ಜಿಎಸ್‌ಟಿ ದರ ಇಳಿಕೆ ಪರಿಣಾಮ ಅರಿವು: ಕ್ಯಾ.ಬ್ರಿಜೇಶ್ ಚೌಟ ಜನರೊಂದಿಗೆ ಸಂವಾದ, ಜಾಗೃತಿ ಕಾರ್ಯ

Picture of Savistara

Savistara

Bureau Report

‘ಮಂಗಳೂರು: ಪ್ರಧಾನಿ ನರೇಂದ್ರಮೋದಿ ನೇತೃತ್ವದ ಕೇಂದ್ರ ಸರಕಾರ ಜಿಎಸ್‌ಟಿ ದರ ಇಳಿಕೆ ಮಾಡಿರುವುದು ದೇಶದ ಆರ್ಥಿಕತೆಯನ್ನು ರೂಪಿಸುವ ಮಹತ್ತರ ಹೆಜ್ಜೆಯಾಗಿದೆ. ಜಿಎಸ್‌ಟಿ ಇಳಿಕೆ ಹಿನ್ನೆಲೆಯಲ್ಲಿ ಅ.20ರವರೆಗೆ ರಾಜ್ಯದ ఎల్ల ವಿಧಾನಸಭಾ ಕ್ಷೇತ್ರಗಳಲ್ಲಿ ಅಭಿಯಾನ ನಡೆಸಲಾಗುವುದು. ಜಿಎಸ್‌ಟಿ ಇಳಿಕೆಯ ಲಾಭ ಜನರಿಗೆ ದೊರೆಯಬೇಕು ಎಂಬ ಉದ್ದೇಶದೊಂದಿಗೆ ನಾಗರಿಕರ ಜತೆ ಸಂವಾದ ನಡೆಸಲಾಗುವುದು ಎಂದು ಸಂಸದ ಕ್ಯಾ. ಬ್ರಿಜೇಶ್ ಚೌಟ ತಿಳಿಸಿದರು.2047ಕ್ಕೆ ಏಕಸಿತ ಭಾರತ ನಿರ್ಮಾಣ ಪ್ರಧಾನಿ ಅವರ ಗುರಿಯಾಗಿದೆ. ಅದಕ್ಕಾಗಿ ಆತ್ಮನಿರ್ಭರತೆಯ ದಾರಿಯಲ್ಲಿ ಸಾಗಲಾಗುತ್ತಿದೆ. ಅದರ ಭಾಗವಾಗಿ ಜಿಎಸ್‌ಟಿ 2.0 ಜಾರಿಗೆ ತರಲಾಗಿದೆ. ಈ ಬಗ್ಗೆ ಬಿಜೆಪಿ ಆರ್ಥಿಕ ಪ್ರಕೋಷ್ಠದ ಜತೆಗೂಡಿ ಅಂಗಡಿ, ಮಾರುಕಟ್ಟೆ ಗಳಿಗೆ ತೆರಳಿ ಜನರ ಜತೆ ಸಂವಾದ, ಜಾಗೃತಿ ನಡೆಸಲಾಗುವುದು ಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ಅವರು ಹೇಳಿದರು.ಜಿಎಸ್‌ಟಿ ಸುಧಾರಣೆ ನವರಾತ್ರಿ

ಹಾಗೂ ಮುಂಬರುವ ಹಬ್ಬಗಳನ್ನು ವಿಶೇಷ ರೀತಿಯಲ್ಲಿ ಆಚರಣೆ ಮಾಡಲು ಪ್ರೇರಣೆ ನೀಡಿದೆ. ವ್ಯಾಪಾರಿಗಳು, ಉದ್ದಿಮೆದಾರರು, ಗ್ರಾಹಕರಿಗೆ ಅನುಕೂಲವಾಗಲಿದೆ. ಈ ಹಿನ್ನೆಲೆಯಲ್ಲಿ ಉಳಿತಾಯ ಉತ್ಸವ ಆಯೋಜಿಸಲಾಗುತ್ತಿದೆ. ಜಿ ಎಸ್ ಟಿ

ಇಳಿಕೆಯ ಪರಿಣಾಮವನ್ನು ಈಗಾಗಲೇ ಮಾರುಕಟ್ಟೆಯಲ್ಲಿ ನಾವು ಕಾಣುತ್ತಿದ್ದೇವೆ. ಬೇಡಿಕೆ ಹೆಚ್ಚುವ ಜತೆಗೆ ಉತ್ಪಾದನೆಯೂ ಅಧಿಕವಾಗಲಿದೆ. ಜನರ ಹಣ ಉಳಿತಾಯ, ಉದ್ಯೋಗ ಸೃಷ್ಟಿಯೂ ಆಗಲಿದೆ. ಆಹಾರ, ಬಟ್ಟೆ, ವಸತಿ ಕಡಿಮೆ ಬೆಲೆಯಲ್ಲಿ ದೊರೆಯಲಿದೆ. ವಾಹನಗಳ ಈಗಾಗಲೇ ಇಳಿಕೆಯಾಗಿದೆ. ಕೃಷಿ ಯಂತ್ರೋಪಕರಣಗಳ ಇಳಿಕೆಯಿಂದ ರೈತರಿಗೆ ಅನುಕೂಲವಾಗಲಿದೆ. ಈ ಮೂಲಕ ದೇಶದ ಆರ್ಥಿಕ ಬೆಳವಣಿಗೆಗೆ ಉತ್ತೇಜನ ದೊರೆಯಲಿದೆ ಎಂದರು. ಹನಿ ಬೆಲೆಬಿಜೆಪಿ ಆರ್ಥಿಕ ಪ್ರಕೋಷ್ಠ ಜಿಲ್ಲಾ ಸಂಚಾಲಕ ಸಿಎ ಶಾಂತಾರಾಮ ಶೆಟ್ಟಿ ಮಾತನಾಡಿ, ಜಿಎಸ್‌ಟಿ ಇಳಿಕೆಯ ಲಾಭವನ್ನು ಈಗಾಗಲೇ ಆರ್ಥಿಕ ವಲಯದಲ್ಲಿ ಕಾಣುತ್ತಿದ್ದೇವೆ. ಅನೇಕ ವಸ್ತುಗಳ ಬೆಲೆ ಇಳಿಕೆಯಾಗಿದೆ. ಇದರ ನೇರ ಲಾಭ ಜನತೆಗೆ ಆಗಲಿದೆ ಎಂದರು. ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರೇಮಾನಂದ ಶೆಟ್ಟಿ, ಕಾರ್ಯದರ್ಶಿ ಪೂರ್ಣಿಮಾ, ಪ್ರಕೋಷ್ಠಗಳ ಜಿಲ್ಲಾ ಸಹ ಸಂಚಾಲಕ ಪ್ರಸನ್ನ ದರ್ಬೆ, ಕೋಶಾಧಿಕಾರಿ ಸಂಜಯ ಪ್ರಭು, ಮಾಧ್ಯಮ ಸಂಚಾಲಕ ವಸಂತ ಪೂಜಾರಿ ಉಪಸ್ಥಿತರಿದ್ದರು.

News Updates

BREAKING NEWS ಸುಳ್ಯ :ಪಂಜ ಕಾಂಗ್ರೆಸ್ ಪಕ್ಷದ ಹುದ್ದೆಗೆ ರಾಜಿನಾಮೆ ನೀಡಿದ ದಿನೇಶ್ ಪುಂಡಿಮನೆ, ಕುಸುಮಾಧರ ಕೆರೆಯಡ್ಕ,ಲೋಕನಾಥ್ ಕುದ್ವ |ನಮ್ಮ ಮಾತನ್ನು ಪಕ್ಷದ ನಾಯಕರು ಉಳಿಸಿಕೊಂಡಿಲ್ಲ, ದೇವಸ್ಥಾನ ವ್ಯವಸ್ಥೆ ಸರಿದಾರಿಗೆ ತರುವ ಕೆಲಸವಾಗಲಿ: ದಿನೇಶ್ ಪುಂಡಿಮನೆ

News Updates

ಬೆಳ್ತಂಗಡಿ : ಮೊಗ್ರು ಜೈ ಶ್ರೀರಾಮ ಸೇವಾ ಟ್ರಸ್ಟ್ ಅಲೆಕ್ಕಿ -ಮುಗೇರಡ್ಕ ಮೊಗ್ರು, ಶ್ರೀ ರಾಮ ಶಿಶುಮಂದಿರದ 5 ನೇ ವರ್ಷದ ಶ್ರೀ ಕೃಷ್ಣೋತ್ಸವ. |ಕಾಶಿ ಶೆಟ್ಟಿ ನವಶಕ್ತಿ ಗುರುವಾಯನಕೆರೆ ಇವರ ಸ್ಮರಣಾರ್ಥ ಕಾಶಿ ಶೆಟ್ಟಿ ವಿದ್ಯಾ ಮಂದಿರ, ಹಾಗೂ ಶಾಸಕ ಹರೀಶ್ ಪೂಂಜಾರವರ ನೆರವಿನ ಅಡುಗೆ ಕೋಣೆ ಉದ್ಘಾಟನಾ ಕಾರ್ಯಕ್ರಮ |ಮಕ್ಕಳ ಶ್ರೀಕೃಷ್ಣ ಮತ್ತು ರಾಧೆಯರ ಸ್ಪರ್ಧೆ, ಮೊಸರು ಕುಡಿಕೆ, ಆಟೋಟ ಸ್ಪರ್ಧೆ

[t4b-ticker]
error: Content is protected !!