ಜಾತಿವಾರು ಸಮೀಕ್ಷೆ | ಒಕ್ಕಲಿಗ ಸಮಾಜದ ಅಭಿಪ್ರಾಯದ ಬಗ್ಗೆ ಮಾತಾಡಲ್ಲ: ಡಿಕೆಶಿ

Picture of Savistara

Savistara

Bureau Report

ಬೆಂಗಳೂರು: ‘ನಾನು ಸರ್ಕಾರದಲ್ಲಿದ್ದೇನೆ. ಸಮಾಜದವರ ಅಭಿಪ್ರಾಯಗಳ ಬಗ್ಗೆ ನಾನು ಮಾತನಾಡಲು ಹೋಗುವುದಿಲ್ಲ. ಅದು ಅವರ ಅಭಿಪ್ರಾಯ. ಮುಂದೆ ಈ ಬಗ್ಗೆ ಮಾತನಾಡುತ್ತೇನೆ’ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾ‌ರ್ ಹೇಳಿದರು.

ದೆಹಲಿಗೆ ತೆರಳುವ ಮೊದಲು ಸದಾಶಿವನಗರದ ತಮ್ಮ ನಿವಾಸದ ಬಳಿ ಸುದ್ದಿಗಾರರ ಜೊತೆ ಭಾನುವಾರ ಅವರು ಮಾತನಾಡಿದರು,ಶನಿವಾರ ನಡೆದಿದ್ದ ಒಕ್ಕಲಿಗ ಮಠಾಧೀಶರ ಹಾಗೂ ಮುಖಂಡರ ಸಭೆಯಲ್ಲಿ ಜಾತಿವಾರು ಸಮೀಕ್ಷೆಯನ್ನು ಮುಂದೂಡುವಂತೆ ನಿರ್ಣಯ ತೆಗೆದುಕೊಳ್ಳಲಾಗಿತ್ತು. ಈ ಬಗ್ಗೆ ಕೇಳಿದಾಗ ಅವರು, ‘ಆ ಬಗ್ಗೆ ಈಗ ಪ್ರತಿಕ್ರಿಯಿಸುವುದಿಲ್ಲ’ ಎಂದರು.ದೆಹಲಿ ಭೇಟಿಯ ಕುರಿತು ಕೇಳಿದಾಗ, ‘ಕಾವೇರಿ ನೀರಿನ ವಿಚಾರವಾಗಿ ನ್ಯಾಯಾಲಯದಲ್ಲಿ ವಿಚಾರಣೆ ದಿನಾಂಕ ನಿಗದಿಯಾಗಿದ್ದು, ಈ ಬಗ್ಗೆ ವಕೀಲರುಗಳ ಬಳಿ ಚರ್ಚಿಸಲು ಹಾಗೂ ಒಂದಷ್ಟು ಕೆಲಸಗಳ ಕಾರಣಕ್ಕೆ ತೆರಳುತ್ತಿರುವೆ’ ಎಂದು ತಿಳಿಸಿದರು.

[t4b-ticker]
error: Content is protected !!