ಗರ್ಗ್ ಸಾವು: ‘ಈಶಾನ್ಯ ಹಬ್ಬ’ ಆಯೋಜಕರಿಗೆ ನಿಷೇಧ ಹೇರಿ ಅಸ್ಸಾಂ ಸರ್ಕಾರ ಆದೇಶ

Picture of Savistara

Savistara

Bureau Report

ಗುವಾಹಟಿ: ‘ಈಶಾನ್ಯ ಹಬ್ಬ’ ಕಾರ್ಯಕ್ರಮ ಆಯೋಜಿಸುವ ಮುಖ್ಯ ಆಯೋಜಕ ಶ್ಯಾಮ್‌ಕಾನು ಮಹಂತ, ಮತ್ತವರ ಕಂಪನಿಯು ರಾಜ್ಯದಲ್ಲಿ ಯಾವುದೇ ಕಾರ್ಯಕ್ರಮ ಆಯೋಜಿಸುವುದಿಕ್ಕೆ ನಿಷೇಧ ಹೇರಿ ಅಸ್ಸಾಂ ಸರ್ಕಾರ ಬುಧವಾರ ಆದೇಶ ಹೊರಡಿಸಿದೆ.

ನಾಲ್ಕನೇ ಆವೃತ್ತಿಯ ‘ಈಶಾನ್ಯ ಹಬ್ಬ’ದಲ್ಲಿ ಭಾಗಿಯಾಗಲು ಖ್ಯಾತ ಗಾಯಕ ಜುಬೀನ್ ಗರ್ಗ್ ಅವರು ಸಿಂಗಪುರಕ್ಕೆ ತೆರಳಿದ್ದರು. ಈ ವೇಳೆಯೇ ಅವರು ಮೃತಪಟ್ಟಿದ್ದರು.

ಈ ಬಗ್ಗೆ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮ ಅವರು ತಮ್ಮ ‘ಎಕ್ಸ್’ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.ಕಾರ್ಯಕ್ರಮಗಳನ್ನು ಆಯೋಜಿಸಲು ಮಹಂತ ಅವರ ಕಂಪನಿಗೆ ಅಸ್ಸಾಂ ಸರ್ಕಾರ ಹಲವು ಅನುದಾನಗಳನ್ನು ನೀಡುತ್ತಿತ್ತು. ಇದನ್ನು ಕಡಿತ ಮಾಡುವುದಾಗಿ ಮುಖ್ಯಮಂತ್ರಿ ಹೇಳಿದ್ದಾರೆ.

‘ಕೇಂದ್ರ ಸರ್ಕಾರದ ಹಲವು ಸಚಿವಾಲಯಗಳೂ ಈ ಕಂಪನಿ ಆಯೋಜಿಸುವ ಈಶಾನ್ಯ ಹಬ್ಬಕ್ಕೆ ಅನುದಾನ ನೀಡುತ್ತಿವೆ. ಆದ್ದರಿಂದ ಕೇಂದ್ರ ಸರ್ಕಾರವೂ ಅನುದಾನ ನೀಡುವುದನ್ನು ನಿಲ್ಲಿಸಬೇಕು ಎಂದು ಮನವಿ ಮಾಡುತ್ತೇನೆ’ ಎಂದೂ ಹೇಳಿದ್ದಾರೆ.

News Updates

BREAKING NEWS ಸುಳ್ಯ :ಪಂಜ ಕಾಂಗ್ರೆಸ್ ಪಕ್ಷದ ಹುದ್ದೆಗೆ ರಾಜಿನಾಮೆ ನೀಡಿದ ದಿನೇಶ್ ಪುಂಡಿಮನೆ, ಕುಸುಮಾಧರ ಕೆರೆಯಡ್ಕ,ಲೋಕನಾಥ್ ಕುದ್ವ |ನಮ್ಮ ಮಾತನ್ನು ಪಕ್ಷದ ನಾಯಕರು ಉಳಿಸಿಕೊಂಡಿಲ್ಲ, ದೇವಸ್ಥಾನ ವ್ಯವಸ್ಥೆ ಸರಿದಾರಿಗೆ ತರುವ ಕೆಲಸವಾಗಲಿ: ದಿನೇಶ್ ಪುಂಡಿಮನೆ

News Updates

ಬೆಳ್ತಂಗಡಿ : ಮೊಗ್ರು ಜೈ ಶ್ರೀರಾಮ ಸೇವಾ ಟ್ರಸ್ಟ್ ಅಲೆಕ್ಕಿ -ಮುಗೇರಡ್ಕ ಮೊಗ್ರು, ಶ್ರೀ ರಾಮ ಶಿಶುಮಂದಿರದ 5 ನೇ ವರ್ಷದ ಶ್ರೀ ಕೃಷ್ಣೋತ್ಸವ. |ಕಾಶಿ ಶೆಟ್ಟಿ ನವಶಕ್ತಿ ಗುರುವಾಯನಕೆರೆ ಇವರ ಸ್ಮರಣಾರ್ಥ ಕಾಶಿ ಶೆಟ್ಟಿ ವಿದ್ಯಾ ಮಂದಿರ, ಹಾಗೂ ಶಾಸಕ ಹರೀಶ್ ಪೂಂಜಾರವರ ನೆರವಿನ ಅಡುಗೆ ಕೋಣೆ ಉದ್ಘಾಟನಾ ಕಾರ್ಯಕ್ರಮ |ಮಕ್ಕಳ ಶ್ರೀಕೃಷ್ಣ ಮತ್ತು ರಾಧೆಯರ ಸ್ಪರ್ಧೆ, ಮೊಸರು ಕುಡಿಕೆ, ಆಟೋಟ ಸ್ಪರ್ಧೆ

[t4b-ticker]
error: Content is protected !!