ಕಾದಂಬರಿಕಾರ ಎಸ್.ಎಲ್ ಭೈರಪ್ಪ ನಿಧನ

Picture of Savistara

Savistara

Bureau Report

ಬೆಂಗಳೂರು: ಖ್ಯಾತ ಕಾದಂಬರಿಕಾರ ಎಸ್.ಎಲ್ ಭೈರಪ್ಪ ಬುಧವಾರ ನಿಧನರಾದರು.

ಅವರಿಗೆ 94 ವರ್ಷ ವಯಸ್ಸಾಗಿತ್ತು.ಮೈಸೂರಿನಲ್ಲಿ ಕುಟುಂಬದೊಂದಿಗೆ ವಾಸವಾಗಿದ್ದು, ನಿವೃತ್ತಿ ಜೀವನನ್ನು ನಡೆಸುತ್ತಿದ್ದರು. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅವರು, ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದರು.ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿ ಇರುವ ರಾಷ್ಟೋತ್ತಾನ ಆಸ್ಪತ್ರೆಯಲ್ಲಿ ನಿಧರಾಗಿದ್ದಾರೆ. ಹೃದಯಾಘಾತದಿಂದಾಗಿ ಮಧ್ಯಾಹ್ನ 2.38ಕ್ಕೆ ನಿಧನರಾದರು ಎಂದು ಆಸ್ಪತ್ರೆಯು ಪತ್ರಿಕಾ ಪ್ರಕಟಣೆಯಲ್ಲಿ ಹೇಳಿದೆ.

ವಂಶವೃಕ್ಷ, ದಾಟು, ತಂತು, ಪರ್ವ, ಗೃಹಭಂಗ, ಸಾರ್ಥ, ಮಂದ್ರ ಸೇರಿದಂತೆ ಹಲವಾರ ಕಾದಂಬರಿಗಳನ್ನು ರಚಿಸಿದ್ದಾರೆ. ಅವರ ಕೃತಿಗಳು ಕನ್ನಡದಲ್ಲಿ ಹೆಚ್ಚು ಮಾರಾಟವಾಗುತ್ತಿದ್ದವು. ಹಿಂದಿ, ಮರಾಠಿ, ಮತ್ತು ಇಂಗ್ಲಿಷ್ ಸೇರಿದಂತೆ ಹಲವು ಭಾರತೀಯ ಭಾಷೆಗಳಿಗೆ ಭೈರಪ್ಪ ಅವರ ಕಾದಂಬರಿಗಳು ಅನುವಾದಗೊಂಡಿವೆ.ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ಸರಸ್ವತಿ ಸಮ್ಮಾನ್‌, ಪದ್ಮಭೂಷಣ, ಪದ್ಮಶ್ರೀ ಹಾಗೂ ನಾಡೋಜ ಸೇರಿದಂತೆ ಹಲವಾರು ಪ್ರಶಸ್ತಿಗಳಿಗೆ ಭಾಜನರಾಗಿದ್ದರು.

News Updates

BREAKING NEWS ಸುಳ್ಯ :ಪಂಜ ಕಾಂಗ್ರೆಸ್ ಪಕ್ಷದ ಹುದ್ದೆಗೆ ರಾಜಿನಾಮೆ ನೀಡಿದ ದಿನೇಶ್ ಪುಂಡಿಮನೆ, ಕುಸುಮಾಧರ ಕೆರೆಯಡ್ಕ,ಲೋಕನಾಥ್ ಕುದ್ವ |ನಮ್ಮ ಮಾತನ್ನು ಪಕ್ಷದ ನಾಯಕರು ಉಳಿಸಿಕೊಂಡಿಲ್ಲ, ದೇವಸ್ಥಾನ ವ್ಯವಸ್ಥೆ ಸರಿದಾರಿಗೆ ತರುವ ಕೆಲಸವಾಗಲಿ: ದಿನೇಶ್ ಪುಂಡಿಮನೆ

News Updates

ಬೆಳ್ತಂಗಡಿ : ಮೊಗ್ರು ಜೈ ಶ್ರೀರಾಮ ಸೇವಾ ಟ್ರಸ್ಟ್ ಅಲೆಕ್ಕಿ -ಮುಗೇರಡ್ಕ ಮೊಗ್ರು, ಶ್ರೀ ರಾಮ ಶಿಶುಮಂದಿರದ 5 ನೇ ವರ್ಷದ ಶ್ರೀ ಕೃಷ್ಣೋತ್ಸವ. |ಕಾಶಿ ಶೆಟ್ಟಿ ನವಶಕ್ತಿ ಗುರುವಾಯನಕೆರೆ ಇವರ ಸ್ಮರಣಾರ್ಥ ಕಾಶಿ ಶೆಟ್ಟಿ ವಿದ್ಯಾ ಮಂದಿರ, ಹಾಗೂ ಶಾಸಕ ಹರೀಶ್ ಪೂಂಜಾರವರ ನೆರವಿನ ಅಡುಗೆ ಕೋಣೆ ಉದ್ಘಾಟನಾ ಕಾರ್ಯಕ್ರಮ |ಮಕ್ಕಳ ಶ್ರೀಕೃಷ್ಣ ಮತ್ತು ರಾಧೆಯರ ಸ್ಪರ್ಧೆ, ಮೊಸರು ಕುಡಿಕೆ, ಆಟೋಟ ಸ್ಪರ್ಧೆ

[t4b-ticker]
error: Content is protected !!