ಟ್ರಸ್ಟಿಗೂ, ಪೀಠಕ್ಕೂ ಸಂಬಂಧವಿಲ್ಲ: ಬಸವ ಜಯಮೃತ್ಯುಂಜಯ ಸ್ವಾಮೀಜಿ

Picture of Savistara

Savistara

Bureau Report

ವಿಜಯಪುರ: ಟ್ರಸ್ಟಿಗೂ ಹಾಗೂ ಕೂಡಲಸಂಗಮ ಪಂಚಮಸಾಲಿಪೀಠಕ್ಕೂ ಸಂಬಂಧವೇ ಇಲ್ಲ, ಪೀಠ ಸ್ಥಾಪನೆ ಮಾಡಿದ್ದು ಭಕ್ತರು, ಹೀಗಾಗಿ ಉಚ್ಚಾಟನೆ ಮಾಡುವ ಅಧಿಕಾರ ಟ್ರಸ್ಟಿಗೆ ಇಲ್ಲ, ಈ ರೀತಿ ನೂರಾರು ಟ್ರಸ್ಟ್‌ಗಳಿವೆ ಎಂದು ಬಸವ ಜಯಮೃತ್ಯುಂಜಯ ಸ್ವಾಮೀಜಿ ಹೇಳಿದರು.

‘ಕೂಡಲಸಂಗಮ ಪಂಚಮಸಾಲಿ ಪೀಠ ರಚನೆ ಮಾಡಿದ್ದು ಸಮಸ್ತ ಭಕ್ತರು, ಲಿಂಗಾಯತ ಮಠಾಧೀಶರ ಒಕ್ಕೂಟ, ಸಹೃದಯಿ ಸಂತರ ಒಕ್ಕೂಟ ಸೇರಿದಂತೆ ಸಕಲ ಪೂಜ್ಯರ ಸಮಕ್ಷಮದಲ್ಲಿ ಪೀಠ ರಚನೆ ಮಾಡಲಾಗಿದೆ. ಪೀಠ ಸ್ವತಂತ್ರವಾಗಿದೆ. ಈ ಮೊದಲು ಟ್ರಸ್ಟ್ ಪದಾಧಿಕಾರಿಗಳು ಮಠಕ್ಕೆ ಜಾಗ ನೀಡುವುದಾಗಿ ವಾಗ್ದಾನ ಮಾಡಿದ್ದರು. ನಂತರ ನನ್ನನ್ನು ಟ್ರಸ್ಟ್ ಅಧ್ಯಕ್ಷರನ್ನಾಗಿ ಮಾಡುವುದಾಗಿ ಹೇಳಿದ್ದರೂ ಇದುವರೆಗೂ ಮಾಡಲಿಲ್ಲ. ಇದು ವೈಯುಕ್ತಿಕವಾಗಿ ರಚನೆಯಾಗಿರುವ ಟ್ರಸ್ಟ್, ಪೀಠಕ್ಕೆ ಭೂಮಿ ಕೊಡುವುದಾಗಿ ಹೇಳಿ ಸ್ವಂತಕ್ಕೆ ಜಮೀನು ಮಾಡಿಕೊಂಡರು, ಹೀಗಾಗಿ ಸಮಾಜ ಶಾಶ್ವತ ಎಂದು ಸಮಾಜ ಕಟ್ಟುವ ಕಾರ್ಯದಲ್ಲಿ ತೊಡಗಿಸಿಕೊಂಡಿರುವೆ ಎಂದು ಸುದ್ದಿಗಾರರಿಗೆ ತಿಳಿಸಿದರು.ಕೂಡಲಸಂಗಮವನ್ನು ಮೂಲಪೀಠವಾಗಿಸಿಕೊಂಡು ಭಕ್ತರ ಸಭೆ ನಡೆಸಿ ಶಾಖಾ ಮಠಗಳನ್ನು ಮಾಡಲಾಗುವುದು, ಒಂದು ಗುಡಿಸಲಿನಲ್ಲಿಯೂ ಸಮಾಜ ಸಂಘಟನೆ ಕಾರ್ಯ ನೆರವೇರಿಸಲು ಬದ್ಧ, ಭಕ್ತರ ನಿರ್ಧಾರವೇ ಅಂತಿಮ ಎಂದರು.

ಹಿಂದೂ ಬರೆಯಿಸಿ: ಲಿಂಗಾಯತ ಧರ್ಮಕ್ಕೆ ಇನ್ನೂ ಕೋಡ್ದೊರಕಿಲ್ಲ, ಇನ್ನೊಂದೆಡೆ ಪಂಚಮಸಾಲಿ ಸಮಾಜದ ಮೀಸಲಾತಿಗೆ ಹಿನ್ನೆಡೆಯಾಗಬಾರದು ಎಂದು ಧರ್ಮ ಕಾಲಂನಲ್ಲಿ ಹಿಂದೂ ಎಂದು, ಜಾತಿ ಕಾಲಂನಲ್ಲಿ ಲಿಂಗಾಯತ ಪಂಚಮಸಾಲಿ ಎಂದು ಬರೆಯಿಸುವ ನಿರ್ಣಯ ಸ್ವೀಕರಿಸಲಾಗಿದೆ ಎಂದು ಶ್ರೀಗಳು ಹೇಳಿದರು.

News Updates

BREAKING NEWS ಸುಳ್ಯ :ಪಂಜ ಕಾಂಗ್ರೆಸ್ ಪಕ್ಷದ ಹುದ್ದೆಗೆ ರಾಜಿನಾಮೆ ನೀಡಿದ ದಿನೇಶ್ ಪುಂಡಿಮನೆ, ಕುಸುಮಾಧರ ಕೆರೆಯಡ್ಕ,ಲೋಕನಾಥ್ ಕುದ್ವ |ನಮ್ಮ ಮಾತನ್ನು ಪಕ್ಷದ ನಾಯಕರು ಉಳಿಸಿಕೊಂಡಿಲ್ಲ, ದೇವಸ್ಥಾನ ವ್ಯವಸ್ಥೆ ಸರಿದಾರಿಗೆ ತರುವ ಕೆಲಸವಾಗಲಿ: ದಿನೇಶ್ ಪುಂಡಿಮನೆ

News Updates

ಬೆಳ್ತಂಗಡಿ : ಮೊಗ್ರು ಜೈ ಶ್ರೀರಾಮ ಸೇವಾ ಟ್ರಸ್ಟ್ ಅಲೆಕ್ಕಿ -ಮುಗೇರಡ್ಕ ಮೊಗ್ರು, ಶ್ರೀ ರಾಮ ಶಿಶುಮಂದಿರದ 5 ನೇ ವರ್ಷದ ಶ್ರೀ ಕೃಷ್ಣೋತ್ಸವ. |ಕಾಶಿ ಶೆಟ್ಟಿ ನವಶಕ್ತಿ ಗುರುವಾಯನಕೆರೆ ಇವರ ಸ್ಮರಣಾರ್ಥ ಕಾಶಿ ಶೆಟ್ಟಿ ವಿದ್ಯಾ ಮಂದಿರ, ಹಾಗೂ ಶಾಸಕ ಹರೀಶ್ ಪೂಂಜಾರವರ ನೆರವಿನ ಅಡುಗೆ ಕೋಣೆ ಉದ್ಘಾಟನಾ ಕಾರ್ಯಕ್ರಮ |ಮಕ್ಕಳ ಶ್ರೀಕೃಷ್ಣ ಮತ್ತು ರಾಧೆಯರ ಸ್ಪರ್ಧೆ, ಮೊಸರು ಕುಡಿಕೆ, ಆಟೋಟ ಸ್ಪರ್ಧೆ

[t4b-ticker]
error: Content is protected !!