ಫ್ರಾನ್ಸ್ ಮಾಜಿ ಅಧ್ಯಕ್ಷ ನಿಕೋಲಸ್ ಸರ್ಕೋಜಿಗೆ 5 ವರ್ಷ ಜೈಲು

Picture of Savistara

Savistara

Bureau Report

ಪ್ಯಾರಿಸ್‌: 2007ರ ಅಧ್ಯಕ್ಷೀಯ ಚುನಾವಣೆಗೆ ಲಿಬಿಯಾದ ಸರ್ವಾಧಿಕಾರಿ ಮುಅಮ್ಮರ್ ಗಢಾಫಿಯಿಂದ ಹಣಕಾಸು ಸಹಾಯ ಪಡೆದ ಆರೋಪ ಸಾಬೀತಾದ ಕಾರಣ ಇಲ್ಲಿನ ನ್ಯಾಯಾಲಯವು ಗುರುವಾರ ಫ್ರಾನ್ಸ್ ಮಾಜಿ ಅಧ್ಯಕ್ಷ ನಿಕೋಲಸ್‌ ಸರ್ಕೋಜಿಗೆ ಐದು ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ.

ಇದೇ ವೇಳೆ ಅವರ ಮೇಲಿದ್ದ ಇತರ ಮೂರು ಆರೋಪಗಳನ್ನು ಖುಲಾಸೆಗೊಳಿಸಲಾಗಿದೆ ಎಂದು ಅಸೋಸಿಯೇಟೆಡ್ ಪ್ರೆಸ್‌ ವರದಿ ಮಾಡಿದೆ.2007ರ ಅಧ್ಯಕ್ಷೀಯ ಚುನಾವಣೆಯ ಪ್ರಚಾರಕ್ಕಾಗಿ ಲಿಬಿಯಾದಿಂದ ಆರ್ಥಿಕ ನೆರವು ಪಡೆಯಲು ಸರ್ಕೋಜಿ ಅವರು ತಮ್ಮ ಆಪ್ತರಿಗೆ ಅವಕಾಶ ನೀಡಿದ್ದಾರೆ ಎಂಬುದನ್ನು ನ್ಯಾಯಾಲಯ ಗಮನಿಸಿದೆ. ಆದರೆ ಈ ಹಣವನ್ನು ಚುನಾವಣೆಯಲ್ಲಿ ಬಳಸಲಾಗಿದೆ ಎಂಬುವುದನ್ನು ಸಾಬೀತುಪಡಿಸಲು ಸಾಧ್ಯವಾಗಿಲ್ಲ.ಈ ಪ್ರಕರಣದಲ್ಲಿ ಸರ್ಕೋಜಿ ಆಪ್ತರಾದ ಕೌಡ್ ಗುಯೆಂಟ್ ಮತ್ತು ಬ್ರೆಸ್ ಹಾರ್ಟೆಪ್ಯೂಕ್ಸ್ ಕೂಡ ತಪ್ಪಿತಸ್ಥರಾಗಿದ್ದಾರೆ. ಮತ್ತೋರ್ವ ಆರೋಪಿ ಉದ್ಯಮಿ ಜಿಯಾದ್ ಟಕಿಯಿದ್ದೀನ್ ವಿಚಾರಣಾ ಹಂತದಲ್ಲಿ ನಿಧನರಾಗಿದ್ದಾರೆ.

2011ರಲ್ಲಿ ಸರ್ಕೋಜಿ ಅವರ ಚುನಾವಣಾ ಪ್ರಚಾರಕ್ಕೆ ಹಣಕಾಸು ಒದಗಿಸಿದ್ದಾಗಿ ಗಡಾಫಿ ಬಹಿರಂಗವಾಗಿ ಒಪ್ಪಿಕೊಂಡಿದ್ದರು. ಈ ಆರೋಪವನ್ನು ಅಲ್ಲಗೆಳೆದಿದ್ದ ಸರ್ಕೋಜಿ, ರಾಜಕೀಯ ಪ್ರೇರಿತ ಎಂದು ಕರೆದಿದ್ದರು.

News Updates

BREAKING NEWS ಸುಳ್ಯ :ಪಂಜ ಕಾಂಗ್ರೆಸ್ ಪಕ್ಷದ ಹುದ್ದೆಗೆ ರಾಜಿನಾಮೆ ನೀಡಿದ ದಿನೇಶ್ ಪುಂಡಿಮನೆ, ಕುಸುಮಾಧರ ಕೆರೆಯಡ್ಕ,ಲೋಕನಾಥ್ ಕುದ್ವ |ನಮ್ಮ ಮಾತನ್ನು ಪಕ್ಷದ ನಾಯಕರು ಉಳಿಸಿಕೊಂಡಿಲ್ಲ, ದೇವಸ್ಥಾನ ವ್ಯವಸ್ಥೆ ಸರಿದಾರಿಗೆ ತರುವ ಕೆಲಸವಾಗಲಿ: ದಿನೇಶ್ ಪುಂಡಿಮನೆ

News Updates

ಬೆಳ್ತಂಗಡಿ : ಮೊಗ್ರು ಜೈ ಶ್ರೀರಾಮ ಸೇವಾ ಟ್ರಸ್ಟ್ ಅಲೆಕ್ಕಿ -ಮುಗೇರಡ್ಕ ಮೊಗ್ರು, ಶ್ರೀ ರಾಮ ಶಿಶುಮಂದಿರದ 5 ನೇ ವರ್ಷದ ಶ್ರೀ ಕೃಷ್ಣೋತ್ಸವ. |ಕಾಶಿ ಶೆಟ್ಟಿ ನವಶಕ್ತಿ ಗುರುವಾಯನಕೆರೆ ಇವರ ಸ್ಮರಣಾರ್ಥ ಕಾಶಿ ಶೆಟ್ಟಿ ವಿದ್ಯಾ ಮಂದಿರ, ಹಾಗೂ ಶಾಸಕ ಹರೀಶ್ ಪೂಂಜಾರವರ ನೆರವಿನ ಅಡುಗೆ ಕೋಣೆ ಉದ್ಘಾಟನಾ ಕಾರ್ಯಕ್ರಮ |ಮಕ್ಕಳ ಶ್ರೀಕೃಷ್ಣ ಮತ್ತು ರಾಧೆಯರ ಸ್ಪರ್ಧೆ, ಮೊಸರು ಕುಡಿಕೆ, ಆಟೋಟ ಸ್ಪರ್ಧೆ

[t4b-ticker]
error: Content is protected !!