ಜಿಎಸ್‌ಟಿ ಇಳಿಕೆ: ನಾಲ್ಕು ದಿನದಲ್ಲಿ 75 ಸಾವಿರ ವಾಹನ ಮಾರಾಟ

Picture of Savistara

Savistara

Bureau Report

ನವದೆಹಲಿ:ಕಳೆದ ನಾಲ್ಕು ದಿನದಲ್ಲಿ 75 ಸಾವಿರ ವಾಹನಗಳು ಮಾರಾಟವಾಗಿವೆ ಎಂದು ವಾಹನ ತಯಾರಿಕಾ ಕಂಪನಿ ಮಾರುತಿ ಸುಜುಕಿ ಇಂಡಿಯಾ ಗುರುವಾರ ತಿಳಿಸಿದೆ.

ಈ ಮೊದಲು ಪ್ರತಿದಿನ 45 ಸಾವಿರದಷ್ಟು ಗ್ರಾಹಕರು ವಾಹನಗಳ ಬಗ್ಗೆ ವಿಚಾರಿಸುತ್ತಿದ್ದರು. ಈ ಪ್ರಮಾಣ ಈಗ 80 ಸಾವಿರಕ್ಕೆ ಹೆಚ್ಚಳವಾಗಿದೆ. ಪ್ರತಿದಿನ 18 ಸಾವಿರ ವಾಹನಗಳ ಬುಕಿಂಗ್ ಆಗುತ್ತಿವೆ ಎಂದು ಕಂಪನಿಯ ಮಾರ್ಕೆಟಿಂಗ್ ಮತ್ತು ಮಾರಾಟ ವಿಭಾಗದ ಹಿರಿಯ ಕಾರ್ಯನಿರ್ವಾಹಕ ಅಧಿಕಾರಿ ಪಾರ್ಥೋ ಬ್ಯಾನರ್ಜಿ ಹೇಳಿದ್ದಾರೆ.ಸೆಪ್ಟೆಂಬರ್ 22ರಿಂದ ಜಿಎಸ್‌ಟಿ ಸರಳೀಕರಣವು ಜಾರಿಗೆ ಬಂದಿದ್ದು, ಅಂದಿನಿಂದ ಗುರುವಾರ ಸಂಜೆ ಆರು ಗಂಟೆವರೆಗೆ 75 ಸಾವಿರ ವಾಹನಗಳ ರಿಟೇಲ್ ಮಾರಾಟವಾಗಿವೆ. ವಾಹನಗಳಿಗೆ ಬುಕಿಂಗ್ ಸಹ ಹೆಚ್ಚಳವಾಗಿದೆ. ಕಂಪನಿಯ ಸಣ್ಣ ಕಾರುಗಳಿಗೆ ಹೆಚ್ಚಿನ ಬೇಡಿಕೆ ಇದೆ ಎಂದು ಹೇಳಿದ್ದಾರೆ.

News Updates

BREAKING NEWS ಸುಳ್ಯ :ಪಂಜ ಕಾಂಗ್ರೆಸ್ ಪಕ್ಷದ ಹುದ್ದೆಗೆ ರಾಜಿನಾಮೆ ನೀಡಿದ ದಿನೇಶ್ ಪುಂಡಿಮನೆ, ಕುಸುಮಾಧರ ಕೆರೆಯಡ್ಕ,ಲೋಕನಾಥ್ ಕುದ್ವ |ನಮ್ಮ ಮಾತನ್ನು ಪಕ್ಷದ ನಾಯಕರು ಉಳಿಸಿಕೊಂಡಿಲ್ಲ, ದೇವಸ್ಥಾನ ವ್ಯವಸ್ಥೆ ಸರಿದಾರಿಗೆ ತರುವ ಕೆಲಸವಾಗಲಿ: ದಿನೇಶ್ ಪುಂಡಿಮನೆ

News Updates

ಬೆಳ್ತಂಗಡಿ : ಮೊಗ್ರು ಜೈ ಶ್ರೀರಾಮ ಸೇವಾ ಟ್ರಸ್ಟ್ ಅಲೆಕ್ಕಿ -ಮುಗೇರಡ್ಕ ಮೊಗ್ರು, ಶ್ರೀ ರಾಮ ಶಿಶುಮಂದಿರದ 5 ನೇ ವರ್ಷದ ಶ್ರೀ ಕೃಷ್ಣೋತ್ಸವ. |ಕಾಶಿ ಶೆಟ್ಟಿ ನವಶಕ್ತಿ ಗುರುವಾಯನಕೆರೆ ಇವರ ಸ್ಮರಣಾರ್ಥ ಕಾಶಿ ಶೆಟ್ಟಿ ವಿದ್ಯಾ ಮಂದಿರ, ಹಾಗೂ ಶಾಸಕ ಹರೀಶ್ ಪೂಂಜಾರವರ ನೆರವಿನ ಅಡುಗೆ ಕೋಣೆ ಉದ್ಘಾಟನಾ ಕಾರ್ಯಕ್ರಮ |ಮಕ್ಕಳ ಶ್ರೀಕೃಷ್ಣ ಮತ್ತು ರಾಧೆಯರ ಸ್ಪರ್ಧೆ, ಮೊಸರು ಕುಡಿಕೆ, ಆಟೋಟ ಸ್ಪರ್ಧೆ

[t4b-ticker]
error: Content is protected !!