ಜಾತಿ ಗಣತಿಗೆ ಗೈರಾದ ಸಿಬ್ಬಂದಿಗೆ ಭಾರೀ ಶಾಕ್! ಶಿಸ್ತು ಕ್ರಮ ಕೈಗೊಳ್ಳಲು ಸಂಪುಟ ನಿರ್ಧಾರ

Picture of Savistara

Savistara

Bureau Report

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಜಾತಿ ಗಣತಿ ಸಮೀಕ್ಷೆಗೆ ಗೈರಾದ ಸಿಬ್ಬಂದಿ ವಿರುದ್ಧ ಶಿಸ್ತು ಕ್ರಮಕ್ಕೆ ಸಚಿವ ಸಂಪುಟ ಸಭೆ ನಿರ್ಧಾರ ಕೈಗೊಂಡಿದೆ. ಸಿಎಂ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಚಿವ ಎಚ್‌ಕೆ ಪಾಟೀಲ್‌ ಅವರು ಈ ಕುರಿತು ವಿವರ ಹಂಚಿಕೊಂಡರು.ಜಾತಿ ಗಣತಿ ವಿವಾದ ಆಗುತ್ತಿರುವ ಹಿನ್ನೆಲೆಯಲ್ಲಿ ಕೆಲವು ಸಿಬ್ಬಂದಿ ಸಮೀಕ್ಷೆಗೆ ಮನೆ ಮನೆಗೆ ತೆರಳಲು ಹಿಂದೇಟು ಹಾಕುತ್ತಿದ್ದಾರೆ. ಬೇರೆ ಬೇರೆ ಕಾರಣಗಳನ್ನು ನೀಡಿ ಸಮೀಕ್ಷೆಗೆ ತೆರಳಲು ಮುಂದಾಗುತ್ತಿಲ್ಲ. ಹೀಗಾಗಿ ಈ ಬಗ್ಗೆ ದೂರುಗಳು ಕೇಳಿ ಬಂದ ಹಿನ್ನೆಲೆಯಲ್ಲಿ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆದಿದೆ. ಸಿಎಂ ಸಿದ್ದರಾಮಯ್ಯ ಅವರು ಈ ನಿಟ್ಟಿನಲ್ಲಿ ಖಡಕ್ ಸೂಚನೆ ನೀಡಿದ್ದು, ಹಾಜರಾಗದ ಸಿಬ್ಬಂದಿ ವಿರುದ್ಧ ಶಿಸ್ತು ಕ್ರಮಕ್ಕೆ ಸೂಚನೆ ನೀಡಿದರು.ಬೆಂಗಳೂರಿನಲ್ಲಿ ಸಮೀಕ್ಷೆಗೆ ಸಿಬ್ಬಂದಿ ಗೈರಾದರೆ ಅವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವ ಅಧಿಕಾರವನ್ನು ಮುಖ್ಯ ಆಯುಕ್ತರಿಗೆ ನೀಡಲಾಗಿದೆ. ಇನ್ನು ಜಿಲ್ಲಾ ಮಟ್ಟದಲ್ಲಿ ಜಿಲ್ಲಾಧಿಕಾರಿಗಳು ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಿದ್ದಾರೆ ಎಂದು ಸಚಿವರು ವಿವರ ನೀಡಿದರು.ಸರ್ವರ್ ಸಮಸ್ಯೆ ಇಲ್ಲಜಾತಿ ಸಮೀಕ್ಷೆಗೆ ಎರಡು ದಿನಗಳ ಕಾಲ ರಾಜ್ಯದ ಕೆಲವು ಕಡೆ ಸರ್ವರ್ ಸಮಸ್ಯೆ ಇದ್ದಿದ್ದು ಹೌದಯ. ಇದರಿಂದಾಗಿ ಅಡೆಚಣೆ ಉಂಟಾಗಿದ್ದೂ ನಿಜ. ಆದರೆ, ಅದನ್ನು ಈಗ ಬಗೆಹರಿಸಲಾಗಿದೆ. ಈಗ ಯಾವುದೇ ಸಮಸ್ಯೆ ಇಲ್ಲ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್‌ಕೆ ಪಾಟೀಲ್ ಮಾಹಿತಿ ನೀಡಿದರು.ಧರ್ಮಸ್ಥಳ ಚರ್ಚೆ ಆಗಿಲ್ಲಇನ್ನು ಧರ್ಮಸ್ಥಳ ಗ್ರಾಮದಲ್ಲಿ ಪ್ರಭಾವಿಗಳ ಸೂಚನೆ ಮೇರೆಗೆ ನೂರಾರು ಶವಗಳನ್ನು ಹೂತು ಹಾಕಿರುವುದಾಗಿ ಅನಾಮಿಕ ಅಲಿಯಾಸ್‌ ಸಿಎನ್‌ ಚಿನ್ನಯ್ಯ ನೀಡಿದ ದೂರಿನ ಸಂಬಂಧ ನಡೆಯುತ್ತಿರುವ ವಿಶೇಷ ತನಿಖಾ ದಳ (ಎಸ್‌ಐಟಿ) ತನಿಖೆಯ ಬಗ್ಗೆ ಯಾವುದೇ ಚರ್ಚೆ ಆಗಿಲ್ಲ ಎಂದು ಸಚಿವರು ತಿಳಿಸಿದರು.ಸಾರ್ವಜನಿಕ ವಲಯದಲ್ಲಿ ವಿಶೇಷ ತನಿಖಾ ತಂಡ ಶೀಘ್ರದಲ್ಲೇ ಕೊನೆಗೊಳ್ಳಲಿದೆ ಎಂಬ ಮಾಹಿತಿಗಳು ಹರಿದಾಡುತ್ತಿದ್ದವು. ಆದರೆ ಸಂಪುಟ ಸಭೆಯಲ್ಲಿ ಈ ರೀತಿಯ ಯಾವುದೇ ಚರ್ಚೆ ನಡೆದಿಲ್ಲ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವರು ತಿಳಿಸಿದರು.

News Updates

BREAKING NEWS ಸುಳ್ಯ :ಪಂಜ ಕಾಂಗ್ರೆಸ್ ಪಕ್ಷದ ಹುದ್ದೆಗೆ ರಾಜಿನಾಮೆ ನೀಡಿದ ದಿನೇಶ್ ಪುಂಡಿಮನೆ, ಕುಸುಮಾಧರ ಕೆರೆಯಡ್ಕ,ಲೋಕನಾಥ್ ಕುದ್ವ |ನಮ್ಮ ಮಾತನ್ನು ಪಕ್ಷದ ನಾಯಕರು ಉಳಿಸಿಕೊಂಡಿಲ್ಲ, ದೇವಸ್ಥಾನ ವ್ಯವಸ್ಥೆ ಸರಿದಾರಿಗೆ ತರುವ ಕೆಲಸವಾಗಲಿ: ದಿನೇಶ್ ಪುಂಡಿಮನೆ

News Updates

ಬೆಳ್ತಂಗಡಿ : ಮೊಗ್ರು ಜೈ ಶ್ರೀರಾಮ ಸೇವಾ ಟ್ರಸ್ಟ್ ಅಲೆಕ್ಕಿ -ಮುಗೇರಡ್ಕ ಮೊಗ್ರು, ಶ್ರೀ ರಾಮ ಶಿಶುಮಂದಿರದ 5 ನೇ ವರ್ಷದ ಶ್ರೀ ಕೃಷ್ಣೋತ್ಸವ. |ಕಾಶಿ ಶೆಟ್ಟಿ ನವಶಕ್ತಿ ಗುರುವಾಯನಕೆರೆ ಇವರ ಸ್ಮರಣಾರ್ಥ ಕಾಶಿ ಶೆಟ್ಟಿ ವಿದ್ಯಾ ಮಂದಿರ, ಹಾಗೂ ಶಾಸಕ ಹರೀಶ್ ಪೂಂಜಾರವರ ನೆರವಿನ ಅಡುಗೆ ಕೋಣೆ ಉದ್ಘಾಟನಾ ಕಾರ್ಯಕ್ರಮ |ಮಕ್ಕಳ ಶ್ರೀಕೃಷ್ಣ ಮತ್ತು ರಾಧೆಯರ ಸ್ಪರ್ಧೆ, ಮೊಸರು ಕುಡಿಕೆ, ಆಟೋಟ ಸ್ಪರ್ಧೆ

[t4b-ticker]
error: Content is protected !!