ನಾಡಹಬ್ಬದ ವಿಚಾರದಲ್ಲಿ ಕೆಟ್ಟ ರಾಜಕಾರಣ ಬೇಡ: ಸಿಎಂ ಸಿದ್ದರಾಮಯ್ಯ

Picture of Savistara

Savistara

Bureau Report

ಬೆಂಗಳೂರು: ಗೋಡಾ ಹೈ – ಮೈದಾನ್ ಹೈ: ಬನ್ನಿಚುನಾವಣೆಯಲ್ಲಿ ರಾಜಕಾರಣ ಮಾಡೋಣ. ನಾಡಹಬ್ಬದ ವಿಚಾರದಲ್ಲಿ ಕೆಟ್ಟ ರಾಜಕಾರಣ ಬೇಡ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ನಾಡಹಬ್ಬ ಐತಿಹಾಸಿಕ ದಸರಾ ಉದ್ಘಾಟನೆ ಬಳಿಕ ವೇದಿಕೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು, ಮಾತನಾಡಿದ ಅವರು, ದಸರಾ ಉತ್ಸವ ಮತ್ತು ನಮ್ಮ ಸಾಂಸ್ಕೃತಿಕ ಹಿರಿಮೆಯ ಪರಿಚಯ ಇಲ್ಲದವರು ಬಾನು ಮುಷ್ಕಾಕ್ ಅವರನ್ನು ವಿರೋಧಿಸಿದ್ದರು. ಇತಿಹಾಸ ತಿರುಚಿ, ಸ್ವಾರ್ಥ ರಾಜಕೀಯ ಮಾಡುವುದು ಅಕ್ಷಮ್ಯ ಅಪರಾಧ. ರಾಜಕಾರಣ ಮಾಡುವುದಿದ್ದರೆ ಚುನಾವಣೆಯಲ್ಲಿ ಮಾಡೋಣ. ನಾಡ ಹಬ್ಬದ ವಿಚಾರದಲ್ಲಿ ಕೆಳ ಮಟ್ಟದ ರಾಜಕಾರಣ ಮಾಡುವುದು ಕ್ಷುಲ್ಲಕ ಎಂದರು.

ನಾಡಿನ ಬಹುಸಂಖ್ಯಾತ ಸಮುದಾಯ ಬಾನು ಮುಷ್ಕಾಕ್ ಅವರಿಂದ ದಸರಾ ಉದ್ಘಾಟಿಸಿರುವುದನ್ನು ಸ್ವಾಗತಿಸಿದೆ. ಇದು ಹೆಮ್ಮೆಯ ಸಂಗತಿ. ಅಂತರರಾಷ್ಟ್ರೀಯ ಬೂಕ‌ರ್ ಪ್ರಶಸ್ತಿ ಪುರಸ್ಕೃತರಾದ ಬಾನು ಮುಸ್ತಾಕ್ ಅವರು ದಸರಾ ಉದ್ಘಾಟಿಸಿರುವುದು ಸೂಕ್ತವಾಗಿದೆ. ಬಾನು ಮುಷ್ಕಾಕ್ ಮುಸ್ಲಿಂ ಮಹಿಳೆ ಎನ್ನುವುದಕ್ಕಿಂತ ಮಾನವೀಯ ಮೌಲ್ಯ ಪಾಲಿಸುವ ಮನುಷ್ಯರು. ನಾವು ಮನುಷ್ಯರು ಪರಸ್ಪರ ಪ್ರೀತಿಯಿಂದ ಬಾಳಬೇಕು. ದ್ವೇಷ ಮನುಷ್ಯತ್ವದ ವಿರೋಧಿ. ಆದ್ದರಿಂದ ದ್ವೇಷವನ್ನು ಆಚರಿಸುವವರು ಮನುಷ್ಯತ್ವದ ವಿರೋಧಿಗಳು ಎಂದು ಕುಟುಕಿದರು.

News Updates

BREAKING NEWS ಸುಳ್ಯ :ಪಂಜ ಕಾಂಗ್ರೆಸ್ ಪಕ್ಷದ ಹುದ್ದೆಗೆ ರಾಜಿನಾಮೆ ನೀಡಿದ ದಿನೇಶ್ ಪುಂಡಿಮನೆ, ಕುಸುಮಾಧರ ಕೆರೆಯಡ್ಕ,ಲೋಕನಾಥ್ ಕುದ್ವ |ನಮ್ಮ ಮಾತನ್ನು ಪಕ್ಷದ ನಾಯಕರು ಉಳಿಸಿಕೊಂಡಿಲ್ಲ, ದೇವಸ್ಥಾನ ವ್ಯವಸ್ಥೆ ಸರಿದಾರಿಗೆ ತರುವ ಕೆಲಸವಾಗಲಿ: ದಿನೇಶ್ ಪುಂಡಿಮನೆ

News Updates

ಬೆಳ್ತಂಗಡಿ : ಮೊಗ್ರು ಜೈ ಶ್ರೀರಾಮ ಸೇವಾ ಟ್ರಸ್ಟ್ ಅಲೆಕ್ಕಿ -ಮುಗೇರಡ್ಕ ಮೊಗ್ರು, ಶ್ರೀ ರಾಮ ಶಿಶುಮಂದಿರದ 5 ನೇ ವರ್ಷದ ಶ್ರೀ ಕೃಷ್ಣೋತ್ಸವ. |ಕಾಶಿ ಶೆಟ್ಟಿ ನವಶಕ್ತಿ ಗುರುವಾಯನಕೆರೆ ಇವರ ಸ್ಮರಣಾರ್ಥ ಕಾಶಿ ಶೆಟ್ಟಿ ವಿದ್ಯಾ ಮಂದಿರ, ಹಾಗೂ ಶಾಸಕ ಹರೀಶ್ ಪೂಂಜಾರವರ ನೆರವಿನ ಅಡುಗೆ ಕೋಣೆ ಉದ್ಘಾಟನಾ ಕಾರ್ಯಕ್ರಮ |ಮಕ್ಕಳ ಶ್ರೀಕೃಷ್ಣ ಮತ್ತು ರಾಧೆಯರ ಸ್ಪರ್ಧೆ, ಮೊಸರು ಕುಡಿಕೆ, ಆಟೋಟ ಸ್ಪರ್ಧೆ

[t4b-ticker]
error: Content is protected !!