ಶಿವಮೊಗ್ಗ ದಸರಾಗೆ ಅದ್ದೂರಿ ಚಾಲನೆ

Picture of Savistara

Savistara

Bureau Report

ರಾಜ್ಯದಲ್ಲೇ ಅತ್ಯಂತ ವಿಜೃಂಭಣೆಯಿಂದ ನಡೆಯುವ 2 ನೇ ದಸರಾ ಎಂಬ ಖ್ಯಾತಿಗೆ ಹೆಸರುವಾಸಿಯಾಗಿರುವ ಶಿವಮೊಗ್ಗ ದಸರಾಗೆ ಇಂದು ಕೋಟೆ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಭಾರತೀಯ ಸೇನೆಯ ನಿವೃತ್ತ ಅಧಿಕಾರಿ ಲೆಫ್ಟಿನೆಂಟ್ ಕರ್ನಲ್ ಬಿ ಎಸ್ ರಾಜು ಅವರೊಂದಿಗೆ ಅಧಿಕೃತವಾಗಿ ಚಾಲನೆ ನೀಡಲಾಯಿತು.

ಈ ವೇಳೆ ಕೋಟೆ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ವಿರಾಜಮಾನಳಾಗಿರುವ ತಾಯಿ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆದು, ನಾಡಿನ ಒಳಿತಿಗಾಗಿ ಪ್ರಾರ್ಥಿಸಲಾಯಿತು.

ಕಾರ್ಯಕ್ರಮದಲ್ಲಿ ಶಿವಮೊಗ್ಗ ನಗರದ ಜನಪ್ರಿಯ ಶಾಸಕರಾದ ಎಸ್.ಎನ್ ಚನ್ನಬಸಪ್ಪ ಅವರು, ವಿಧಾನ ಪರಿಷತ್ ಶಾಸಕರಾದ ಡಿ.ಎಸ್ ಅರುಣ್ ಅವರು, ಶಿವಮೊಗ್ಗ ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಜಗದೀಶ್ ಅವರು,

ಶಿವಮೊಗ್ಗ ಮಹಾನಗರ ಪಾಲಿಕೆಯ ಆಯುಕ್ತರಾದ ಮಾಯಣ್ಣ ಗೌಡ ಅವರು, ಶಿವಮೊಗ್ಗ ನಗರ ಬಿಜೆಪಿ ಅಧ್ಯಕ್ಷರಾದ ಮೋಹನ್ ರೆಡ್ಡಿ ಅವರು, ಮಹಾನಗರ ಪಾಲಿಕೆಯ ಮಾಜಿ ಸದಸ್ಯರಾದ ಹೆಚ್.ಸಿ ಯೋಗೀಶ್ ಅವರು, ಪ್ರಮುಖರಾದ ಜ್ಞಾನೇಶ್ವರ್ ಅವರು ಸೇರಿದಂತೆ ಮತ್ತಿತರರ ಗಣ್ಯರು ಉಪಸ್ಥಿತರಿದ್ದರು.

[t4b-ticker]
error: Content is protected !!