾಮೆ ನೀಡಿದ ದಿನೇಶ್ ಪುಂಡಿಮನೆ, ಕುಸುಮಾಧರ ಕೆರೆಯಡ್ಕ,ಲೋಕನಾಥ್ ಕುದ್ವ |ನಮ್ಮ ಮಾತನ್ನು ಪಕ್ಷದ ನಾಯಕರು ಉಳಿಸಿಕೊಂಡಿಲ್ಲ, ದೇವಸ್ಥಾನ ವ್ಯವಸ್ಥೆ ಸರಿದಾರಿಗೆ ತರುವ ಕೆಲಸವಾಗಲಿ: ದಿನೇಶ್ ಪುಂಡಿಮನೆ

News Updates

ಬೆಳ್ತಂಗಡಿ : ಮೊಗ್ರು ಜೈ ಶ್ರೀರಾಮ ಸೇವಾ ಟ್ರಸ್ಟ್ ಅಲೆಕ್ಕಿ -ಮುಗೇರಡ್ಕ ಮೊಗ್ರು, ಶ್ರೀ ರಾಮ ಶಿಶುಮಂದಿರದ 5 ನೇ ವರ್ಷದ ಶ್ರೀ ಕೃಷ್ಣೋತ್ಸವ. |ಕಾಶಿ ಶೆಟ್ಟಿ ನವಶಕ್ತಿ ಗುರುವಾಯನಕೆರೆ ಇವರ ಸ್ಮರಣಾರ್ಥ ಕಾಶಿ ಶೆಟ್ಟಿ ವಿದ್ಯಾ ಮಂದಿರ, ಹಾಗೂ ಶಾಸಕ ಹರೀಶ್ ಪೂಂಜಾರವರ ನೆರವಿನ ಅಡುಗೆ ಕೋಣೆ ಉದ್ಘಾಟನಾ ಕಾರ್ಯಕ್ರಮ |ಮಕ್ಕಳ ಶ್ರೀಕೃಷ್ಣ ಮತ್ತು ರಾಧೆಯರ ಸ್ಪರ್ಧೆ, ಮೊಸರು ಕುಡಿಕೆ, ಆಟೋಟ ಸ್ಪರ್ಧೆ

[t4b-ticker]
error: Content is protected !!