ಜಾತಿವಾರು ಸಮೀಕ್ಷಾ ಕಾರ್ಯದಲ್ಲಿ ಬೇಜವಾಬ್ದಾರಿತನ: ಅಧಿಕಾರಿ ಅಮಾನತು

Picture of Savistara

Savistara

Bureau Report

ಲಿಂಗಸುಗೂರು (ರಾಯಚೂರು ಜಿಲ್ಲೆ): ಸಾಮಾಜಿಕ ಹಾಗೂಶೈಕ್ಷಣಿಕ ಸಮೀಕ್ಷಾ ಕಾರ್ಯದಲ್ಲಿ ನಿರ್ಲಕ್ಷ್ಯ ತೋರಿದ ಆರೋಪದಡಿ ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ರಮೇಶ ರಾಠೋಡ ಅವರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ.

ರಮೇಶ ಜಿ.ರಾಠೋಡ ಸಮೀಕ್ಷಾ ಕಾರ್ಯಕ್ಕೆ ಸಹಕರಿಸುತ್ತಿಲ್ಲ. ಪ್ರಗತಿ ಕುಂಠಿತವಾಗಿದೆ ಎಂದು ತಹಶೀಲ್ದಾರ್ ಸತ್ಯಮ್ಮ ಅವರು ಜಿಲ್ಲಾಧಿಕಾರಿಗೆ ಲಿಖಿತ ದೂರು ನೀಡಿದ್ದರು.ರಮೇಶ ರಾಠೋಡ ಲೋಕಸಭಾ ಚುನಾವಣೆ ವೇಳೆಯೂ ಚುನಾವಣಾ ಕರ್ತವ್ಯದಲ್ಲಿ ನಿರ್ಲಕ್ಷ್ಯ, ಬೇಜವಾಬ್ದಾರಿತನ ತೋರಿದ ಕಾರಣಕ್ಕೆ ಅಮಾನತುಗೊಂಡಿದ್ದರು.

[t4b-ticker]
error: Content is protected !!