ನಟ ವಿಜಯ್ ರ್‍ಯಾಲಿಯಲ್ಲಿ ಕಾಲ್ತುಳಿತ| ಕನಿಷ್ಠ 29 ಸಾವು; 50ಕ್ಕೂ ಹೆಚ್ಚು ಮಂದಿಗೆ ಗಾಯ

Picture of Savistara

Savistara

Bureau Report

ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಅಧ್ಯಕ್ಷ ಹಾಗೂ ಜನಪ್ರಿಯ ನಟ ವಿಜಯ್ ಅವರ ರಾಜ್ಯ ಪ್ರವಾಸದ ಅಂಗವಾಗಿ ಕರೂರಿನಲ್ಲಿ ಶನಿವಾರ ನಡೆದ ಸಾರ್ವಜನಿಕ ಸಭೆಯಲ್ಲಿ ಕಾಲ್ತುಳಿತ ಸಂಭವಿಸಿ ಕನಿಷ್ಠ 29 ಮೃತಪಟ್ಟು, 50ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿದೆ ಎಂದು ವರದಿಯಾಗಿದೆ.ಮೃತಪಟ್ಟವರಲ್ಲಿ ಮೂವರು ಮಕ್ಕಳು ಕೂಡ ಸೇರಿದ್ದಾರೆ. ಆರಂಭದಲ್ಲಿ 10 ಮಂದಿ ಮೃತಪಟ್ಟಿದ್ದಾರೆ ಎಂದು ಹೇಳಲಾಗಿತ್ತು. ಬಳಿಕ ಸಾವಿನ ಸಂಖ್ಯೆ ಹೆಚ್ಚಾಗಿದೆ. ಈಗಾಗಲೇ 50ಕ್ಕೂ ಹೆಚ್ಚು ಮಂದಿ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.“ಇದುವರೆಗೆ ಕನಿಷ್ಠ 29 ಮಂದಿ ಮೃತಪಟ್ಟಿದ್ದು, 50ಕ್ಕೂ ಹೆಚ್ಚು ಮಂದಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ತಿರುಚಿಯಿಂದ 24 ವೈದ್ಯರು ಮತ್ತು ಸೇಲಂನಿಂದ 20 ವೈದ್ಯರನ್ನು ತುರ್ತಾಗಿ ಕರೂರಿಗೆ ಕಳುಹಿಸಲಾಗಿದೆ,” ಎಂದು ತಮಿಳುನಾಡು ಆರೋಗ್ಯ ಸಚಿವ ಮಾ. ಸುಬ್ರಮಣಿಯನ್ ಅವರು ಮಾಧ್ಯಮಗಳಿಗೆ ನೀಡಿದ ಪ್ರತಿಕ್ರಿಯೆಯಲ್ಲಿ ತಿಳಿಸಿದ್ದಾರೆ.

News Updates

BREAKING NEWS ಸುಳ್ಯ :ಪಂಜ ಕಾಂಗ್ರೆಸ್ ಪಕ್ಷದ ಹುದ್ದೆಗೆ ರಾಜಿನಾಮೆ ನೀಡಿದ ದಿನೇಶ್ ಪುಂಡಿಮನೆ, ಕುಸುಮಾಧರ ಕೆರೆಯಡ್ಕ,ಲೋಕನಾಥ್ ಕುದ್ವ |ನಮ್ಮ ಮಾತನ್ನು ಪಕ್ಷದ ನಾಯಕರು ಉಳಿಸಿಕೊಂಡಿಲ್ಲ, ದೇವಸ್ಥಾನ ವ್ಯವಸ್ಥೆ ಸರಿದಾರಿಗೆ ತರುವ ಕೆಲಸವಾಗಲಿ: ದಿನೇಶ್ ಪುಂಡಿಮನೆ

News Updates

ಬೆಳ್ತಂಗಡಿ : ಮೊಗ್ರು ಜೈ ಶ್ರೀರಾಮ ಸೇವಾ ಟ್ರಸ್ಟ್ ಅಲೆಕ್ಕಿ -ಮುಗೇರಡ್ಕ ಮೊಗ್ರು, ಶ್ರೀ ರಾಮ ಶಿಶುಮಂದಿರದ 5 ನೇ ವರ್ಷದ ಶ್ರೀ ಕೃಷ್ಣೋತ್ಸವ. |ಕಾಶಿ ಶೆಟ್ಟಿ ನವಶಕ್ತಿ ಗುರುವಾಯನಕೆರೆ ಇವರ ಸ್ಮರಣಾರ್ಥ ಕಾಶಿ ಶೆಟ್ಟಿ ವಿದ್ಯಾ ಮಂದಿರ, ಹಾಗೂ ಶಾಸಕ ಹರೀಶ್ ಪೂಂಜಾರವರ ನೆರವಿನ ಅಡುಗೆ ಕೋಣೆ ಉದ್ಘಾಟನಾ ಕಾರ್ಯಕ್ರಮ |ಮಕ್ಕಳ ಶ್ರೀಕೃಷ್ಣ ಮತ್ತು ರಾಧೆಯರ ಸ್ಪರ್ಧೆ, ಮೊಸರು ಕುಡಿಕೆ, ಆಟೋಟ ಸ್ಪರ್ಧೆ

[t4b-ticker]
error: Content is protected !!