ಬಿಹಾರ, ತಮಿಳುನಾಡು, ಪಶ್ಚಿಮ ಬಂಗಾಳಕ್ಕೆ ಬಿಜೆಪಿಯಿಂದ ಚುನಾವಣಾ ಉಸ್ತುವಾರಿಗಳ ನೇಮಕ

Picture of Savistara

Savistara

Bureau Report

ನವದೆಹಲಿ: ಈ ವರ್ಷ ಹಾಗೂ ಮುಂದಿನ ವರ್ಷ ಚುನಾವಣೆನಡೆಯಲಿರುವ ಮೂರು ರಾಜ್ಯಗಳಿಗೆ ಚುನಾವಣಾ ಉಸ್ತುವಾರಿಗಳನ್ನು ಬಿಜೆಪಿ ಗುರುವಾರ ನೇಮಿಸಿದೆ. ಬಿಹಾರದ ಹೊಣೆಯನ್ನು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರಿಗೆ ವಹಿಸಲಾಗಿದೆ.

ಗುಜರಾತ್ ಬಿಜೆಪಿ ರಾಜ್ಯ ಘಟಕದ ಮುಖ್ಯಸ್ಥರೂ ಆಗಿರುವ ಕೇಂದ್ರ ಸಚಿವ ಸಿ.ಆ‌ರ್. ಪಾಟೀಲ್ ಮತ್ತು ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರು ಸಹ ಉಸ್ತುವಾರಿಯಾಗಿ ನೇಮಕಗೊಂಡಿದ್ದಾರೆ.ಬಿಹಾರ ವಿಧಾನಸಭೆಗೆ ನವೆಂಬರ್‌ನಲ್ಲಿ ಚುನಾವಣೆ ನಡೆಯುವ ಸಾಧ್ಯತೆಯಿದೆ.ಇನ್ನು, ಮುಂದಿನ ವರ್ಷ ಚುನಾವಣೆ ನಡೆಯಲಿರುವ ತಮಿಳುನಾಡು ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಿಗೂ ಉಸ್ತುವಾರಿಗಳನ್ನು ನೇಮಕ ಮಾಡಲಾಗಿದೆ.

ತಮಿಳುನಾಡು ಉಸ್ತುವಾರಿ ಜವಾಬ್ದಾರಿಯನ್ನು ಬೈಜಯಂತ್ ಪಾಂಡಾ, ಸಹ ಉಸ್ತುವಾರಿ ಹೊಣೆಯನ್ನು ಕೇಂದ್ರ ಸಚಿವ ಮುರಳೀಧ‌ರ್ ಮೊಹೋಲ್ ಅವರಿಗೆ ವಹಿಸಲಾಗಿದೆ. ಪಶ್ಚಿಮ ಬಂಗಾಳದ ಚುನಾವಣಾ ಉಸ್ತುವಾರಿಯಾಗಿ ಕೇಂದ್ರ ಸಚಿವ ಭೂಪೇಂದ್ರ ಯಾದವ್, ಸಹ ಉಸ್ತುವಾರಿಯಾಗಿ ಮಾಜಿ ಮುಖ್ಯಮಂತ್ರಿ ಬಿಪ್ಲಬ್ ಕುಮಾರ್ ದೇಬ್ ನೇಮಕಗೊಂಡಿದ್ದಾರೆ.

News Updates

BREAKING NEWS ಸುಳ್ಯ :ಪಂಜ ಕಾಂಗ್ರೆಸ್ ಪಕ್ಷದ ಹುದ್ದೆಗೆ ರಾಜಿನಾಮೆ ನೀಡಿದ ದಿನೇಶ್ ಪುಂಡಿಮನೆ, ಕುಸುಮಾಧರ ಕೆರೆಯಡ್ಕ,ಲೋಕನಾಥ್ ಕುದ್ವ |ನಮ್ಮ ಮಾತನ್ನು ಪಕ್ಷದ ನಾಯಕರು ಉಳಿಸಿಕೊಂಡಿಲ್ಲ, ದೇವಸ್ಥಾನ ವ್ಯವಸ್ಥೆ ಸರಿದಾರಿಗೆ ತರುವ ಕೆಲಸವಾಗಲಿ: ದಿನೇಶ್ ಪುಂಡಿಮನೆ

News Updates

ಬೆಳ್ತಂಗಡಿ : ಮೊಗ್ರು ಜೈ ಶ್ರೀರಾಮ ಸೇವಾ ಟ್ರಸ್ಟ್ ಅಲೆಕ್ಕಿ -ಮುಗೇರಡ್ಕ ಮೊಗ್ರು, ಶ್ರೀ ರಾಮ ಶಿಶುಮಂದಿರದ 5 ನೇ ವರ್ಷದ ಶ್ರೀ ಕೃಷ್ಣೋತ್ಸವ. |ಕಾಶಿ ಶೆಟ್ಟಿ ನವಶಕ್ತಿ ಗುರುವಾಯನಕೆರೆ ಇವರ ಸ್ಮರಣಾರ್ಥ ಕಾಶಿ ಶೆಟ್ಟಿ ವಿದ್ಯಾ ಮಂದಿರ, ಹಾಗೂ ಶಾಸಕ ಹರೀಶ್ ಪೂಂಜಾರವರ ನೆರವಿನ ಅಡುಗೆ ಕೋಣೆ ಉದ್ಘಾಟನಾ ಕಾರ್ಯಕ್ರಮ |ಮಕ್ಕಳ ಶ್ರೀಕೃಷ್ಣ ಮತ್ತು ರಾಧೆಯರ ಸ್ಪರ್ಧೆ, ಮೊಸರು ಕುಡಿಕೆ, ಆಟೋಟ ಸ್ಪರ್ಧೆ

[t4b-ticker]
error: Content is protected !!