ಶೌಚಾಲಯವೆಂದು ಕಾಕ್‌ಪಿಟ್‌ ಪ್ರವೇಶಿಸಿದ ಪ್ರಯಾಣಿಕ!

Picture of Savistara

Savistara

Bureau Report

ದೇವನಹಳ್ಳಿ (ಬೆಂ.ಗ್ರಾಮಾಂತರ ಜಿಲ್ಲೆ): ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಸೋಮವಾರ ಬೆಳಗ್ಗೆ ವಾರಾಣಸಿಗೆ ಹೋರಟಿದ್ದ ಏರ್ ಇಂಡಿಯಾ ವಿಮಾನದಲ್ಲಿ ಪ್ರಯಾಣಿಕರೊಬ್ಬರು ಶೌಚಾಲಯವೆಂದು ತಪ್ಪಾಗಿ ಭಾವಿಸಿ ಕಾಕ್‌ಪಿಟ್ (ಪೈಲಟ್ ಕ್ಯಾಬಿನ್) ಪ್ರವೇಶಿಸಲು ಯತ್ನಿಸಿದ್ದಾರೆ.

ಬೆಳಗ್ಗೆ 8 ಗಂಟೆಗೆ ಬೆಂಗಳೂರಿನಿಂದ ವಾರಾಣಸಿಗೆ ಹೊರಟಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನ IX 1086ರಲ್ಲಿ ಮಾರ್ಗಮಧ್ಯೆ ಈ ಅಚಾತುರ್ಯ ಸಂಭವಿಸಿದೆ. ಇದನ್ನು ಗಮನಿಸಿದ ವಿಮಾನ ಸಿಬ್ಬಂದಿ ಕೂಡಲೇ ಪ್ರಯಾಣಿಕನನ್ನು ಕಾಕ್‌ಪಿಟ್‌ನಿಂದ ಶೌಚಾಲಯಕ್ಕೆ ಕರೆದೊಯ್ದಿದ್ದಾರೆ.’ಮೊದಲ ಬಾರಿಗೆ ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ಕಾರಣ ಮಾಹಿತಿ ಕೊರತೆಯಿಂದ ಪ್ರಯಾಣಿಕ ಕಾಕ್‌ಪಿಟ್ ಬಾಗಿಲನ್ನು ಶೌಚಾಲಯ ಬಾಗಿಲು ಎಂದು ತಪ್ಪಾಗಿ ಭಾವಿಸಿ ತೆರೆಯಲು ಯತ್ನಿಸಿದ್ದಾರೆ. ಇದು ಉದ್ದೇಶಪೂರ್ವಕ ಕೃತ್ಯ ಅಲ್ಲ’ ಎಂದು ಮೂಲಗಳು ತಿಳಿಸಿವೆ.“ವಾರಾಣಸಿಗೆ ಹೊರಟಿದ್ದ ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿ ಮೂತ್ರ ವಿಸರ್ಜನೆಗಾಗಿ ಶೌಚಾಲಯ (ಲ್ಯಾವೆಟರಿ) ಹುಡುಕುತ್ತ ಕಾಕ್‌ಪಿಟ್‌ ಬಳಿ ತೆರಳಿದ ವರದಿ ಲಭ್ಯವಾಗಿದೆ. ಇದು ಭದ್ರತಾ ಲೋಪವಲ್ಲ. ವಿಮಾನ ವಾರಾಣಸಿಯಲ್ಲಿ ಇಳಿದ ನಂತರ ಭದ್ರತಾ ಸಂಸ್ಥೆಗೆ ಘಟನೆಯ ಮಾಹಿತಿ ನೀಡಲಾಗಿದೆ. ತನಿಖೆ ನಡೆಯುತ್ತಿದೆ’ ಎಂದು ಏ‌ರ್ ಇಂಡಿಯಾ ಪ್ರಕಟಣೆ ನೀಡಿದೆ.

News Updates

BREAKING NEWS ಸುಳ್ಯ :ಪಂಜ ಕಾಂಗ್ರೆಸ್ ಪಕ್ಷದ ಹುದ್ದೆಗೆ ರಾಜಿನಾಮೆ ನೀಡಿದ ದಿನೇಶ್ ಪುಂಡಿಮನೆ, ಕುಸುಮಾಧರ ಕೆರೆಯಡ್ಕ,ಲೋಕನಾಥ್ ಕುದ್ವ |ನಮ್ಮ ಮಾತನ್ನು ಪಕ್ಷದ ನಾಯಕರು ಉಳಿಸಿಕೊಂಡಿಲ್ಲ, ದೇವಸ್ಥಾನ ವ್ಯವಸ್ಥೆ ಸರಿದಾರಿಗೆ ತರುವ ಕೆಲಸವಾಗಲಿ: ದಿನೇಶ್ ಪುಂಡಿಮನೆ

News Updates

ಬೆಳ್ತಂಗಡಿ : ಮೊಗ್ರು ಜೈ ಶ್ರೀರಾಮ ಸೇವಾ ಟ್ರಸ್ಟ್ ಅಲೆಕ್ಕಿ -ಮುಗೇರಡ್ಕ ಮೊಗ್ರು, ಶ್ರೀ ರಾಮ ಶಿಶುಮಂದಿರದ 5 ನೇ ವರ್ಷದ ಶ್ರೀ ಕೃಷ್ಣೋತ್ಸವ. |ಕಾಶಿ ಶೆಟ್ಟಿ ನವಶಕ್ತಿ ಗುರುವಾಯನಕೆರೆ ಇವರ ಸ್ಮರಣಾರ್ಥ ಕಾಶಿ ಶೆಟ್ಟಿ ವಿದ್ಯಾ ಮಂದಿರ, ಹಾಗೂ ಶಾಸಕ ಹರೀಶ್ ಪೂಂಜಾರವರ ನೆರವಿನ ಅಡುಗೆ ಕೋಣೆ ಉದ್ಘಾಟನಾ ಕಾರ್ಯಕ್ರಮ |ಮಕ್ಕಳ ಶ್ರೀಕೃಷ್ಣ ಮತ್ತು ರಾಧೆಯರ ಸ್ಪರ್ಧೆ, ಮೊಸರು ಕುಡಿಕೆ, ಆಟೋಟ ಸ್ಪರ್ಧೆ

[t4b-ticker]
error: Content is protected !!