ಇಂದು ರಾಜ್ಯದ ಕೆಲವೆಡೆ ಭಾರಿ ಮಳೆ ಸಾಧ್ಯತೆ: ಹವಾಮಾನ ಇಲಾಖೆ ಮುನ್ಸೂಚನೆ

Picture of Savistara

Savistara

Bureau Report

ಬೆಂಗಳೂರು: ಕರಾವಳಿ ಹಾಗೂ ಉತ್ತರ ಒಳನಾಡಿನ ಜಿಲ್ಲೆಗಳ ಕೆಲವೆಡೆ ಭಾನುವಾರ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಯ ಒಂದೆರಡು ಸ್ಥಳಗಳಲ್ಲಿ ಭಾರಿ ಮಳೆಯಾಗುವ ಸಂಭವವಿದೆ. ಉತ್ತರ ಒಳನಾಡಿನ ಕಲಬುರಗಿ, ಯಾದಗಿರಿ, ವಿಜಯಪುರ, ಬೆಳಗಾವಿ ಮತ್ತು ಬಾಗಲಕೋಟೆ ಜಿಲ್ಲೆಯ ಒಂದೆರಡು ಸ್ಥಳಗಳಲ್ಲಿ ಗಂಟೆಗೆ 30ರಿಂದ 40 ಕಿ.ಮೀ ವೇಗದಲ್ಲಿ ಗಾಳಿಯೊಂದಿಗೆ, ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ತಿಳಿಸಿದೆ.ಬೀದ‌ರ್, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು ಜಿಲ್ಲೆಯ ಹಲವೆಡೆ ಬಿರುಗಾಳಿ ಸಹಿತ ಸಾಧಾರಣ ಮಳೆಯಾಗುವ ಸಂಭವವಿದೆ. ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಮತ್ತು ವಿಜಯನಗರ ಜಿಲ್ಲೆಯ ಕೆಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.ಸೋಮವಾರದಿಂದ ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿಯೂ ಸಾಧಾರಣ ಮಳೆಯಾಗಲಿದ್ದು, ರಾಜ್ಯದ ವಿವಿಧೆಡೆ ಅ.3ರವರೆಗೂ ಮಳೆ ಮುಂದುವರಿಯಲಿದೆ ಎಂದು ಇಲಾಖೆ ತಿಳಿಸಿದೆ.

News Updates

BREAKING NEWS ಸುಳ್ಯ :ಪಂಜ ಕಾಂಗ್ರೆಸ್ ಪಕ್ಷದ ಹುದ್ದೆಗೆ ರಾಜಿನಾಮೆ ನೀಡಿದ ದಿನೇಶ್ ಪುಂಡಿಮನೆ, ಕುಸುಮಾಧರ ಕೆರೆಯಡ್ಕ,ಲೋಕನಾಥ್ ಕುದ್ವ |ನಮ್ಮ ಮಾತನ್ನು ಪಕ್ಷದ ನಾಯಕರು ಉಳಿಸಿಕೊಂಡಿಲ್ಲ, ದೇವಸ್ಥಾನ ವ್ಯವಸ್ಥೆ ಸರಿದಾರಿಗೆ ತರುವ ಕೆಲಸವಾಗಲಿ: ದಿನೇಶ್ ಪುಂಡಿಮನೆ

News Updates

ಬೆಳ್ತಂಗಡಿ : ಮೊಗ್ರು ಜೈ ಶ್ರೀರಾಮ ಸೇವಾ ಟ್ರಸ್ಟ್ ಅಲೆಕ್ಕಿ -ಮುಗೇರಡ್ಕ ಮೊಗ್ರು, ಶ್ರೀ ರಾಮ ಶಿಶುಮಂದಿರದ 5 ನೇ ವರ್ಷದ ಶ್ರೀ ಕೃಷ್ಣೋತ್ಸವ. |ಕಾಶಿ ಶೆಟ್ಟಿ ನವಶಕ್ತಿ ಗುರುವಾಯನಕೆರೆ ಇವರ ಸ್ಮರಣಾರ್ಥ ಕಾಶಿ ಶೆಟ್ಟಿ ವಿದ್ಯಾ ಮಂದಿರ, ಹಾಗೂ ಶಾಸಕ ಹರೀಶ್ ಪೂಂಜಾರವರ ನೆರವಿನ ಅಡುಗೆ ಕೋಣೆ ಉದ್ಘಾಟನಾ ಕಾರ್ಯಕ್ರಮ |ಮಕ್ಕಳ ಶ್ರೀಕೃಷ್ಣ ಮತ್ತು ರಾಧೆಯರ ಸ್ಪರ್ಧೆ, ಮೊಸರು ಕುಡಿಕೆ, ಆಟೋಟ ಸ್ಪರ್ಧೆ

[t4b-ticker]
error: Content is protected !!