ಗುಜರಾತ್ |ಆಕ್ಷೇಪಾರ್ಹ ಪೋಸ್ಟ್: ಅಂಗಡಿ, ವಾಹನಗಳಿಗೆ ಹಾನಿ, 60 ಮಂದಿ ವಶ

Picture of Savistara

Savistara

Bureau Report

ಅಹಮದಾಬಾದ್‌: ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪಾರ್ಹ ಪೋಸ್ಟ್ ಹಾಕಿದ್ದಕ್ಕೆ ಕೆರಳಿದ ಅಲ್ಪಸಂಖ್ಯಾತ ಸಮುದಾಯದ ಗುಂಪೊಂದು ಗಾಂಧಿನಗರ ಜಿಲ್ಲೆಯ ಗ್ರಾಮವೊಂದರಲ್ಲಿ ಹಲವು ಅಂಗಡಿಗಳು ಹಾಗೂ ವಾಹನಗಳಿಗೆ ಹಾನಿ ಮಾಡಿ, ಕಲ್ಲು ತೂರಾಟ ನಡೆಸಿದ್ದಾರೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.

ಬುಧವಾರ ತಡರಾತ್ರಿ ದೇಘಂ ತಾಲ್ಲೂಕಿನ ಬಹಿಯಾಲ್ ಗ್ರಾಮದಲ್ಲಿ ನಡೆದ ಘರ್ಷಣೆ ಹಾಗೂ ಹಿಂಸಾಚಾರದಲ್ಲಿ ಭಾಗಿಯಾದ ಆರೋಪದಲ್ಲಿ 60 ಮಂದಿಯನ್ನು ವಶಕ್ಕೆ ಪಡೆದಿದ್ದೇವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಘಟನೆಯಲ್ಲಿ ಐದು ಅಂಗಡಿಗಳು ಹಾಗೂ 6 ವಾಹನಗಳು ಹಾನಿಯಾಗಿವೆ ಎಂದು ಅವರು ಹೇಳಿದ್ದಾರೆ.ಸದ್ಯ ನಡೆಯುತ್ತಿರುವ ‘ಐ ಲವ್ ಮೊಹಮ್ಮದ್’ ಟ್ರೆಂಡ್ ಬಗ್ಗೆ ಹಿಂದೂ ಧರ್ಮಕ್ಕೆ ಸೇರಿದ ವ್ಯಕ್ತಿಯೊಬ್ಬ ಸಾಮಾಜಿಕ ಜಾಲತಾಣದಲ್ಲಿ ಹಾಕಿದ್ದ ಆಕ್ಷೇಪಾರ್ಹ ಪೋಸ್ಟ್ ಈ ಹಿಂಸಾಚಾರಕ್ಕೆ ಕಾರಣವಾಗಿದೆ ಎಂದು ಗಾಂಧಿನಗರ ಪೊಲೀಸ್‌ ವರಿಷ್ಠಾಧಿಕಾರಿ ತೇಜ ವಸಂಸೆಟ್ಟಿ ತಿಳಿಸಿದ್ದಾರೆ.

ಬುಧವಾರ ರಾತ್ರಿ ಸುಮಾರು 11 ಗಂಟೆ ವೇಳೆಗೆ ವಾಟ್ಸ್‌ಆ್ಯಪ್‌ನಲ್ಲಿ ಆಕ್ಷೇಪಾರ್ಹ ಸ್ಟೇಟಸ್‌ ಹಾಕಿದ್ದ ವ್ಯಕ್ತಿಯ ಅಂಗಡಿಯ ಷರ್ಟ ಮುರಿದ ಆಕ್ರೋಶಿತ ಗುಂಪು ವಸ್ತುಗಳನ್ನೆಲ್ಲಾ ಹೊರಗೆ ಎಸೆದು ಬೆಂಕಿ ಹಚ್ಚಿದೆ ಎಂದು ಅವರು ತಿಳಿಸಿದ್ದಾರೆ.ಬಳಿಕ ಗುಂಪು, ಹಿಂದೂ ಪ್ರದೇಶಗಳಿಗೆ ಕಲ್ಲು ತೂರಾಟ ನಡೆಸಿದ್ದಾರೆ. ಪ್ರತೀಕಾರವಾಗಿ ಆ ಕಡೆಯಿಂದಲೂ ಕಲ್ಲು ತೂರಟ ನಡೆಸಿದ್ದಾರೆ. ಸ್ಥಳದಲ್ಲಿ ಭಾರಿ ಪೊಲೀಸ್‌ ನಿಯೋಜನೆ ಮಾಡಲಾಗಿದ್ದು, ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

News Updates

BREAKING NEWS ಸುಳ್ಯ :ಪಂಜ ಕಾಂಗ್ರೆಸ್ ಪಕ್ಷದ ಹುದ್ದೆಗೆ ರಾಜಿನಾಮೆ ನೀಡಿದ ದಿನೇಶ್ ಪುಂಡಿಮನೆ, ಕುಸುಮಾಧರ ಕೆರೆಯಡ್ಕ,ಲೋಕನಾಥ್ ಕುದ್ವ |ನಮ್ಮ ಮಾತನ್ನು ಪಕ್ಷದ ನಾಯಕರು ಉಳಿಸಿಕೊಂಡಿಲ್ಲ, ದೇವಸ್ಥಾನ ವ್ಯವಸ್ಥೆ ಸರಿದಾರಿಗೆ ತರುವ ಕೆಲಸವಾಗಲಿ: ದಿನೇಶ್ ಪುಂಡಿಮನೆ

News Updates

ಬೆಳ್ತಂಗಡಿ : ಮೊಗ್ರು ಜೈ ಶ್ರೀರಾಮ ಸೇವಾ ಟ್ರಸ್ಟ್ ಅಲೆಕ್ಕಿ -ಮುಗೇರಡ್ಕ ಮೊಗ್ರು, ಶ್ರೀ ರಾಮ ಶಿಶುಮಂದಿರದ 5 ನೇ ವರ್ಷದ ಶ್ರೀ ಕೃಷ್ಣೋತ್ಸವ. |ಕಾಶಿ ಶೆಟ್ಟಿ ನವಶಕ್ತಿ ಗುರುವಾಯನಕೆರೆ ಇವರ ಸ್ಮರಣಾರ್ಥ ಕಾಶಿ ಶೆಟ್ಟಿ ವಿದ್ಯಾ ಮಂದಿರ, ಹಾಗೂ ಶಾಸಕ ಹರೀಶ್ ಪೂಂಜಾರವರ ನೆರವಿನ ಅಡುಗೆ ಕೋಣೆ ಉದ್ಘಾಟನಾ ಕಾರ್ಯಕ್ರಮ |ಮಕ್ಕಳ ಶ್ರೀಕೃಷ್ಣ ಮತ್ತು ರಾಧೆಯರ ಸ್ಪರ್ಧೆ, ಮೊಸರು ಕುಡಿಕೆ, ಆಟೋಟ ಸ್ಪರ್ಧೆ

[t4b-ticker]
error: Content is protected !!