ಸುರಂಗ ಮಾರ್ಗ ಯೋಜನೆ ಟೆಂಡರ್ ಪ್ರಶ್ನಿಸಿ PIL: ರಾಜ್ಯ ಸರ್ಕಾರ, ಜಿಬಿಎಗೆ ನೋಟಿಸ್

Picture of Savistara

Savistara

Bureau Report

ಬೆಂಗಳೂರು: ಬೆಂಗಳೂರು ಮಹಾನಗರದ ಸಂಚಾರ ದಟ್ಟಣೆ ತಗ್ಗಿಸುವ ನಿಟ್ಟಿನಲ್ಲಿ ಬಹುಕೋಟಿ ರೂಪಾಯಿ ವೆಚ್ಚದ ಜೋಡಿ ಸುರಂಗ ಮಾರ್ಗ ಯೋಜನೆ ಕೈಗೆತ್ತಿಕೊಳ್ಳುವ ಪ್ರಸ್ತಾವದ ಟೆಂಡ‌ರ್ ಪ್ರಶ್ನಿಸಲಾದ ಅರ್ಜಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಮತ್ತು ಗ್ರೇಟರ್ ಬೆಂಗಳೂರು ಪ್ರಾಧಿಕಾರಕ್ಕೆ ನೋಟಿಸ್‌ ಜಾರಿಗೊಳಿಸಲು ಹೈಕೋರ್ಟ್ ಆದೇಶಿಸಿದೆ.

ಈ ಸಂಬಂಧ ಇಂದಿರಾ ನಗರದ ಡಾ.ಆದಿಕೇಶವುಲು ರವೀಂದ್ರ, ಜೆ.ಪಿ ನಗರದ ವಿನೋದ್ ವ್ಯಾಸುಲು ಮತ್ತು ಬಸವನಗುಡಿಯ ಎನ್.ಎಸ್.ಮುಕುಂದ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್) ಮುಖ್ಯ ನ್ಯಾಯಮೂರ್ತಿ ವಿಭು ಬಬ್ರು ನೇತೃತ್ವದ ವಿಭಾಗೀಯ ನ್ಯಾಯಪೀಠ ಗುರುವಾರ ವಿಚಾರಣೆ ನಡೆಸಿತು.ಅರ್ಜಿದಾರರ ಪರ ವಕೀಲರ ವಾದ ಆಲಿಸಿದ ನ್ಯಾಯಪೀಠ, ರಾಜ್ಯ ಪರಿಸರ ಅಧ್ಯಯನ ಮೌಲ್ಯಮಾನ ಪ್ರಾಧಿಕಾರ (ಎಸ್‌ಇಐಎಎ) ನಗರ ಭೂ ಸಾರಿಗೆ ನಿರ್ದೇಶನಾಲಯ (ಡಲ್ಟ್), ಬೆಂಗಳೂರು ಸ್ಮಾರ್ಟ್ ಮೂಲಸೌಕರ್ಯ ನಿಯಮಿತ (ಬಿ-ಸ್ಟೈಲ್) ರೋಡಿಕ್ ಕನ್ಸಲೆಂಟ್ಸ್ ಮತ್ತು ಆಲ್ವಿನೋಕ್ ಕನ್ಸಲೆಂಟಿಂಗ್ ಎಂಜಿನಿಯರಿಂಗ್‌ ಪ್ರೈವೇಟ್ ಲಿಮಿಟೆಡ್ ಕಂಪನಿ ಸೇರಿದಂತೆ ಪ್ರಕರಣದ ಎಲ್ಲ ಪ್ರತಿವಾದಿಗಳಿಗೆ ನೋಟಿಸ್‌ ಜಾರಿಗೊಳಿಸಲು ಆದೇಶಿಸಿ ವಿಚಾರಣೆಯನ್ನು ಡಿಸೆಂಬರ್ 9ಕ್ಕೆ ಮುಂದೂಡಿದೆ.

ಕೋರಿಕೆ:

ಜೋಡಿ ಸುರಂಗ ರಸ್ತೆ ಯೋಜನೆಗೆ 2025ರ ಜುಲೈ 14ರಂದು ಕರೆದಿರುವ ಟೆಂಡ‌ರ್ ಅಧಿಸೂಚನೆ ರದ್ದುಗೊಳಿಸಬೇಕು. ಪೂರ್ವ-ಬಿಡ್, ಬಿಡ್ ಸಲ್ಲಿಕೆ, ಬಿಡ್ ಮೌಲ್ಯಮಾಪನ ಮತ್ತು ಉದ್ದೇಶಿತ ಟೆಂಡರ್‌ ಪ್ರಸ್ತಾವ ಅಂತಿಮಗೊಳಿಸುವ ಪತ್ರ ಸೇರಿದಂತೆ ಎಲ್ಲಾ ಹಂತಗಳ ಪ್ರಕ್ರಿಯೆ ರದ್ದುಗೊಳಿಸಬೇಕು ಎಂದು ಅರ್ಜಿದಾರರು ಕೋರಿದ್ದಾರೆ.

ಅರ್ಜಿಯಲ್ಲಿ ಏನಿದೆ?:

ಹೆಬ್ಬಾಳದಿಂದ ಸಿಲ್ಕ್ ಬೋರ್ಡ್ ವರೆಗೆ ಅಂದಾಜು ₹19 ಸಾವಿರ ಕೋಟಿ ವೆಚ್ಚದಲ್ಲಿ ಸುರಂಗ ಮಾರ್ಗ ಯೋಜನೆ ನಿರ್ಮಾಣಕ್ಕೆ ಉದ್ದೇಶಿಸಲಾಗಿದೆ.ಉದ್ದೇಶಿತ ಸುರಂಗ ರಸ್ತೆ ನಿರ್ಮಾಣಕ್ಕಾಗಿ ಪರಿಸರ ಪರಿಣಾಮ ಮೌಲ್ಯಮಾಪನ ನಡೆಸಿಲ್ಲ. ಸಂಚಾರ ಯೋಜನೆ ಮತ್ತು ಸ್ವಾಧೀನದ ನಿರ್ದಿಷ್ಟ ವೆಚ್ಚದ ಪಟ್ಟಿಯನ್ನೂ ಸಿದ್ಧಪಡಿಸಿಲ್ಲ. ಚಾಲ್ತಿಯಲ್ಲಿರುವ ಎಲ್ಲ ಒಳಚರಂಡಿ ಮತ್ತು ರಾಜಕಾಲುವೆ ಮಾರ್ಗ ಮತ್ತು ಮಳೆ ನೀರು ಮಾರ್ಗಗಳ ನಕ್ಷೆ ಸಿದ್ಧಪಡಿಸಿಲ್ಲ. ಸುರಂಗ ಮಾರ್ಗದಿಂದ ರಾಜಕಾಲುವೆ ಮಾರ್ಗಗಳ ನಕ್ಷೆಗೆ ಅಡ್ಡಿ ಉಂಟಾದರೆ ಪರ್ಯಾಯ ವ್ಯವಸ್ಥೆ ಏನು ಎಂಬುದನ್ನು ಪ್ರಸ್ತಾವದಲ್ಲಿ ಕಾಣಿಸಿಲ್ಲ’ ಎಂದು ಅರ್ಜಿದಾರರು ಆಕ್ಷೇಪಿಸಿದ್ದಾರೆ.

News Updates

BREAKING NEWS ಸುಳ್ಯ :ಪಂಜ ಕಾಂಗ್ರೆಸ್ ಪಕ್ಷದ ಹುದ್ದೆಗೆ ರಾಜಿನಾಮೆ ನೀಡಿದ ದಿನೇಶ್ ಪುಂಡಿಮನೆ, ಕುಸುಮಾಧರ ಕೆರೆಯಡ್ಕ,ಲೋಕನಾಥ್ ಕುದ್ವ |ನಮ್ಮ ಮಾತನ್ನು ಪಕ್ಷದ ನಾಯಕರು ಉಳಿಸಿಕೊಂಡಿಲ್ಲ, ದೇವಸ್ಥಾನ ವ್ಯವಸ್ಥೆ ಸರಿದಾರಿಗೆ ತರುವ ಕೆಲಸವಾಗಲಿ: ದಿನೇಶ್ ಪುಂಡಿಮನೆ

News Updates

ಬೆಳ್ತಂಗಡಿ : ಮೊಗ್ರು ಜೈ ಶ್ರೀರಾಮ ಸೇವಾ ಟ್ರಸ್ಟ್ ಅಲೆಕ್ಕಿ -ಮುಗೇರಡ್ಕ ಮೊಗ್ರು, ಶ್ರೀ ರಾಮ ಶಿಶುಮಂದಿರದ 5 ನೇ ವರ್ಷದ ಶ್ರೀ ಕೃಷ್ಣೋತ್ಸವ. |ಕಾಶಿ ಶೆಟ್ಟಿ ನವಶಕ್ತಿ ಗುರುವಾಯನಕೆರೆ ಇವರ ಸ್ಮರಣಾರ್ಥ ಕಾಶಿ ಶೆಟ್ಟಿ ವಿದ್ಯಾ ಮಂದಿರ, ಹಾಗೂ ಶಾಸಕ ಹರೀಶ್ ಪೂಂಜಾರವರ ನೆರವಿನ ಅಡುಗೆ ಕೋಣೆ ಉದ್ಘಾಟನಾ ಕಾರ್ಯಕ್ರಮ |ಮಕ್ಕಳ ಶ್ರೀಕೃಷ್ಣ ಮತ್ತು ರಾಧೆಯರ ಸ್ಪರ್ಧೆ, ಮೊಸರು ಕುಡಿಕೆ, ಆಟೋಟ ಸ್ಪರ್ಧೆ

[t4b-ticker]
error: Content is protected !!