ಉಕ್ರೇನ್-ರಷ್ಯಾ ಯುದ್ಧಕ್ಕೆ ಚೀನಾ, ಭಾರತ ಹಣಕಾಸು ನೆರವು ನೀಡುತ್ತಿವೆ: ಟ್ರಂಪ್‌

Picture of Savistara

Savistara

Bureau Report

ವಿಶ್ವಸಂಸ್ಥೆ: ಉಕ್ರೇನ್ ರಷ್ಯಾ ಯುದ್ಧಕ್ಕೆ ಚೀನಾ ಹಾಗೂ ಭಾರತ ಪ್ರಾಥಮಿಕ ಹಣಕಾಸು ನೆರವನ್ನು ಒದಗಿಸುತ್ತಿವೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ ಹೇಳಿದ್ದಾರೆ.

ರಷ್ಯಾದಿಂದ ತೈಲ ಖರೀದಿ ಮಾಡುತ್ತಿರುವುದನ್ನು ಉಲ್ಲೇಖಿಸಿ ಅವರು ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಮಂಗಳವಾರ ಮಾಡಿದ ಭಾಷಣದಲ್ಲಿ ಹೇಳಿದ್ದಾರೆ.

‘ರಷ್ಯಾದಿಂದ ತೈಲ ಖರೀದಿ ಮಾಡುವ ಮೂಲಕ ಭಾರತ ಹಾಗೂ ಚೀನಾ ಉಕ್ರೇನ್‌ನಲ್ಲಿ ನಡೆಯುತ್ತಿರುವ ಯುದ್ಧಕ್ಕೆ ಪ್ರಾಥಮಿಕವಾಗಿ ಹಣಕಾಸು ಸಹಾಯ ಮಾಡುತ್ತಿವೆ’ ಎಂದು ಅವರು ಹೇಳಿದ್ದಾರೆ.ನ್ಯಾಟೊ ರಾಷ್ಟ್ರಗಳು ಕೂಡ ರಷ್ಯಾದ ಇಂಧನ ಹಾಗೂ ಇಂಧನ ಉತ್ಪನ್ನಗಳ ಖರೀದಿಯನ್ನು ನಿಲ್ಲಿಸದೇ ಇರುವುದು ಕೂಡ ಅಕ್ಷಮ್ಯ ಎಂದು ಟ್ರಂಪ್‌ ಇದೇ ವೇಳೆ ಹೇಳಿದ್ದಾರೆ.

`ಅದರ ಬಗ್ಗೆ ಯೋಚನೆ ಮಾಡಿ. ಅವರು ತಮ್ಮ ವಿರುದ್ಧದ ಯುದ್ಧಕ್ಕೆ ಹಣಕಾಸಿನ ನೆರವು ನೀಡುತ್ತಿದ್ದಾರೆ. ಯುದ್ಧವನ್ನು ಕೊನೆಗೊಳಿಸಲು ರಷ್ಯಾ ಮುಂದೆ ಬರುತ್ತಿಲ್ಲ. ಅಮೆರಿಕವು ಭಾರಿ ಪ್ರಮಾಣದ ತೆರಿಗೆ ಹೇರುವ ಮೂಲಕ ರಕ್ತಪಾತವನ್ನು ಕೊನೆಗೊಳಿಸಲು ಸಜ್ಜಾಗಿದೆ. ಶೀಘ್ರವೇ ಅದು ಬರಲಿದೆ’ ಎಂದು ಹೇಳಿದ್ದಾರೆ.

News Updates

BREAKING NEWS ಸುಳ್ಯ :ಪಂಜ ಕಾಂಗ್ರೆಸ್ ಪಕ್ಷದ ಹುದ್ದೆಗೆ ರಾಜಿನಾಮೆ ನೀಡಿದ ದಿನೇಶ್ ಪುಂಡಿಮನೆ, ಕುಸುಮಾಧರ ಕೆರೆಯಡ್ಕ,ಲೋಕನಾಥ್ ಕುದ್ವ |ನಮ್ಮ ಮಾತನ್ನು ಪಕ್ಷದ ನಾಯಕರು ಉಳಿಸಿಕೊಂಡಿಲ್ಲ, ದೇವಸ್ಥಾನ ವ್ಯವಸ್ಥೆ ಸರಿದಾರಿಗೆ ತರುವ ಕೆಲಸವಾಗಲಿ: ದಿನೇಶ್ ಪುಂಡಿಮನೆ

News Updates

ಬೆಳ್ತಂಗಡಿ : ಮೊಗ್ರು ಜೈ ಶ್ರೀರಾಮ ಸೇವಾ ಟ್ರಸ್ಟ್ ಅಲೆಕ್ಕಿ -ಮುಗೇರಡ್ಕ ಮೊಗ್ರು, ಶ್ರೀ ರಾಮ ಶಿಶುಮಂದಿರದ 5 ನೇ ವರ್ಷದ ಶ್ರೀ ಕೃಷ್ಣೋತ್ಸವ. |ಕಾಶಿ ಶೆಟ್ಟಿ ನವಶಕ್ತಿ ಗುರುವಾಯನಕೆರೆ ಇವರ ಸ್ಮರಣಾರ್ಥ ಕಾಶಿ ಶೆಟ್ಟಿ ವಿದ್ಯಾ ಮಂದಿರ, ಹಾಗೂ ಶಾಸಕ ಹರೀಶ್ ಪೂಂಜಾರವರ ನೆರವಿನ ಅಡುಗೆ ಕೋಣೆ ಉದ್ಘಾಟನಾ ಕಾರ್ಯಕ್ರಮ |ಮಕ್ಕಳ ಶ್ರೀಕೃಷ್ಣ ಮತ್ತು ರಾಧೆಯರ ಸ್ಪರ್ಧೆ, ಮೊಸರು ಕುಡಿಕೆ, ಆಟೋಟ ಸ್ಪರ್ಧೆ

[t4b-ticker]
error: Content is protected !!