ಪಂಚಮಸಾಲಿ ಪೀಠದಿಂದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಉಚ್ಚಾಟನೆ: ನೀಲಕಂಠ ಅಸೂಟಿ

Picture of Savistara

Savistara

Bureau Report

ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಟ್ರಸ್ಟ್ ಪ್ರಧಾನ ಕಾರ್ಯದರ್ಶಿ ನೀಲಕಂಠ ಅಸೂಟಿ, ಟ್ರಸ್ಟ್‌ನಲ್ಲಿ ಉಚ್ಚಾಟನೆ ನಿರ್ಧಾರ ತೆಗೆದುಕೊಳ್ಳಲಾಗಿದೆ. ಇನ್ನು ಮುಂದೆ ಪೀಠಕ್ಕೂ, ಅವರಿಗೆ ಸಂಬಂಧವಿಲ್ಲ ಎಂದು ಅವರು ಹೇಳಿದರು.ಹುಬ್ಬಳ್ಳಿಯಲ್ಲಿ ನಡೆದ ಜನಪ್ರತಿನಿಧಿಗಳ ಸಭೆಯಲ್ಲಿ ಧರ್ಮ ಕಾಲಂನಲ್ಲಿ ಹಿಂದೂ ಬರೆಯಿಸಲು, ಜಾತಿ ಕಾಲಂನಲ್ಲಿ ಲಿಂಗಾಯತ ಎಂದು ಬರೆಸಲು ಹೇಳಿದ್ದಾರೆ. ಟ್ರಸ್ಟ್ ಬಸವ ತತ್ವದಲ್ಲಿ ನಡೆಯುತ್ತಿರುವುದರಿಂದ ಇದು ಟ್ರಸ್ಟ್ ನಿರ್ಧಾರಕ್ಕೆ ವಿರೋಧವಾಗಿದೆ ಎಂದರು.ಟ್ರಸ್ಟ್‌ ಅಧ್ಯಕ್ಷ ವಿಜಯಾನಂದ ಕಾಶಪ್ಪನವರ ಮಾತನಾಡಿ, ಸ್ವಾಮೀಜಿ ಅವರು ವೈಯಕ್ತಿಕವಾಗಿ ಯಾವುದೇ ಆಸ್ತಿ ಮಾಡಿಕೊಳ್ಳಬಾರದು ಎಂದಿದೆ. ಆದರೆ, ಅವರು ಬೆಳಗಾವಿ, ಹುಬ್ಬಳ್ಳಿ, ಬೆಂಗಳೂರಿನಲ್ಲಿ ಮನೆ ಮಾಡಿಕೊಂಡಿದ್ದಾರೆ. ಅವರ ಹೆಸರಿನಲ್ಲಿ ಆಸ್ತಿ ಮಾಡಿಕೊಂಡಿದ್ದಾರೆ. ಸಮಯ ಬಂದಾಗ ವಿವರ ಬಹಿರಂಗ ಪಡಿಸುತ್ತೇನೆ ಎಂದು ಹೇಳಿದರು.

ಸ್ವಾಭಿಮಾನವಿದ್ದರೆ ಸ್ವಾಮೀಜಿ ಪೀಠಕ್ಕೆ ಬರಬಾರದು. ಹಿಂದೂ ಎಂದು ಬರೆಯಿಸಲು ಹೇಳಿರುವುದು ಮೀಸಲಾತಿ ಹೋರಾಟ ಹತ್ತಿಕ್ಕುವ ತಂತ್ರವಾಗಿದೆ. ಇದಕ್ಕೆ ಸ್ವಾಮೀಜಿಯನ್ನು ಕೆಲವರು ಬಳಸಿಕೊಂಡಿದ್ದಾರೆ ಎಂದು ಆರೋಪಿಸಿದರು.

News Updates

BREAKING NEWS ಸುಳ್ಯ :ಪಂಜ ಕಾಂಗ್ರೆಸ್ ಪಕ್ಷದ ಹುದ್ದೆಗೆ ರಾಜಿನಾಮೆ ನೀಡಿದ ದಿನೇಶ್ ಪುಂಡಿಮನೆ, ಕುಸುಮಾಧರ ಕೆರೆಯಡ್ಕ,ಲೋಕನಾಥ್ ಕುದ್ವ |ನಮ್ಮ ಮಾತನ್ನು ಪಕ್ಷದ ನಾಯಕರು ಉಳಿಸಿಕೊಂಡಿಲ್ಲ, ದೇವಸ್ಥಾನ ವ್ಯವಸ್ಥೆ ಸರಿದಾರಿಗೆ ತರುವ ಕೆಲಸವಾಗಲಿ: ದಿನೇಶ್ ಪುಂಡಿಮನೆ

News Updates

ಬೆಳ್ತಂಗಡಿ : ಮೊಗ್ರು ಜೈ ಶ್ರೀರಾಮ ಸೇವಾ ಟ್ರಸ್ಟ್ ಅಲೆಕ್ಕಿ -ಮುಗೇರಡ್ಕ ಮೊಗ್ರು, ಶ್ರೀ ರಾಮ ಶಿಶುಮಂದಿರದ 5 ನೇ ವರ್ಷದ ಶ್ರೀ ಕೃಷ್ಣೋತ್ಸವ. |ಕಾಶಿ ಶೆಟ್ಟಿ ನವಶಕ್ತಿ ಗುರುವಾಯನಕೆರೆ ಇವರ ಸ್ಮರಣಾರ್ಥ ಕಾಶಿ ಶೆಟ್ಟಿ ವಿದ್ಯಾ ಮಂದಿರ, ಹಾಗೂ ಶಾಸಕ ಹರೀಶ್ ಪೂಂಜಾರವರ ನೆರವಿನ ಅಡುಗೆ ಕೋಣೆ ಉದ್ಘಾಟನಾ ಕಾರ್ಯಕ್ರಮ |ಮಕ್ಕಳ ಶ್ರೀಕೃಷ್ಣ ಮತ್ತು ರಾಧೆಯರ ಸ್ಪರ್ಧೆ, ಮೊಸರು ಕುಡಿಕೆ, ಆಟೋಟ ಸ್ಪರ್ಧೆ

[t4b-ticker]
error: Content is protected !!